CM Siddaramaiah: ಪಂಚ ಗ್ಯಾರಂಟಿಗಳ ಬಗ್ಗೆ ವಿರೋಧ ಪಕ್ಷಗಳ ಆರೋಪಕ್ಕೆ ಜನತೆ ಸೊಪ್ಪು ಹಾಕಲ್ಲ: ಸಿದ್ದರಾಮಯ್ಯ

ಬೆಂಗಳೂರು, ಜೂನ್ 11: ನಮ್ಮ ಪಂಚ ಗ್ಯಾರಂಟಿಗಳ ಬಗ್ಗೆ ವಿರೋಧ ಪಕ್ಷಗಳ ಆರೋಪಕ್ಕೆ ರಾಜ್ಯದ ಜನತೆ ಸೊಪ್ಪು ಹಾಕಲ್ಲ. ಕೊಟ್ಟ ಭರವಸೆ ಈಡೇರಿಸದ ಬಿಜೆಪಿ ನಮಗೆ ಪಾಠ ಮಾಡುವ ಅಗತ್ಯ ಇಲ್ಲ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಭಾನುವಾರ ವಿಧಾನಸೌಧದ ಮುಂದೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗೆ ಗೇಲಿ ಮಾಡುತ್ತಾರೆ. ಆದರೆ ನಾವು ತಲೆ ಕೆಡಿಸಲ್ಲ. ಕುಹುಕದ ಮಾತಿಗೆ ಸೊಪ್ಪು ಹಾಕಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡಿದರು.

CM Siddaramaiah Launches Shakti Scheme Which Provides Free Travel Women In Government Buses

ಯಾವುದೇ ಸಮಾಜ ಅಭಿವೃದ್ಧಿ ಪಥದಲ್ಲಿ ಸಾಗಲು ಪುರುಷರಷ್ಟೇ ಮಹಿಳೆಯರೂ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.ಶಕ್ತಿ ಯೋಜನೆ ಮಹಿಳೆಯರಿಗಾಗಿ ಮಾಡಿರುವ ಕಾರ್ಯಕ್ರಮ. ಸಮಾಜದಲ್ಲಿ ಅರ್ಧದಷ್ಟಿರುವ ಮಹಿಳೆಯರು ಶತಮಾನಗಳಿಂದ ಶೋಷಣೆಗೆ ಒಳಗಾಗಿದ್ದಾರೆ. ಅಲ್ಪಸಂಖ್ಯಾತರು, ಮಹಿಳೆಯರು, ಅವಕಾಶಗಳಿಂದ ಹಾಗೂ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ ಎಂದರು.

ಭಾರತದಲ್ಲಿ ಕೇವಲ 24 ರಷ್ಟು ಮಹಿಳೆಯರು ಮಾತ್ರ ಸಾರ್ವಜನಿಕ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅನೇಕ ಮುಂದುವರೆದ ದೇಶಗಳಲ್ಲಿ ಮಹಿಳೆಯರ ಪಾಳ್ಗೊಳ್ಳುವಿಕೆ ಪ್ರಮಾಣವನ್ನು ತಿಳಿಸಿದ ಮುಖ್ಯಮಂತ್ರಿಗಳು, ಅಮೆರಿಕಾದಲ್ಲಿ ಶೇ 53% ರಷ್ಟು, ಚೈನಾ ದಲ್ಲಿ ಶೇ 54 ರಷ್ಟು, ಆಸ್ಟ್ರೀಲಿಯಾದಲ್ಲಿ ಶೇ 57, ಇಂಡೋನೇಶಿಯಾದಲ್ಲಿ ಶೇ 57 ರಷ್ಟು ಪಾಲ್ಗೊಳ್ಳುತ್ತಾರೆ. ಬಾಂಗ್ಲಾದೇಶದಲ್ಲಿ ಶೇ 30 ರಷ್ಟು ಮಹಿಳೆಯರು ಸಾರ್ವಜನಿಕ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಭಾರತದಲ್ಲಿ ಕೇವಲ 24 ರಷ್ಟು ಮಹಿಳೆಯರು ಮಾತ್ರ ಪಾಲ್ಗೊಳ್ಳುತ್ತಿದ್ದಾರೆ.

