ರಾಜ್ಯದಲ್ಲಿ ಗ್ಯಾರಂಟಿ ಸಿದ್ದರಾಮಯ್ಯ ಟ್ಯಾಕ್ಸ್ (GST) ಇಳಿಕೆ ಯಾವಾಗ?: ವಿಪಕ್ಷ ನಾಯಕ ಪ್ರಶ್ನೆ

ಬೆಂಗಳೂರು, ಅಕ್ಟೋಬರ್ 8: ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಲ್ಲಿ ಜಾತಿ ಗಣತಿ ನಡೆಯುತ್ತಿದೆ. ಅದಕ್ಕಾಗಿ ಸರ್ಕಾರಿ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಮೀಕ್ಷೆಗೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು ಜೊತೆಗೆ ಕೇಂದ್ರ ಸರ್ಕಾರ ಒಂದಷ್ಟು ತೆರಿಗೆಗಳನ್ನು ಕಡಿತಗೊಳಿಸಿ ಜನಸಾಮಾನ್ಯರಿಗೆ ಆರ್ಥಿಕ ಹೊರೆ ಕಡಿಮೆ ಮಾಡಿವೆ. ರಾಜ್ಯ ಸರ್ಕಾರ ತೆರಿಗೆ ಕಡಿಮೆ ಮಾಡುವುದು ಯಾವಾಗ ಎಂಬ ಕೆಲವು ಪ್ರಶ್ನೆಗಳನ್ನು ಸಿಎಂ ಸಿದ್ದರಾಮಯ್ಯ ಮುಂದಿಟ್ಟಿದ್ದಾರೆ.

ಸದರಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ನಡೆಸಲು ಎಷ್ಟು ಸಮಯ ಬೇಕು ಎನ್ನುವ ಬಗ್ಗೆ ಪೂರ್ವಯೋಜನೆ ಇಲ್ಲ ಎಂದು ಆರ್.ಅಶೋಕ್ ಅವರು ಎಕ್ಸ್‌ ಪೋಸ್ಟ್‌ ಮಾಡಿದ್ದಾರೆ. ಸರ್ಕಾರಕ್ಕೆ ಜಾತಿಗಣತಿಯಲ್ಲಿ ಯಾವ ಪ್ರಶ್ನೆ ಕೇಳಬೇಕು ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ. ಜಾತಿಗಣತಿಗೆ ಶಿಕ್ಷಕರನ್ನು ನಿಯೋಜನೆ ಮಾಡಿದರೆ ಸರ್ಕಾರಿ ಶಾಲೆಗಳಲ್ಲಿ ಯಾರು ಪಾಠ ಮಾಡುತ್ತಾರೆ ಎನ್ನುವ ಬಗ್ಗೆ ಯೋಚನೆ ಮಾಡಲಿಲ್ಲ ಎಂದು ದೂರಿದ್ದಾರೆ.

CM Siddaramaiah led Government When Will Reduce of Essential Items Tax R Ashoka

ಯಾವುದೇ ಪೂರ್ವಸಿದ್ಧತೆ, ರೂಪುರೇಷೆ, ಗೊತ್ತು ಗುರಿ ಇಲ್ಲದೆ ಕೇವಲ ರಾಜಕೀಯ ತೆವಲಿಗೆ ಮಾಡುತ್ತಿರುವ ಈ ಈ ಜಾತಿಗಣತಿಯಿಂದ ಕನ್ನಡಿಗರಿಗೆ ನಯಾ ಪೈಸೆ ಉಪಯೋಗವಿಲ್ಲ. ಜಾತಿಗಣತಿ ಹೆಸರಿನಲ್ಲಿ ಹತ್ತು ವರ್ಷಗಳ ಹಿಂದೆಯೇ 150 ಕೋಟಿ ರೂಪಾಯಿ ಹಣವನ್ನು ಸಿಎಂ ಸಿದ್ದರಾಮಯ್ಯ ಸರ್ಕಾರ ಪೋಲು ಮಾಡಿತ್ತು. ಇದೀಗ ಮತ್ತೊಮ್ಮೆ 650 ಕೋಟಿ ರೂಪಾಯಿ ರೂಪಾಯಿ ಕನ್ನಡಿಗರ ತೆರಿಗೆ ಹಣವನ್ನು ಬೇಕಾಬಿಟ್ಟಿ ಪೋಲು ಮಾಡುತ್ತಿದೆ ಎಂದು ಕಿಡಿ ಕಾರಿದ್ದಾರೆ.

GST: ಸಿದ್ದರಾಮಯ್ಯ ಗ್ಯಾರಂಟಿ ಟ್ಯಾಕ್ಸ್ ಇಳಿಕೆ ಯಾವಾಗ?

ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ತೆರಿಗೆ ಕಡಿಮೆ ಮಾಡಿದ್ದ ವೇಳೆ ಕಾಂಗ್ರೆಸ್ ನಾಯಕರು ಸಹ ವ್ಯಂಗ್ಯವಾಡಿದ್ದರು. ಇದೀಗ ಜಿಎಸ್‌ಟಿ ಅನ್ನು ಆರ್.ಅಶೋಕ ಅವರು ವಿವರಿಸಿ ಅದನ್ನು "ಸಿದ್ದರಾಮಯ್ಯ ಗ್ಯಾರಂಟಿ ಟ್ಯಾಕ್ಸ್' ಎಂದು ಕರೆಯುವ ಮೂಲಕ ರಾಜ್ಯದಲ್ಲಿ ಹೆಚ್ಚಾದ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಪ್ರಶ್ನಿಸಿದ್ದಾರೆ. "ಸಿದ್ದರಾಮಯ್ಯ ಗ್ಯಾರಂಟಿ ಟ್ಯಾಕ್ಸ್' (GST) ಇಳಿಕೆ ಯಾವಾಗ? ಎಂದು ಕೇಳಿದ್ದಾರೆ.

ಜಿಎಸ್‌ಟಿ ಸುಧಾರಣೆ ನಂತರ ದಿನಬಳಕೆ ವಸ್ತುಗಳಿಂದ ಹಿಡಿದು ಬೈಕು-ಕಾರುಗಳವರೆಗೆ ದೇಶಾದ್ಯಂತ ವ್ಯಾಪಾರ ವಹಿವಾಟು ಜೋರಾಗಿದ್ದು, ಜನಸಾಮಾನ್ಯರು ಸಂತೋಷದಿಂದ ಜಿಎಸ್‌ಟಿ ಉಳಿತಾಯದ ಲಾಭ ಪಡುತ್ತಿದ್ದಾರೆ. ವ್ಯಾಪಾರಸ್ಥರು, ವರ್ತಕರು ಸಂತೋಷಗೊಂಡಿದ್ದಾರೆ. ಆದರೆ ಕರ್ನಾಟಕದಲ್ಲಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರ ಕಳೆದ ಎರಡು ವರ್ಷಗಳಿಂದ ಸತತವಾಗಿ ಏರಿಸಿರುವ ಹಾಲು, ಪೆಟ್ರೋಲ್, ಡಿಸೇಲ್, ನೀರು, ವಿದ್ಯುತ್ ಬೆಲೆಯನ್ನು ಇಳಿಸುವುದು ಯಾವಾಗ?. ಇದರಿಂದ ಜನಸಾಮಾನ್ಯರಿಗೆ ತೊಂದರೆ ಆಗುತ್ತಿದೆ ಎಂದು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+