ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೋದು ಫಿಕ್ಸ್: ಭವಿಷ್ಯ ನುಡಿದ ಕೆಎಸ್ ಈಶ್ವರಪ್ಪ
ವಿಜಯಪುರ, ಜುಲೈ 23: ರಾಜ್ಯ ರಾಜಕೀಯದಲ್ಲಿ ಮುಡಾ ಹಾಗೂ ವಾಲ್ಮೀಕಿ ನಿಗಮ ಹಗರಣದ ಕುರಿತು ಸಾಕಷ್ಟು ಚರ್ಚೆಯಾಗುತ್ತಿದೆ. ಈ ಎರಡು ಪ್ರಕರಣದಿಂದಾಗಿ ಸರ್ಕಾರಕ್ಕೆ ಸಂಕಷ್ಟ ಎದುರಾಗಿದ್ದು, ವಾಲ್ಮೀಕಿ ನಿಗಮದ ಹಗರಣದ ಕುರಿತು ಈಗಾಗಲೇ ಮಾಜಿ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೊಡ್ಡ ಸಂಕಷ್ಟ ಎದುರಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ಭವಿಷ್ಯ ನುಡಿದಿದ್ದಾರೆ.
ಮುಡಾ, ವಾಲ್ಮೀಕಿ ನಿಗಮ ಹಗರಣ ಸಂಬಂಧ ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಟ್ಟಿ ಮಾಡಿದ ಬಿಜೆಪಿಯ 22 ಹಗರಣಗಳನ್ನ ಸಿಬಿಐಗೆ ವಹಿಸಲಿ. ಸಿಬಿಐ ತನಿಖೆ ಮಾಡಿ ಕಳ್ಳರು ಯಾರು ಅಂತಾ ಹಿಡಿತಾರೆ. ಲೂಟಿ ಮಾಡಿದವರು ಜೈಲಿಗೆ ಹೋಗ್ತಾರೆ. ಜೈಲಿಗೆ ಹೋಗುವವರ ನಾಯಕತ್ವ ಸಿದ್ದರಾಮಯ್ಯ ತೆಗೆದುಕೊಳ್ಳುವುದರಲ್ಲಿ ಅನುಮಾನವಿಲ್ಲ ಎಂದು ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಸರ್ಕಾರದಲ್ಲಿ ವಾಲ್ಮೀಕಿ ನಿಗಮ, ಮುಡಾ ಹಗರಣ ನಡೆದಿದೆ. ಪ್ರಕರಣಗಳನ್ನು ಸಿಬಿಐಗೆ ನೀಡಿ, ನೀವು ರಾಜೀನಾಮೆ ತನಿಖೆ ಮುಗಿದು ಕ್ಲಿನ್‌ಚೀಟ್ ಪಡೆದು ಬೇಕಾದರೆ ಮತ್ತೆ ಅಧಿಕಾರಕ್ಕೆ ಬನ್ನಿ. ಸಿದ್ದರಾಮಯ್ಯ ಸತ್ಯಹರಿಶ್ಚಂದ್ರ ನಾನೇ ಅಂತ ಹೇಳ್ಕೊಕೊಳ್ತಿದ್ರು. ಆದರೀಗ ಕಾಂಗ್ರೆಸ್ ಸರ್ಕಾರ ನೇರವಾಗಿ ಬಹಿರಂಗವಾಗಿ ಎರಡು ಹಗರಣಗಳಲ್ಲಿ ಬೆತ್ತಲಾಗಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳೇ ನೇರ ಭಾಗಿಯಾಗಿದ್ದಾರೆ. ಅದನ್ನು ಮುಚ್ಚಿಕೊಳ್ಳಲು ಬಿಜೆಪಿ ಭ್ರಷ್ಟಾಚಾರದ ತನಿಖೆ ಮಾಡ್ತೇವೆ ಎಂದು ವರಸೆ ತೆಗೆದಿದ್ದಾರೆ.
ಇನ್ನೂ ಬಿಜೆಪಿ ಭ್ರಷ್ಟಾಚಾರದ ಪಟ್ಟಿಯಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಹೆಸರು ತಂದಿದ್ದಕ್ಕೆ ವಾಗ್ದಾಳಿ ನಡೆಸಿದ ಅವರು, ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೆಸರು ಬಂದಿರೋದಕ್ಕೆ ನೊಂದಿದ್ದೇನೆ. ಕೋಟಾ ಶ್ರೀನಿವಾಸ್ ಪೂಜಾರಿ ಪ್ರಾಮಾಣಿಕ ರಾಜಕಾರಣಿ ಇದು ಬಹಳ ಅನ್ಯಾಯ, ಕೋಟಾ ಶ್ರೀನಿವಾಸ್ ಹೆಸರಿನ ಪಟ್ಟಿ ವಾಪಸ್ ಪಡೆದು ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಕ್ಷಮೆ ಕೇಳಲಿ ಎಂದು ಆಗ್ರಹಿಸಿದರು.












Click it and Unblock the Notifications