ಸಿಂಧನೂರು: ಸಾಲಗುಂದಾ, ಮುಳ್ಳೂರು ಏತ ನೀರಾವರಿ ಕಾಮಗಾರಿಗಳಿಗೆ ಸಿದ್ದರಾಮಯ್ಯ ಚಾಲನೆ
ರಾಯಚೂರು: ಸಿಎಂ ಸಿದ್ದರಾಮಯ್ಯ ಅವರು ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಶ್ರೀಅಂಬಾಮಠದಲ್ಲಿ ಆಯೋಜಿಸಿದ್ದ ಅಂಬಾ ಮಹೋತ್ಸವ-2026ರಲ್ಲಿ ಪಾಲ್ಗೊಂಡರು. ಇದೇ ವೇಳೆ ಸಿಂಧನೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದರು. ಮೊದಲ ಬಾರಿಗೆ ಅಂಬಾ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದ್ದು, ತಾಯಿಯ ದರ್ಶನವಾಗಿದ್ದು ನನ್ನ ಪುಣ್ಯ. ಇಂದು ಈ ಕ್ಷೇತ್ರದಲ್ಲಿ ಸಾಲಗುಂದಾ ಏತನೀರಾವರಿ, ಮುಳ್ಳೂರು ಏತ ನೀರಾವರಿ ಮತ್ತು ವಳಬಳ್ಳಾರಿ ವಿಯರ್ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು.
ನಾವು ಅಧಿಕಾರಕ್ಕೆ ಬಂದ ಮೇಲೆ ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಎಲ್ಲಾ ನಿಗಮಗಳಡಿ ₹176 ಕೋಟಿಗಳನ್ನು ಒದಗಿಸಲಾಗಿದೆ. ಸಾಲಗುಂದಾ ಏತ ನೀರಾವರಿಗೆ ₹71 ಕೋಟಿ, ಮಳ್ಳೂರು ಏತ ನೀರಾವರಿಗೆ ₹21 ಕೋಟಿ, ಒಳಬಳ್ಳಾರಿ ಏತ ನೀರಾವರಿಗೆ ₹43 ಕೋಟಿಗೂ ಹೆಚ್ಚು ಅನುದಾನವನ್ನು ಒದಗಿಸಲಾಗಿದೆ. ಹಂಪನಗೌಡ ಬಾದರ್ಲಿ ಅವರು ಈ ಕ್ಷೇತ್ರದ ಅಭಿವೃದ್ಧಿಯನ್ನು ಉತ್ತಮವಾಗಿ ಮಾಡುತ್ತಿದ್ದಾರೆ. 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನೀರು ಒದಗಿಸುವ ಪ್ರಯತ್ನದಲ್ಲಿ 30 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಲಾಗಿದೆ. ಉಳಿದ 12 ಲಕ್ಷ ಪ್ರದೇಶಕ್ಕೆ ನೀರು ಒದಗಿಸುವ ಕಾರ್ಯ ವಿವಿಧ ಹಂತಗಳಲ್ಲಿದೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.

₹431 ಕೋಟಿ ವೆಚ್ಚದಲ್ಲಿ ಪಾಪಯ್ಯ ಟನಲ್ ಮತ್ತು ಕಾಲುವೆ ಅಭಿವೃದ್ಧಿಗೆ ಹಾಗೂ ತುಂಗಭದ್ರಾ 33 ಗೇಟ್ ಗಳನ್ನು ಅಳವಡಿಸುವ ಕೆಲಸ ಮಾಡಲಾಗುತ್ತಿದೆ. ಜೂನ್ ಒಳಗೆ ಈ ಕೆಲಸವನ್ನು ಪೂರ್ಣಗೊಳಿಸಿ ಮುಂದಿನ ಮುಂಗಾರು ಬೆಳೆಗೆ ನೀರು ಒದಗಿಸಲಾಗುವುದು. ಎಷ್ಟೇ ವೆಚ್ಚವಾದರೂ ಹೊಸ ಗೇಟ್ ಗಳನ್ನು ಅಳವಡಿಸಿ ನೀರು ಒದಗಿಸುತ್ತೇವೆ ಎಂದು ಭರವಸೆ ನೀಡಿದರು.
ನಮ್ಮ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎನ್ನುವುದು ಅಪ್ಪಟ ಸುಳ್ಳು. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳಿಗೆ ತಡೆ ಉಂಟಾಗಿಲ್ಲ. ಗ್ಯಾರಂಟಿಗಳಿಗೆ ಒಂದು ಲಕ್ಷದ 12 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಶಕ್ತಿ ಯೋಜನೆಯಡಿ 643 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದಕ್ಕಾಗಿ ಸುಮಾರು 16 ಸಾವಿರ ಕೋಟಿ ರೂಪಾಯಿ ವೆಚ್ಚವಾಗಿದೆ. 52,000 ಕೋಟಿ ರೂಪಾಯಿಗಳನ್ನು ಈ ವರ್ಷ ವೆಚ್ಚ ಮಾಡಲಾಗಿದೆ ಎಂದು ವಿವರಿಸಿದರು.