ದೇಶದಲ್ಲಿ 2014 ರ ನಂತರ ಶೇ 30 ರಷ್ಟಿದ್ದ ಪ್ರಮಾಣ ಶೇ 24 ಕ್ಕೆ ಇಳಿದಿದೆ ಎಂದರು. ಯಾವ ದೇಶಗಳಲ್ಲಿ ಹೆಚ್ಚು ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ ಆ ದೇಶ ಅಭಿವೃದ್ಧಿಯಾಗುತ್ತದೆ. ಮಹಿಳೆಯರಿಗೆ ಶಕ್ತಿ ತುಂಬಿದಾಗ ಸಮಾಜದಲ್ಲಿ ಆರ್ಥಿಕ ಮತ್ತು ಸಮಾಜಿಕ ಅಸಮಾನತೆಗಳನ್ನು ಕ್ರಮೇಣ ಅಳಿಸಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ಬಡವರ, ಮಧ್ಯಮ ವರ್ಗದವರ ಜೇಬಿಗೆ ಹಣ ಹಾಕಿದರೆ ಆರ್ಥಿಕತೆ ವೇಗ ಪಡೆದುಕೊಳ್ಳುತ್ತದೆ. ಶ್ರೀಮಂತರ ಜೇಬಿಗೆ ಹಣ ಹಾಕಿದರೆ ಆರ್ಥಿಕತೆಗೆ ಅಷ್ಟು ಲಾಭ ಆಗುವುದಿಲ್ಲ. ಆದ್ದರಿಂದ ನಾವು ಬಡವರು, ಮಧ್ಯಮ ವರ್ಗದವರ ಜೇಬಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಹಣ ಹಾಕುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಬರೀ ಶ್ರೀಮಂತರ ಹಿತ ಕಾಯುವ ಬಿಜೆಪಿ ಯವರಿಗೆ ನಮ್ಮ ಕಾಳಜಿ ಸಹಿಸಲು ಆಗುತ್ತಿಲ್ಲ. ನಮ್ಮ ಗುರಿ ಜನರ ಸಂಕಷ್ಟ ತಗ್ಗಿಸುವುದು. ಪ್ರಮಾಣವಚನ ಸ್ವೀಕರಿಸಿ ಕೇವಲ 20 ದಿನಗಳಲ್ಲಿ ಮೊದಲ ಗ್ಯಾರಂಟಿ ಜಾರಿಯಾಗಿ ನಾಡಿನ ಸಮಸ್ತ ಮಹಿಳೆಯರು ಇದರ ಅನುಕೂಲ ಪಡೆಯಲು ಶುರು ಮಾಡಿದ್ದಾರೆ. ಇಡಿ ರಾಜ್ಯದಲ್ಲಿ ಏಕ ಕಾಲಕ್ಕೆ ಶಕ್ತಿ ಯೋಜನೆ ಜಾರಿ ಆಗಿದೆ.

ಈ 20 ದಿನಗಳಲ್ಲಿ ಬಿಜೆಪಿ ಪರಿವಾರ ಸುಳ್ಳಿನ ಮಹಾಪೂರವನ್ನೇ ಹರಿಸಿತು. ನಾವು ವಿಚಲಿತರಾಗಲಿಲ್ಲ. ನಮ್ಮ ಗುರಿ "ನುಡಿದಂತೆ ನಡೆಯುವುದಾಗಿತ್ತು". ಅದನ್ನು ಮಾಡಿದ್ದೇವೆ. ಮಹಿಳೆಯರನ್ನು ಸಶಕ್ತಗೊಳಿಸುವ ಉದ್ದೇಶದಿಂದ ಈ ಯೋಜನೆಗೆ "ಶಕ್ತಿ" ಎಂದು ಹೆಸರಿಡಲಾಗಿದೆ. ದೇಶದ ಅರ್ಧದಷ್ಟಿರುವ ಮಹಿಳೆಯರು ಅಭಿವೃದ್ಧಿಯಲ್ಲಿ ಪಾಲುದಾರರಾಗದೆ ದೇಶದ ಪ್ರಗತಿ ಸಾಧ್ಯವಿಲ್ಲ. ಭಾರತದಲ್ಲಿ ಮಹಿಳಾ ಪಾಲ್ಗೊಳ್ಳುವಿಕೆ ಕಡಿಮೆ ಆಗಿದೆ. ಈ ಪ್ರಮಾಣ ಹೆಚ್ಚಾಗಬೇಕು ಎಂದರು.

ಬಡವರು, ಮಧ್ಯಮ ವರ್ಗದವರಿಗೆ ಸರ್ಕಾರ ಅನುಕೂಲ ಮಾಡಿದರೆ ಬಿಜೆಪಿಯವರು ಸುಳ್ಳುಗಳ ಮೂಲಕ ಗುಲ್ಲೆಬ್ಬಿಸಿ ಗೊಂದಲ ಸೃಷ್ಟಿಸುತ್ತಾರೆ. ಮಾಧ್ಯಮದವರು ಬಿಜೆಪಿಯವರ ಜತೆ ಸೇರಿ ಗೊಂದಲ ಹೆಚ್ಚಿಸಬಾರದು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಶಿಫಾರಸ್ಸಿನಂತೆ ಮೊನ್ನೆ ವಿದ್ಯುತ್ ದರ ಹೆಚ್ಚಳವಾಗಿದೆ. ಆದರೆ, ನಾವೇ ವಿದ್ಯುತ್ ದರ ಹೆಚ್ಚಿಸಿದೆವು ಎನ್ನುವ ಪರಮ ಸುಳ್ಳನ್ನು ಬಿಜೆಪಿ ಪರಿವಾರ ಹರಡಿಸುತ್ತಿದೆ ಎಂದು ಮುಖ್ಯಮಂತ್ರಿಗಳು ಟೀಕಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+