ಪರಮೇಶ್ವರ ಜೊತೆ ಸಿಎಂ ಸಿದ್ದರಾಮಯ್ಯ ಗೌಪ್ಯ ಚರ್ಚೆ!
ಬೆಂಗಳೂರು, ಫೆ. 27 : ದಲಿತ ಸಿಎಂ ಚರ್ಚೆ ಕರ್ನಾಟಕದ ರಾಜಕೀಯ ವಲಯದಲ್ಲಿ ನಡೆಯುತ್ತಿರುವಾಗಲೇ ಸಿಎಂ ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರನ್ನು ಭೇಟಿ ಮಾಡಿದ್ದಾರೆ. ಗುರುವಾರ ರಾತ್ರಿ ಈ ಮಹತ್ವದ ಬೆಳವಣಿಗೆ ನಡೆದಿದೆ.
ಗುರುವಾರ ರಾತ್ರಿ 8.30ರ ಸುಮಾರಿಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಾ.ಜಿ.ಪರಮೇಶ್ವರ ಅವರು ಭೇಟಿಯಾಗಿ ಸುಮಾರು 2 ಗಂಟೆ ಚರ್ಚೆ ನಡೆಸಿದ್ದಾರೆ. ಪರಮೇಶ್ವರ ಅವರು ದೆಹಲಿಯಿಂದ ಮರಳಿದ ಬಳಿಕ ನಡೆದ ಈ ಮಾತುಕತೆ ಕುತೂಹಲ ಮೂಡಿಸಿದೆ. [ದಲಿತ ಸಿಎಂ, ಚರ್ಚೆಗೆ ತೆರೆ ಎಳೆದ ದಿಗ್ವಿಜಯ್]

ಕರ್ನಾಟಕದ ರಾಜಕೀಯ ವಲಯದಲ್ಲಿ ದಲಿತರಿಗೆ ಸಿಎಂ ಪಟ್ಟ ನೀಡಬೇಕು ಎಂಬ ಬೇಡಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಪರಮೇಶ್ವರ ಅವರನ್ನು ಸಿಎಂ ಮಾಡಬೇಕು ಎಂದು ದಲಿತ ಸಂಘಟನೆಗಳು ಬೇಡಿಕೆ ಇಟ್ಟಿದ್ದು, ಈ ಕುರಿತು ರಾಜ್ಯಾದ್ಯಂತ ಜನಾಂದೋಲನ ಆರಂಭಿವೆ. [ದಲಿತ ಸಿಎಂ ಚರ್ಚೆ ಹುಟ್ಟುಹಾಕಿದ ಸಂಘಟನೆಗಳು]
ಈ ಎಲ್ಲಾ ಬೆಳವಣಿಗೆಗಳ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪರಮೇಶ್ವರ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಬಾಕಿ ಉಳಿದಿರುವ ನಿಗಮ-ಮಂಡಳಿಗಳಿಗೆ ನೇಮಕ ಮಾಡುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಭಯ ನಾಯಕರು ಗೌಪ್ಯವಾಗಿ ಚರ್ಚೆ ನಡೆಸಿದ್ದಾರೆ. [ದಲಿತರಿಗೆ ಸಿಎಂ ಪಟ್ಟ, ಮೌನ ಮುರಿದ ಪರಮೇಶ್ವರ]
ದಲಿತ ಸಿಎಂ ವಿಚಾರದಲ್ಲಿ ದಲಿತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಿಲ್ಲಿಸಿ ಎಂದು ತಾವು ಹೇಳಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹಲವಾರು ಸಚಿವರು ಈ ಕುರಿತು ಹೇಳಿಕೆ ನೀಡುತ್ತಿರುವ ಹಿನ್ನಲೆಯಲ್ಲಿ ಉಭಯ ನಾಯಕರ ಭೇಟಿ ಕುತೂಹಲ ಹುಟ್ಟುಹಾಕಿದೆ.












Click it and Unblock the Notifications