ಸಿಎಂ ಸಿದ್ದರಾಮಯ್ಯರಿಂದ ಲಿಂಗಾಯತ ಅಧಿಕಾರಿಗಳ ಕಡೆಗಣನೆ

ಬೆಂಗಳೂರು, ಸೆಪ್ಟಂಬರ್ 29: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಮುಖ್ಯಮಂತ್ರಿ ಆಗಲು ಹಲವರನ್ನು ಕಡೆಗಣಿಸಿದ್ದ ವಿಚಾರ ಮುನ್ನೆಲೆಗೆ ಬಂದಿದ್ದು, ಇದೀಗ ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸಿದ್ದಾರೆ. ಅವರದ್ದು ಜಾತಿ ವಿರೋಧಿ ಮನಸ್ಥಿತಿ ಎಂದು ಕರ್ನಾಟಕ ಬಿಜೆಪಿ ವಾಗ್ದಾಳಿ ನಡೆಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಟ್ವೀಟ್ ಮಾಡಿರುವ ಬಿಜೆಪಿಯು, ಸಿದ್ದರಾಮಯ್ಯನವರು ತಾವು ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗಲು ಸಹ ಗೌಡ-ಬ್ರಾಹ್ಮಣ ಸಮುದಾಯದ ಅಧಿಕಾರಿಗಳನ್ನು ಕಡೆಗಣಿಸಿದ್ದರು. ಈಗಲೂ ಅದೇ ರೀತಿ ಮಾಡುತ್ತಿದ್ದಾರೆ.

cm-siddaramaiah-led-govt

ಸಿದ್ದರಾಮಯ್ಯ ಅವರು ಗೌಡ-ಲಿಂಗಾಯತ-ಬ್ರಾಹ್ಮಣ ಸಮುದಾಯದ ಅಧಿಕಾರಿಗಳಿಗಳಂತೆ ಈಗ ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪರವರು ಹೇಳುವ ಮೂಲಕ ಸಿದ್ದರಾಮಯ್ಯರವರ ಜಾತಿ ವಿರೋಧಿ ಮನಸ್ಥಿತಿಯನ್ನು ಬಹಿರಂಗಪಡಿಸಿದ್ದಾರೆ ಎಂದು ಬಿಜೆಪಿ ಕುಟುಕಿದೆ.

ಚುನಾವಣೆ ಸಮಯದಲ್ಲಿ ಲಿಂಗಾಯಿತರೆಲ್ಲರೂ ಭ್ರಷ್ಟರೆಂಬಂತೆ ಹೇಳಿದ್ದ ಸಿದ್ದರಾಮಯ್ಯರವರು, ಈಗ ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸಿದ್ದಾರೆ. ಈ ಮೂಲಕ ಜಾತಿ ವಿರೋಧಿ ಮನಸ್ಥಿತಿ ತಾಳಿರುವ ಅವರು ಲಿಂಗಾಯತ ಸಮುದಾಯದ ವಿರುದ್ಧ ಹಗೆ ಸಾಧಿಸುತ್ತಿರುವುದು ದುರಂತ ಸಂಗತಿ ಎಂದು ದೂರಿದೆ.

ಅಧಿಕಾರಿಗಳ ಮೂಲೆಗುಂಪು ವಿಚಾರವನ್ನು ಬಹಿರಂಗವಾಗಿಯೇ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರೂ ಆಗಿರುವ ಶಾಮನೂರು ಶಿವಶಂಕರಪ್ಪ ಅವರು ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ.

cm-siddaramaiah-led-govt

ಶಾಮನೂರು ಶಿವಶಂಕರಪ್ಪ ಹೇಳಿದ್ದೇನು?

ವೀರಶೈವ ಲಿಂಗಾಯತ ಸಮುದಾಯದ ಹಲವು ಜಾತಿಗಳ ಮಧ್ಯೆ ಒಗ್ಗಟ್ಟು ಇಲ್ಲದ ಕಾರಣ ಸಮುದಾಯದ ಅಧಿಕಾರಿಗಳನ್ನು ನಿರ್ಲಕ್ಷಿಸಲಾಗುತ್ತದೆ. ಆದ್ದರಿಂದ ಸಮುದಾಯ ಎಲ್ಲರೂ ಒಟ್ಟಾಗಿ ನಿಲ್ಲಬೇಕು. ಎಲ್ಲ ಜಾತಿ ಸಮುದಾಯದವರಿಗೆ ಉತ್ತಮ ನೀಡುತ್ತಾರೆ. ಆದರೆ ಒಗ್ಗಟ್ಟಿಲ್ಲ ಕಾರಣ ಲಿಂಗಾಯತ ಸಮುದಾಯದವರನ್ನು ಮೂಲೆಗುಂಪು ಮಾಡಲಾಗಿದೆ. ನಮ್ಮವರ ಪಾಡು ನಾಯಿಪಾಡಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಎಸ್.ನಿಜಲಿಂಗಪ್ಪ, ಎಸ್.ಆರ್. ಬೊಮ್ಮಾಯಿ ಹಾಗೂ ವೀರೇಂದ್ರ ಪಾಟೀಲ್ ಅವರು ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಸೂಕ್ತ ಸ್ಥಾನ ಮಾನ ನೀಡಲಾಗಿತ್ತು. ಆದರೆ ಇಂದು ಪರಿಸ್ಥಿತಿ ಬದಲಾಗಿದೆ. ಸಮುದಾಯ ಬೇರೆ ಜಾತಿಗಳಂತೆ ಕಿತ್ತಾಡಬಾರದು. ಒಗ್ಗಟ್ಟಾಗಿರಬೇಕು ಎಂದು ತಿಳಿಸಿದರು. ಈ ಮೂಲಕ ಪ್ರಸ್ತುತ ಸರ್ಕಾರದಲ್ಲಿ ಅಧಿಕಾರಿಗಳ ವಿಚಾರದಲ್ಲಿ ಕಡೆಗಣಿಸಲಾಗಿದೆ ಎಂದು ಅವರು ಪರೋಕ್ಷವಾಗಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+