ಗೌಡರ ತವರು ಜಿಲ್ಲೆಯಲ್ಲಿ ಸಿಎಂ ಜನತಾದರ್ಶನ

ಹಾಸನ, ಅ.8 : ಸೋಮವಾರ ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಸದ್ಯ ಜೆಡಿಎಸ್ ಭದ್ರಕೋಟೆ ಹಾಸನ ಜಿಲ್ಲೆಗೆ ಲಗ್ಗೆ ಇಟ್ಟಿದ್ದಾರೆ. ಮಂಗಳವಾರ ಹಾಸನ ಜಿಲ್ಲೆಯಲ್ಲಿ ಸಿಎಂ ಜನರ ಅಹವಾಲು ಸ್ವೀಕರಿಸಿದ್ದಾರೆ.

ಮಂಗಳವಾರ ಹೊಳೆನರಸೀಪುರ ಮಾರ್ಗವಾಗಿ ಹಾಸನಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಹಾಸನಾಂಬ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

siddaramaiah

ಜನತಾದರ್ಶನದಲ್ಲಿ ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸಿಎಂ ಪರಿಹಾರ ಸೂಚಿಸಿದರು. ವರ್ಗಾವಣೆ, ಸಹಾಯ ಮುಂತಾದ ಸಮಸ್ಯೆಗಳ ದೂರನ್ನು ಅಧಿಕಾರಿಗಳಿಗೆ ಹತ್ತಾಂತರಿಸಿ ತಕ್ಷಣ ಪರಿಹರಿಸುವಂತೆ ಆದೇಶ ನೀಡಿದರು.

ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಪಂಚಾಯತ್ ಮುಖ್ಯ ಕಾರ್ಯದರ್ಶಿ , ಜಿಲ್ಲಾಧಿಕಾರಿ, ಪಂಚಾಯತ್ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿದ್ದರಾಮಯ್ಯ, ಮಳೆಯಿಂದ ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಲು ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚನೆ ನೀಡಿದರು.

ಪ್ರೌಢಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.

ಗುಂಡ್ಯಾ ವಿವಾದ : ಸಕಲೇಶಪುರದ ಬಳಿ ನಿರ್ಮಿಸುತ್ತಿರುವ ಗುಂಡ್ಯಾ ಜಲವಿದ್ಯುತ್ ಯೋಜನೆಯನ್ನು ಸಕಲೇಶಪುರ ಜನಪರ ವೇದಿಕೆ ತೀವ್ರವಾಗಿ ವಿರೋಧಿಸಿದೆ. ಜನತಾ ದರ್ಶನ ಕಾರ್ಯಕ್ರಮದಲ್ಲಿ ಈ ಕುರಿತು ಸಿಎಂಗೆ ವೇದಿಕೆ ಮನವಿ ಸಲ್ಲಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+