ಬಿಜೆಪಿಯವರಿಗೆ ಆಪರೇಷನ್ ಕಮಲದ ರುಚಿ ಹತ್ತಿದೆ : ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?

ಬೆಂಗಳೂರು, ಜನವರಿ 11: ಬಿಜೆಪಿಯವರಿಗೆ ಜನಾದೇಶದ ಸರ್ಕಾರವನ್ನು ಉರುಳಿಸಿ ಅಧಿಕಾರಕ್ಕೆ ಬಂದು ಹಣ ತಿನ್ನುವ ರುಚಿ ಹತ್ತಿದೆ. ಹೀಗಾಗಿ ಮತ್ತೆ ಮತ್ತೆ ಸರ್ಕಾರ ಬೀಳಿಸುವ ಪ್ರಯತ್ನಕ್ಕೆ ಕೈ ಹಾಕುತ್ತಲೇ ಇರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕರ್ತರನ್ನು ಎಚ್ಚರಿಸಿದರು.

ಈ ಕುರಿತು ಬುಧವಾರ ಮಾತನಾಡಿದ ಅವರು, ನಮ್ಮ ಗ್ಯಾರಂಟಿಗಳನ್ನು ಅಣಕಿಸಿ ಈಗ ನಮ್ಮ ಗ್ಯಾರಂಟಿಗಳನ್ನೇ ಕಾಪಿ ಮಾಡಿ ಅದಕ್ಕೆ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಬಿಜೆಪಿ ಯವರು ಅಷ್ಟು ನಿರ್ಲಜ್ಜರಾಗಿದ್ದಾರೆ. ದಯವಿಟ್ಟು ನಿಮ್ಮ ಹೃದಯದ ಮಾತು ಕೇಳಿ.

CM Siddaramaiah Lashed Out At BJPs Operation Kamal

ಸರ್ಕಾರದ ಕೆಲಸಗಳನ್ನು ಪ್ರತಿ ಮನೆಗೆ ತಲುಪಿಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರ ಸುಳ್ಳನ್ನು ಸೋಲಿಸಿ ನಮ್ಮ ಸಾಧನೆಗಳನ್ನು ಎತ್ತಿ ಹಿಡಿಯುವ ಮೂಲಕ 28 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಮುಖ್ಯಮಂತ್ರಿಗಳು ಕೈ ಮುಗಿದು ಕರೆ ನೀಡಿದರು

ರಾಜ್ಯದ 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ ಬಿಜೆಪಿಯವರೇ ಹೆಚ್ಚಿದ್ದಾರೆ. ಪಕ್ಷದ ಕಾರ್ಯಕರ್ತರೇ ನಮ್ಮ ಬೆನ್ನೆಲುಬು. ನಿಮ್ಮ ಹೋರಾಟದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ.

ವಾಮ ಮಾರ್ಗದಲ್ಲಿ ಮೂರೂವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಮಾಡಬಾರದ್ದನ್ನೆಲ್ಲಾ ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

CM Siddaramaiah Lashed Out At BJPs Operation Kamal

ನೀರಾವರಿ ಇಲಾಖೆಯೊಂದರಲ್ಲೇ 13 ಸಾವಿರ ಕೋಟಿಗೂ ಅಧಿಕ ಬಿಲ್ ಬಾಕಿ ಉಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ 9000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ, ಸಣ್ಣನೀರಾವರಿ ಇಲಾಖೆಯಲ್ಲಿ 2000 ಕೋಟಿ ರೂಪಾಯಿ ಬಿಲ್ ಬಾಕಿ ಉಳಿಸಿದ್ದಾರೆ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 6000 ಕೋಟಿ ರೂಪಾಯಿ ಬಿಲ್ ಬಾಕಿ ಉಳಿಸಿದ್ದಾರೆ, ಬೆಂಗಳೂರು ನಗರ 5000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ. ಹೀಗೆ ರಾಜ್ಯವನ್ನು ಹಾಳುಮಾಡಿ, ರಾಜ್ಯದ ಆರ್ಥಿಕತೆಯನ್ನು ಎಕ್ಕುಡಿಸಿ ಹೋಗಿದ್ದಾರೆ.

ಇಷ್ಟಾದರೂ ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ , ಪ್ರತೀ ತಿಂಗಳು ತಲುಪುತ್ತಿದೆ. ಇದು ನಿಮ್ಮ ಕಾಂಗ್ರೆಸ್ ಸರ್ಕಾರದ ಸಾಧನೆ.

ಇದು ದೇಶದಲ್ಲೇ ಮೊದಲು. ಪ್ರತಿಯೊಬ್ಬ ಕಾರ್ಯಕರ್ತನೂ ಎದೆ ಎತ್ತಿ , ತಲೆ ಎತ್ತಿ ಹೇಳಿ ಎಂದು ಕರೆ ನೀಡಿದರು. ಹೀಗೆ ಬಿಜೆಪಿಯವರು ಚೆನ್ನಾಗಿ ತಿಂದು, ಸಾವಿರಾರು ಕೋಟಿ ಕೆಲಸ ಶುರು ಮಾಡಿಸಿ ಸುಮಾರು 40 ಸಾವಿರ ಕೋಟಿಗೂ ಹೆಚ್ಚು ಬಿಲ್ ಕೊಡದೆ, ಬಿಲ್ ಬಾಕಿ ಉಳಿಸಿ ಮನೆಗೆ ಹೋಗಿದ್ದಾರೆ. ಹೀಗೆ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+