ಸಿದ್ದರಾಮಯ್ಯ ಜೊತೆಗಿರುವ ಈ ಮಹಿಳೆ ಯಾರು ಗೊತ್ತಾ? ಟ್ವೀಟ್ ಮೂಲಕ ಸಿಎಂ ಹೇಳಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 04: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಟ್ವೀಟ್ ಖಾತೆಯಲ್ಲಿ ಮಹಿಳೆಯೊಬ್ಬರ ಫೋಟೋವನ್ನ ಪೋಸ್ಟ್ ಮಾಡಿ ಸಂತಸವನ್ನ ವ್ಯಕ್ತಪಡಿಸಿದ್ದಾರೆ. ಆದರೆ, ಅವರ ಜೊತೆಗೆ ಕಾಣಿಸಿಕೊಂಡ ಆ ಮಹಿಳೆ ಯಾರು ಎಂಬ ಪ್ರಶ್ನೆ ನಿಮಗೂ ಬಂದಿರುತ್ತೆ. ಆ ಮಹಿಳೆಯನ್ನ ನೋಡಿದ ತಕ್ಷಣ ಕೆಲವರಿಗೆ ಗೊತ್ತಿರಬಹುದು. ಇನ್ನೂ ಕೆಲವರಿಗೆ ಯಾರು ಎಂಬ ಪ್ರಶ್ನೆ ಮೂಡಿರಬಹುದು.
ಶಕ್ತಿ ಯೋಜನೆ ಜಾರಿಯಾದ ದಿನ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ ಅವರನ್ನು ಇಂದು ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಭೇಟಿಯಾದದ್ದು ನನ್ನಲ್ಲಿ ಅಚ್ಚರಿ ಮತ್ತು ಖುಷಿಯ ಜೊತೆಗೆ ಸಾರ್ಥಕ್ಯದ ಭಾವ ಮೂಡಿಸಿತು.
— Siddaramaiah (@siddaramaiah) September 3, 2023
ಮಹಿಳೆಯರ ಸಬಲೀಕರಣಕ್ಕೆ… pic.twitter.com/oYoHT1UL9k
ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಮಹಿಳೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭೇಟಿಯಾಗಿದ್ದಾರೆ. ಕಾಂಗ್ರೆಸ್ನ ಐದು ಗ್ಯಾರಂಟಿಗಳಲ್ಲಿ ಒಂದಾದ, ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಯನ್ನು ಸ್ಮರಿಸಿಕೊಂಡು ಬಸ್ ನ ಮೆಟ್ಟಿಲುಗಳಿಗೆ ನಮಸ್ಕರಿಸಿ ಬಸ್ ನಲ್ಲಿ ಪ್ರಯಾಣ ಬೆಳೆಸಿರುವ ಪೋಟೋವೊಂದು ವೈರಲ್ ಆಗಿದ್ದು, ರಾಜ್ಯದ ಗಮನ ಸೆಳೆದಿದ್ರು. ಇದೀಗ ಖಾಸಗಿ ಕಾರ್ಯಕ್ರಮದಲ್ಲಿ ಆ ಮಹಿಳೆಯನ್ನ ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದು, ಆ ಕುರಿತು ಸಂತೋಷವನ್ನ ಹಂಚಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶಕ್ತಿ ಯೋಜನೆ ಜಾರಿಯಾದ ದಿನ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ ಅವರನ್ನು ಇಂದು ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಭೇಟಿಯಾದದ್ದು ನನ್ನಲ್ಲಿ ಅಚ್ಚರಿ ಮತ್ತು ಖುಷಿಯ ಜೊತೆಗೆ ಸಾರ್ಥಕ್ಯದ ಭಾವ ಮೂಡಿಸಿತು.
ಮಹಿಳೆಯರ ಸಬಲೀಕರಣಕ್ಕೆ ನಾವು ಬೆಂಬಲವಾಗಿ ನಿಲ್ಲಬೇಕು ಎನ್ನುವ ಕಾಳಜಿಯಿಂದ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಮೊದಲ ದಿನವೇ ಸಂಗವ್ವ ಅವರಿಂದ ದೊರೆತ ಪ್ರತಿಕ್ರಿಯೆ ಕಂಡು ನಮ್ಮ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು. ಈ ದಿನ ಇಂಥದ್ದೊಂದು ಭೇಟಿಯ ಅವಕಾಶ ಕಲ್ಪಿಸಿದ ಖಾಸಗಿ ವಾಹಿನಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ.
ಯೋಜನೆ ಸಂತೃಪ್ತಿಯಾಯ್ತು ಎಂದಿದ್ದ ಸಿದ್ದರಾಮಯ್ಯ
ಈ ಹಿಂದೆ ಶಕ್ತಿಯೋಜನೆ ಜಾರಿಯಾದ ಸಂಧರ್ಭದಲ್ಲಿ ಬಸ್ ಫುಟ್‌ಬೋರ್ಡ್‌ಗೆ ಹಣೆಹಚ್ಚಿ ನಮಸ್ಕರಿಸಿ ಉಚಿತ ಬಸ್ ಪ್ರಯಾಣ ಆರಂಭಿಸಿದ ಅಜ್ಜಿಯ ಫೋಟೋ ಪೋಸ್ಟ್ ಮಾಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಯೋಜನೆ ಸಂತೃಪ್ತಿಯಾಯ್ತು ಎಂದು ಟ್ವೀಟ್ ಮಾಡಿದ್ದರು.
ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಇಂದು ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು.
ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ. ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು ಎಂದು ಮಹಿಳೆಯ ಪೋಟೋ ಹಾಕಿ ಸಂತೋಷವನ್ನ ಹಂಚಿಕೊಂಡಿದ್ರು.












Click it and Unblock the Notifications