ಒಣ ಭೂಮಿಯ ಎರಡನೇ ರಾಜ್ಯ
ದೇಶದಲ್ಲಿಯೇ ಕರ್ನಾಟಕ ಅತಿ ಹೆಚ್ಚು ಒಣ ಭೂಮಿಯನ್ನು ಹೊಂದಿರುವ ಎರಡನೇ ರಾಜ್ಯ. ಆದ್ದರಿಂದ ರಾಜ್ಯದಲ್ಲಿ ಹೆಚ್ಚಿನ ನೀರಾವರಿ ಯೋಜನೆ ಕೈಗೆತ್ತಿಕೊಂಡು ಹಸಿರು ವಲಯ ಮಾಡುವುದು ನಮ್ಮ ಉದ್ದೇಶ. ಸಿಂಧನೂರು ಮಾತ್ರವಲ್ಲದೆ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಚುರುಕುಗೊಳಿಸಲಾಗುತ್ತಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತಕ್ಕೆ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆಯನ್ನು ಇನ್ನೂ ಹೊರಡಿಸಿಲ್ಲ. 2003 ರಲ್ಲಿಯೇ ಇತ್ಯರ್ಥವಾಗಿ ನಮಗೆ ನ್ಯಾಯ ದೊರಕಿದ್ದರೂ, 173 ಟಿಎಂಸಿ ನೀರನ್ನು ಬಳಕೆ ಮಾಡಬೇಕಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯವನ್ನು ಹೇರಲಾಗಿದೆ ಎಂದರು.
ನೀರಾವರಿ ಯೋಜನೆಗಳ ಮೂಲಕ ಆದಷ್ಟು ಶೀಘ್ರವಾಗಿ ಕಟ್ಟಕಡೆಯ ಭಾಗದ ರೈತರಿಗೆ ನೀರು ಒದಗಿಸುವ ಕೆಲಸವನ್ನು ಮಾಡುತ್ತೇವೆ. ದೇವಸ್ಥಾನದ ಅಭಿವೃದ್ಧಿಗೆ ಮೊದಲನೇ ಹಂತದಲ್ಲಿ ₹6.30 ಕೋಟಿ ಅನುದಾನದ ಪೈಕಿ ₹2 ಕೋಟಿ ಈಗಾಗಲೇ ವೆಚ್ಚ ಮಾಡಲಾಗಿದೆ. ಉಳಿದ ಹಣವನ್ನೂ ಬಿಡುಗಡೆ ಮಾಡಲಾಗುವುದು. ದೇವಸ್ಥಾನ ಮತ್ತು ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ವಿಬಿ ಜಿ ರಾಮ್ ಜಿ ಕಾಯ್ದೆ ವಿರೋಧಿಸುತ್ತೇವೆ
ಮನರೇಗಾ ಯೋಜನೆಗೆ ₹6,000 ಕೋಟಿಗಳನ್ನು ಪ್ರತಿ ವರ್ಷ ಖರ್ಚು ಮಾಡಲಾಗುತ್ತಿತ್ತು. ಆದರೆ ಕೇಂದ್ರದವರು ಈಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಯೋಜನೆಯನ್ನು ಬದಲಾಯಿಸಿ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಜಾರಿ ಮಾಡಿದ್ದಾರೆ. ಬಡವರು, ಮಹಿಳೆಯರು, ದಲಿತರು, ಸಣ್ಣ ರೈತರಿಗೆ ತೀವ್ರ ತೊಡಕುಂಟು ಮಾಡುವ ಈ ಹೊಸ ಕಾಯ್ದೆಯನ್ನು ರಾಜ್ಯ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಎಂದರು.
ವಿಬಿ ಜಿ ರಾಮ್ ಜಿ ಕಾನೂನನ್ನು ರದ್ದು ಮಾಡಿ, ಮನರೇಗಾ ಕಾನೂನು ಪುನರ್ ಸ್ಥಾಪನೆಯಾಗಬೇಕೆಂಬುದೇ ನಮ್ಮ ಉದ್ದೇಶ. ಈ ಕಾನೂನಿನ ಸ್ವರೂಪವನ್ನೇ ಬದಲಾಯಿಸಲಾಗಿದೆ. ಹಿಂದಿನ ಕಾಯ್ದೆ ಪ್ರಕಾರ ಕೇಂದ್ರ ಸರ್ಕಾರ ಪೂರ್ಣ ಅನುದಾನವನ್ನು ಭರಿಸುತ್ತಿತ್ತು. ಆದರೆ ಈಗ ಕೇಂದ್ರವು ಶೇ.60 ರಷ್ಟು ಹಾಗೂ ರಾಜ್ಯ ಸರ್ಕಾರ ಶೇ 40ರಷ್ಟು ಅನುದಾನ ಭರಿಸಬೇಕೆಂಬ ಹೊಸ ನಿಯಮ ತಂದಿರುವುದು ಒಕ್ಕೂಟ ನಿಯಮಕ್ಕೆ ವಿರುದ್ಧ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಜಾರಿಗೊಳಿಸಿದ್ದ ಹಾಗೂ ಜನಪರವಾಗಿದ್ದ ಮನರೇಗಾ ಕಾನೂನನ್ನು 20 ವರ್ಷಗಳ ನಂತರ ಪ್ರಧಾನಿ ಮೋದಿಯವರು ಹೆಸರು ಬದಲಿಸಿ, ವಿಬಿ ಜಿ ರಾಮ್ ಜಿ ಎಂದು ನಾಮಕರಣ ಮಾಡಿದ್ದಾರೆ. ಕೇಂದ್ರದ ಈ ಕ್ರಮವನ್ನು ರಾಜ್ಯದ ಜನರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕು ಎಂದು ಕರೆ ನೀಡಿದರು.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications