ರಾಜೀನಾಮೆ ಕೊಟ್ಟು ಹೋಗ್ತಾ ಇರು: ಸಿದ್ದರಾಮಯ್ಯ ಖಡಕ್ ಸೂಚನೆ ಕೊಟ್ಟಿದ್ದು ಯಾರಿಗೆ?

ಬೆಂಗಳೂರು, ಸೆಪ್ಟೆಂಬರ್‌ 03: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಲವು ಇಲಾಖೆಯಲ್ಲಿ ಭ್ರಷ್ಟ್ರಚಾರದ ಆರೋಪಗಳು ಕೇಳಿ ಬಂದಿದೆ. ಸದ್ಯ ರಾಜ್ಯ ರಾಜಕೀಯಲ್ಲಿ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರ ಡೀಲ್ ವೀಡಿಯೋ ವೈರಲ್ ಆಗಿದ್ದು, ಈ ಭ್ರಷ್ಟಚಾರದ ಕುರಿತು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ದ ವಿಪಕ್ಷಗಳು ವಾಗ್ದಾಳಿ ನಡೆಸಿವೆ. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ವಿಪಕ್ಷಗಳ ನಾಯಕರು ಆಗ್ರಹಿಸಿದ್ದಾರೆ.

ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಡೀಲ್ ಗಾಗಿ ನಡೆಸಿದಂತ ವೀಡಿಯೋ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರ ಡೀಲ್ ವೀಡಿಯೋ ವೈರಲ್ ವೀಡಿಯೋ ಕೇಳಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗರಂ ಆಗಿದ್ದಾರೆ. ಅಲ್ಲದೇ ವೀಡಿಯೋ ವೈರಲ್ ಬೆನ್ನಲ್ಲೇ ರಾಜೀನಾಮೆ ಕೊಟ್ಟು ಹೋಗ್ತಾ ಇರು ಎಂಬುದಾಗಿ ವಾರ್ನಿಂಗ್ ಮಾಡಿರುವುದಾಗಿ ಹೇಳಲಾಗುತ್ತಿದೆ ತಿಳಿದು ಬಂದಿದೆ.

CM Siddaramaiah issues stern warning to Bhovi Corporation Chairman

ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರ ವೈರಲ್ ವೀಡಿಯೋಗೆ ವಿವರಣೆ ಕೊಡೋದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ರವಿಕುಮಾರ್ ಮುಂದಾಗಿದ್ದರು. ಆದರೇ ಅವರ ವಿವರಣೆ ಕೇಳದೇ ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಟ್ಟು ಹೋಗುವ ಎಂಬುದಾಗಿ ಸೂಚಿಸಿದ್ದಾರೆ ಎನ್ನಲಾಗಿದೆ. ಇನ್ನೂ ಭೋವಿ ಸಮುದಾಯದ ಮುಖಂಡ ವೆಂಕಟೇಶ್ ಸುದ್ದಿಗೋಷ್ಠಿ ನಡೆಸಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಡೀಲ್ ವೀಡಿಯೋ ಬಿಡುಗಡೆ ಮಾಡಿದ್ದರು. ಬಿಡುಗಡೆಯಾದಂತ ವೀಡಿಯೋದಲ್ಲಿ ಫಲಾನುಭವಿಗಳಿಂದ ಪರ್ಸೆಂಟೇಜ್ ಗಾಗಿ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರ ಡಿಮ್ಯಾಂಡ್ ಮಾಡಿದ್ದು ಕಂಡು ಬಂದಿದ್ದು, ವಿಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ.

ಸರ್ಕಾರದ ಭ್ರಷ್ಟಾಚಾರ ಬಯಲು; ಆರ್‌ ಅಶೋಕ್‌ ಹೇಳಿದ್ದೇನು?

ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ಮತ್ತೊಂದು ಭ್ರಷ್ಟಾಚಾರ ಬಯಲಿಗೆ ಬಂದಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಹಣವನ್ನ ತೆಲಂಗಾಣ ಚುನಾವಣೆಗೆ, ಲೋಕಸಭೆ ಚುನಾವಣೆಗೆ ಬಳಸಿಕೊಂಡು ನುಂಗಿ ನೀರು ಕುಡಿದಿದ್ದಾಯ್ತು. ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಬಳಕೆಯಾಗಬೇಕಾಗಿದ್ದ SCSP/TSP ನಿಧಿಯಲ್ಲಿ ಪ್ರತಿ ವರ್ಷ 15,000 ಕೋಟಿ ರೂಪಾಯಿ ಹಣವನ್ನ ಬೇರೆಡೆ ವರ್ಗಾಯಿಸಿ ದಲಿತರಿಗೆ ಅನ್ಯಾಯ ಮಾಡಿದ್ದಾಯ್ತು. ಈಗ ಬೋವಿ ಅಭಿವೃದ್ಧಿ ನಿಗಮದಲ್ಲಿ ಫಲಾನುಭವಿಗಳಿಗೆ ಹಣ ನೀಡಲು ನಿಗಮದ ಅಧ್ಯಕ್ಷರು ಕಮಿಷನ್ ಕೇಳುತ್ತಿರುವ ಹಗರಣ ಬಲಿಯಾಗಿದೆ ಎಂದು ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

ಭೂ ಒಡೆತನ ಯೋಜನೆಯಡಿ ಭೂಮಿ ಮಂಜೂರಾದವರಿಗೆ 25 ಲಕ್ಷ ಹಣ ಬಿಡುಗಡ ಸಹಾಯಧನ ಬಿಡುಗಡೆ ಮಾಡಲು 5 ಲಕ್ಷ ಕಮಿಷನ್ ಗೆ ಬೇಡಿಕೆ ಇಟ್ಟಿರುವ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಕಾಂಗ್ರೆಸ್‌ ಸರ್ಕಾರದಲ್ಲಿ ತಾಂಡವವಾಡುತ್ತಿರುವ ಕಮಿಷನ್ ದಂಧೆ, ಲಂಚಗುಳಿತನ, ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಕನ್ನಡಿ ಹಿಡಿದಿದ್ದಾರೆ. ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರವನ್ನ ಸ್ವತಃ ತಾವೇ ಸದನದಲ್ಲಿ ಒಪ್ಪಿಕೊಂಡಿದ್ದೀರಿ. ಅಂಗೈ ಹುಣ್ಣಿಗೆ ಕನ್ನಡಿ ಬೇಕೇ ಎಂಬಂತೆ SCSP/TSP ಹಣದ ದುರ್ಬಳಕೆ ಎಗ್ಗಿಲ್ಲದೆ ನಡೆಯುತ್ತಲೇ ಇದೆ. ಈಗ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆಯುತ್ತಿರುವ ಅಕ್ರಮ ಸಾಕ್ಷಿ ಸಮೇತ ಬಹಿರಂಗವಾಗಿದೆ. ಇಷ್ಟಾದರೂ ತಾವು ಕುರ್ಚಿಗೆ ಅಂಟಿಕೊಂಡು ಕೂರುತ್ತೀರಿ ಎಂದರೆ ನಿಮ್ಮ ಭಂಡತನಕ್ಕೆ ನೀವೇ ಸಾಟಿ. ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ, ನೈತಿಕತೆ ಇದ್ದರೆ ತಾವು ಇನ್ನೊಂದು ಕ್ಷಣವೂ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಬಾರದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+