CM Siddarmaiah: ಮಕರ ಸಂಕ್ರಾಂತಿಗೆ ಎಲ್ಲ ಶಾಸಕರಿಗೆ ಸಿದ್ದರಾಮಯ್ಯ ಸಿಹಿ ಸುದ್ದಿ
ಬೆಂಗಳೂರು, ಜನವರಿ 14: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಭರವಸೆಗಳು ಜಾರಿಯಾದ ಬಳಿಕ ಆರ್ಥಿಕತೆ ಪೆಟ್ಟು ಬಿದ್ದಿದೆ. ಸರ್ಕಾರದ ಬಳಿಕ ಅಭಿವೃದ್ಧಿ ಹಣ ಇಲ್ಲ ಎಂಬ ಮಾತುಗಳು ಕೇಳಿ ಬಂದವು. ಈ ಬಗ್ಗೆ ಕೆಲವು ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದೂ ಇದೆ. ಇದೀಗ ಈ ಗೊಂದಲ, ಆರೋಪಗಳಿಗೆ ತೆರೆ ಎಳೆಯುವ ಸಣ್ಣ ಪ್ರಯತ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ್ದಾರೆ. ಶಾಸಕರಿಗೆ 10 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮೂಲಕ ಮಕರ ಸಂಕ್ರಾಂತಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಕೇವಲ ಕಾಂಗ್ರೆಸ್ ಶಾಸಕರು ಮಾತ್ರವಲ್ಲದೇ ಬಿಜೆಪಿ, ಜೆಡಿಎಸ್ ಶಾಸಕರು ಸೇರಿದಂತೆ ಎಲ್ಲ ಶಾಸಕರಿಗೂ ತಲಾ 10 ಕೋಟಿ ರೂಪಾಯಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಸಹಿ ಹಾಕಿದ್ದಾರೆ. ಗ್ಯಾರೆಂಟಿ ಯೋಜನೆಗಳು ಜಾರಿಯಾದ ಬಳಿಕ ತಮ್ಮ ಕ್ಷೇತ್ರಗಳಿಗೆ ಅನುದಾನ ನೀಡುತ್ತಿಲ್ಲ ಎಂದು ಶಾಸಕ ಅಸಮಾಧಾನ ವ್ಯಕ್ತಪಡಿಸಿದ್ದರು. ಇದು ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿ ಹಿನ್ನಡೆ ಸಂಕೇತ ಎಂದೆಲ್ಲ ವಿಪಕ್ಷಗಳು ಆರೋಪಿಸಿದ್ದವು.

ವಿಪಕ್ಷಗಳ ಟೀಕೆಗೆ ತಿರುಗೇಟು ನೀಡುವ ನಿಟ್ಟಿನಲ್ಲಿ ಎಲ್ಲ ಶಾಸಕರಿಗೆ ಹತ್ತು ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಸೋಮವಾರ ಸರಣಿ ಸಭೆ ನಡೆದವು. ಈ ವೇಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ವೇಳೆ ಶಾಸಕರ ಬಹಳ ದಿನಗಳಿಂದ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು. ಕೂಡಲೇ ಅನುದಾನ ಬಿಡುಗಡೆ ಸರ್ಕಾರ ಕ್ರಮ ವಹಿಸಬೇಕು ಎಂದು ಕೋರಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಾಸಕರಿಗೆ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಕಡತಗಳಿಗೆ ಸಹಿ ಹಾಕಲಾಗಿದೆ. ಎಲ್ಲ ಪಕ್ಷಗಳ ಹಾಲಿ ಶಾಸಕರಿಗೆ 10 ಕೋಟಿ ರೂಪಾಯಿ ಒದಗಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಸಿಎಂ ಹೀಗೆ ಹೇಳುತ್ತಿದ್ದಂತೆ ಇಷ್ಟು ಅನುದಾನ ಸಾಕಾಗುವುದಿಲ್ಲ ಎಂದು ಮತ್ತೆ ಅಸಮಾಧಾನ ವ್ಯಕ್ತಪಡಿಸಿದರು. ಇಷ್ಟು ಹಣದಲ್ಲಿ ಕ್ಷೇತ್ರ ಅಭಿವೃದ್ಧಿ ಹೇಗೆ ಮಾಡಲಾಗುತ್ತದೆ. ಈಗಾಗಲೇ ಕೆಲವು ಕೆಲಸಗಳು ಹಾಗೆ ಬಿದ್ದಿವೆ. ಇನ್ನೂ ಹೊಸ ಕೆಲಸಗಳನ್ನು ಕೈಗೊಳ್ಳಲು ಈ ಹಣ ಸಾಲದು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಕ್ರಮವಹಿಸಿ ಎಂದು ಸರ್ಕಾರದ ಮೇಲೆ ಒತ್ತಡ ಹೇರಿದರು. ಇದಕ್ಕೆ ಸಿದ್ದರಾಮಯ್ಯ ಅವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಮಧ್ಯೆ ಅಧಕಾರ ಹಂಚಿಕೆ ಮನಸ್ತಾಪಗಳು ಶುರುವಾಗಿವೆ. ಸಿಎಂ ಕುರ್ಚಿಗೆ ನಾಯಕರ ತೆರೆಮರೆಯಲ್ಲಿ ಕಸರತ್ತು ನಡೆಸಿದ್ದಾರೆ. ಸಿಎಂ ಕುರ್ಚಿ ಬದಲಾವಣೆ ಕೂಗು ಆಗಾಗ ಕೇಳಿ ಬರುತ್ತಿದೆ. ಸದ್ಯ ರಾಜ್ಯಕ್ಕೆ ಆಗಮಿಸಿರುವ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸರಣಿ ಸಭೆ ನಡೆಸಿದ್ದಾರೆ. ಸಿಎಂ ಕುರ್ಚಿ ಕುರಿತು ಮಾತನಾಡದಂತೆ ಕಟ್ಟುನಿಟ್ಟಿನ ಎಚ್ಚರಿಕೆ ಕೊಟ್ಟಿದ್ದಾರೆ ಎನ್ನಲಾಗಿದೆ.
ಕೇವಲ ಕಿರಿಯ ನಾಯಕರಿಗೆ ಮಾತ್ರವಲ್ಲದೇ, ಹಿರಿಯ ನಾಯಕರಿಗೆ ಒಂದಷ್ಟು ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಸುರ್ಜೆವಾಲ ಆಗಮನದಿಂದಾಗಿ ಜಿ.ಪರಮೇಶ್ವರ ಅವರು ಕರೆದಿದ್ದ ಡಿನ್ನರ್ ಮೀಟಿಂಗ್ ಮುಂದೂಡಿಕೆ ಆಗಿದೆ ಎನ್ನಲಾಗಿದೆ.












Click it and Unblock the Notifications