'ಸಾಧನೆಯ ಸಂಭ್ರಮ' ಹೆಸರಿನಲ್ಲಿ ಸಿದ್ದರಾಮಯ್ಯ ರಾಜ್ಯ ಪ್ರವಾಸ

Posted By:
Subscribe to Oneindia Kannada

ಬೆಂಗಳೂರು, ಡಿಸೆಂಬರ್ 5:'ಸಾಧನೆಯ ಸಂಭ್ರಮ' ಹೆಸರಿನಲ್ಲಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜ್ಯ ಪ್ರವಾಸದ ಪಟ್ಟಿ ಬಿಡುಗಡೆಗೊಂಡಿದ್ದು, ಡಿಸೆಂಬರ್ 19ರಿಂದ ಜನವರಿ 13ರ ವರೆಗೆ ಪ್ರವಾಸ ಕೈಗೊಳ್ಳಲಿದ್ದಾರೆ.

ಸಿದ್ದರಾಮಯ್ಯ ಪ್ರವಾಸ ಮಾಡಿರುವ ಜಿಲ್ಲೆಗಳು: ವಿಜಯಪುರ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಗದಗ, ದಾವಣಗೆರೆ, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ, ಕೋಲಾರ, ರಾಮನಗರ, ಕೊಡಗು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಪುರ, ಹಾಸನ, ಶಿವವೊಗ್ಗ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರವಾಸ ಕೈಗೊಳ್ಳಲಿದ್ದಾರೆ.

ಬಿಜೆಪಿ ಯಾತ್ರೆಗೆ ಸೆಡ್ಡು ಹೊಡೆಯಲು, ಸಿದ್ದರಾಮಯ್ಯ ಪ್ರತಿತಂತ್ರ!

CM Siddaramaiah karnataka tour from December 19 to Jan 13 under Janashirvada Yatra

ಏನಿದು 'ಸಾಧನೆಯ ಸಂಭ್ರಮ'?: ಜನಾಶೀರ್ವಾದ ಬದಲು ಸಾಧನೆಯ ಸಂಭ್ರಮ ಹೆಸರಿನಲ್ಲಿ ಮೇಲೆ ತಿಳಿಸಲಾಗಿರುವ ಜಿಲ್ಲೆಗಳಿಗೆ ಭೇಟಿ ನೀಡಿ ಸರ್ಕಾರದ ವಿವಿಧ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದೊಂದು ಸರ್ಕಾರಿ ಪ್ರವಾಸವಾಗಿದ್ದು, ಇದರಲ್ಲಿ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಭಾಗವಹಿಸಲಿದ್ದಾರೆ.

ಚುನಾವಣೆ ಗಿಮಿಕ್: ಜನಾಶೀರ್ವಾದದಲ್ಲಿ ಸಿದ್ದರಾಮಯ್ಯ ಅವರು ಏಕಪಕ್ಷೀಯ ನಿರ್ಧಾರ ಸರಯಲ್ಲವೆಂದು ಕೆಪಿಸಿಸಿ ಅಧ್ಯಕ್ಷ ಡಾ,ಜಿ ಪರಮೇಶ್ವರ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಇದರಿಂದ ಜನಾಶೀರ್ವಾದ ಬದಲಿಗೆ 'ಸಾಧನೆಯ ಸಂಭ್ರಮ' ಹೆಸರಿನಲ್ಲಿ ರಾಜ್ಯ ಪ್ರವಾಸ ಕೈಗೊಳ್ಳಿದ್ದಾರೆ. ಸರ್ಕಾರದ 'ಸಾಧನೆಯ ಸಂಭ್ರಮ' ಹೆಸರಿನಲ್ಲಿಯೇ ಚುನಾವಣೆ ಪ್ರಚಾರ ನಡೆಸಲಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

2018ರ ವಿಧಾನಸಭಾ ಚುನಾವಣೆ ಇನ್ನೇನು ಹತ್ತಿರವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಚುನಾವಣೆ ಚಟುವಟಿಕೆಗಳು ಗದಿಗೆದರಿವೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಈ ಬಾರಿ ಶತಾಯಶತಾಯವಾಗಿ ಅಧಿಕಾರದ ಚುಕ್ಕಾಣಿ ಹಿಡಿಯಲು ನಾನಾ ಕಸರತ್ತು ಆರಂಭಿಸಿವೆ.

ಇದಕ್ಕೆ ಪೂರಕವೆಂಬಂತೆ ಬಿಜೆಪಿ ರಾಜ್ಯಾದ್ಯಂತ ಪರಿವರ್ತಾನ ಯಾತ್ರೆ ಆರಂಭಿಸಿದ್ದು, ಜೆಡಿಎಸ್ ಕುಮಾರಪರ್ವ ಆರಂಭಿಸಿದೆ. ಇನ್ನು ಆಡಳಿತ ರೂಢ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಎರಡು ಪಕ್ಷಗಳಿಗೆ ಸೆಡ್ಡು ಹೊಡೆಯಲು 'ಸಾಧನೆಯ ಸಂಭ್ರಮ' ಹೆಸರಿನಲ್ಲಿ ಚುನಾವಣೆ ಪ್ರಚಾರ ಆರಂಭಿಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
CM Siddaramaiah karnataka tour start from December 19 to Jan 13.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