ಸಿಸಿಬಿ ಸದೃಢಗೊಳಿಸಲು ಸರ್ಕಾರ ಸಜ್ಜು: 230 ಸಿಬ್ಬಂದಿ ನೇಮಕಾತಿಗೆ ಗ್ರೀನ್‌ ಸಿಗ್ನಲ್‌

ಬೆಂಗಳೂರು, ಸೆಪ್ಟೆಂಬರ್‌ 15: ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್‌.ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್‌ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿಗಳಿಗೆ ನೀಡಿದ ಸೂಚನೆಗಳ ಬಗ್ಗೆ ವಿವರಿಸಿದ ಅವರು, ನೈತಿಕ ಪೊಲೀಸ್ ಗಿರಿ ವಿಚಾರದಲ್ಲಿ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

CM Siddaramaiah Held Meeting With Senior Police Officers

ನಮ್ಮ ಸರ್ಕಾರ ಕೇವಲ‌ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಕೈ ತೊಳೆದುಕೊಳ್ಳುವುದಿಲ್ಲ. ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್‌ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರು ಕೊಡುವವರು ಬರಲಿ ಎಂದು ಕಾಯುತ್ತಾ ಕೂರಬಾರದು ಎನ್ನುವ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.

ಸಿಸಿಬಿಯನ್ನು ಇನ್ನಷ್ಟು ಸದೃಢಗೊಳಿಸಲು 230 ಸಿಬ್ಬಂದಿಯನ್ನು ಹೊಸದಾಗಿ ನೇಮಿಸಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಸಿಬ್ಬಂದಿಗೆ ಅಗತ್ಯವಾದರೆ ಹೊಸ ಕಟ್ಟಡಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ಅಧಿಕಾರಿಗಳು ಜನ ಸಂಪರ್ಕಕ್ಕೆ ಸಿಗದೇ ಹೋದರೆ, ಜನ ಸ್ನೇಹಿ ಆಗದೇ ಹೋದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಠಾಣಾಧಿಕಾರಿಗಳ ಗಮನಕ್ಕೆ ಬರದಂತೆ ಯಾವ ಅಪರಾಧಗಳೂ, ಕರಾಳ ದಂಧೆಗಳೂ ನಡೆಯಲು ಸಾಧ್ಯವಿಲ್ಲ. ಹಿರಿಯ ಅಧಿಕಾರಿಗಳು ಠಾಣೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವುದು ಕಡ್ಡಾಯ. ಪೊಲೀಸರು ದರ್ಪ ಬಿಟ್ಟು ಜನಸ್ನೇಹಿಯಾಗಿ ಕೆಲಸ ಮಾಡಬೇಕು .ಠಾಣೆಗೆ ಬರುವ ಬಡವರು, ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಬಗ್ಗೆ ಭರವಸೆ ಹುಟ್ಟುವ ರೀತಿಯಲ್ಲಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಈ ವೇಳೆ ಗೃಹ ಸಚಿವರಾದ ಜಿ.ಪರಮೇಶ್ವರ್, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತರಾದ ದಯಾನಂದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+