'ಏನು ಆಗ್ಬೇಕೋ ಅದು ಆಗುವ ಸಮಯಕ್ಕೆ ಆಗುತ್ತೆ' : ಸಿಎಂ

ಬೆಂಗಳೂರು, ಏ.6 : ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಗಾಗಿ ಕಾದು ಕುಳಿತಿರುವವರಿಗೆ ಮುಖ್ಯಮಂತ್ರಿಗಳು ನಿರಾಸೆ ಮಾಡಿದರೆ?. 'ಏನು ಆಗಬೇಕೋ ಅದು ಆಗುವ ಸಮಯಕ್ಕೆ ನಡೆಯುತ್ತೆ'. ಬಹುನಿರೀಕ್ಷಿತ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಪ್ರತಿಕ್ರಿಯೆ ಇದು.

ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರು. ಕೇವಲ 10 ನಿಮಿಷದ ಚರ್ಚೆ ಬಳಿಕ ಕರ್ನಾಟಕ ಭವನಕ್ಕೆ ವಾಪಸ್ ಬಂದ ಸಿದ್ದರಾಮಯ್ಯ ಅವರು ಸೋನಿಯಾ ಭೇಟಿಯ ವಿವರಗಳನ್ನು ನೀಡಲು ನಿರಾಕರಿಸಿದರು. [ಸಂಪುಟ ವಿಸ್ತರಣೆ : ಖಾತೆ, ವ್ಯಕ್ತಿಯೂ ಬದಲಾಗಬಹುದು!]

Siddaramaiah, Sonia Gandhi

ಸೋನಿಯಾ, ಸಿದ್ದರಾಮಯ್ಯ ಭೇಟಿಯ ವೇಳೆ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಕುರಿತು ಚರ್ಚೆ ನಡೆಯುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ, ಕೇವಲ ಹತ್ತು ನಿಮಿಷದ ಸಭೆ ಬಳಿಕ ಸಿದ್ದರಾಮಯ್ಯ ಅವರು 'ಏನು ಆಗಬೇಕೋ ಅದು ಆಗುವ ಸಮಯಕ್ಕೆ ನಡೆಯುತ್ತೆ' ಎಂದು ಪ್ರತಿಕ್ರಿಯೆ ನೀಡಿರುವುದು ಕುತೂಹಲ ಮೂಡಿಸಿದೆ. [ಸಕಾಲದಲ್ಲಿ ಬಿಬಿಎಂಪಿ ಚುನಾವಣೆ ಮಾಡಿ]

ಸಂಪುಟ ವಿಸ್ತರಣೆಗೆ ಒಪ್ಪಿಗೆ ಇಲ್ಲ : ಸಕಾಲಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸುವುದು, ಗ್ರಾಮ ಪಂಚಾಯಿತಿ ಚುನಾವಣೆಗಳ ಹಿನ್ನಲೆಯಲ್ಲಿ ಸದ್ಯಕ್ಕೆ ಸಂಪುಟ ವಿಸ್ತರಣೆ ಮಾಡುವುದು ಬೇಡ ಎಂದು ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.ಸಿದ್ದು ವಾದವೇನು?

ವಿಸ್ತರಣೆ ಏಕೆ ಬೇಡ : ರಾಜ್ಯದಲ್ಲಿ ಶೀಘ್ರದಲ್ಲೇ ಬೃಹತ್‌ ಬೆಂಗಳೂರು ಮಹಾ ನಗರಪಾಲಿಕೆ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಿವೆ. ಇದಕ್ಕಾಗಿ ಪಕ್ಷವನ್ನು ಸಂಘಟನೆ ಮಾಡಬೇಕು. ಜನರ ಸಾಧನೆಯನ್ನು ಜನರಿಗೆ ತಲುಪಿಸಬೇಕು. ಈ ಹಂತದಲ್ಲಿ ಸಂಪುಟ ವಿಸ್ತರಣೆ ಮಾಡಲು ಮುಂದಾದರೆ ಗೊಂದಲ ಎದುರಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+