MUDA Scam: ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಮೈಸೂರು ಪ್ರವಾಸ

ಬೆಂಗಳೂರು, ಸೆಪ್ಟೆಂಬರ್ 26: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ನೀಡಿದೆ. ಮೈಸೂರು ಲೋಕಾಯುಕ್ತ ವಿಭಾಗದ ಪೊಲೀಸರು ತನಿಖೆ ನಡೆಸಬೇಕು ಎಂದು ಕೋರ್ಟ್ ಸೂಚಿಸಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರು ದಿನಗಳ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಈ ನಡೆ ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವುನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು. ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ತನಿಖೆ ನಡೆಯಬೇಕು ಎಂದು ತೀರ್ಪು ನೀಡಿತ್ತು. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಲೋಕಾಯುಕ್ತದ ಮೈಸೂರು ವಿಭಾಗ ತನಿಖೆ ನಡೆಸಿ, ಮೂರು ತಿಂಗಳಿನಲ್ಲಿ ವರದಿ ನೀಡಬೇಕು ಎಂದು ಬುಧವಾರ ತೀರ್ಪು ನೀಡಿತ್ತು.

CM Siddaramaiah Mysuru Tour From September 27 Sparks Curiosity

ಕೋರ್ಟ್ ಆದೇಶದ ಬಳಿಕವೂ ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇನ್ನೂ ಸಹ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲು ಮಾಡಿಲ್ಲ. ಗುರುವಾರ ಬೆಂಗಳೂರಿನಲ್ಲಿ ಲೋಕಾಯುಕ್ತ ಪೊಲೀಸರು ಕಾನೂನು ತಜ್ಞರ ಜೊತೆ ಸರಣಿ ಸಭೆಗಳನ್ನು ನಡೆಸಿದ್ದು, ಮುಂದಿನ ನಡೆ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ.

ಸಿದ್ದರಾಮಯ್ಯ ಮೈಸೂರು ಪ್ರವಾಸ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೆಪ್ಟೆಂಬರ್ 27ರ ಶುಕ್ರವಾರದಿಂದ ಮೂರು ದಿನಗಳ ಕಾಲ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ವಿಶೇಷ ವಿಮಾನದಲ್ಲಿ ಅವರು ಬೆಂಗಳೂರಿನಿಂದ ಹೊರಡಲಿದ್ದು, 10.20ಕ್ಕೆ ಮೈಸೂರು ನಗರಕ್ಕೆ ಆಗಮಿಸಲಿದ್ದಾರೆ.

ಶುಕ್ರವಾರ ಮೈಸೂರಿನಲ್ಲಿ ಸಿದ್ದರಾಮಯ್ಯ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಇನ್ನೂ ಮುಂತಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನಗರದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಶನಿವಾರ (ಸೆ.28) ಸಿದ್ದರಾಮಯ್ಯ ಮೈಸೂರು ನಗರದಲ್ಲಿ ಖಾಸಗಿ ಆಸ್ಪತ್ರೆ ಉದ್ಘಾಟನೆ, ಸರ್ಕಾರದ ಗ್ಯಾರಂಟಿ ಯೋಜನೆಗಳ ಪುಸ್ತಕ ಬಿಡುಗಡೆ ಸಮಾರಂಭ, ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು. ಬಳಿಕ ನಗರದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಸಿದ್ದರಾಮಯ್ಯ ಭಾನುವಾರ (ಸೆ. 29)ರಂದು ಹಿಂದುಳಿದ ವರ್ಗಗಳ ವಸತಿ ನಿಲಯಗಳ ಹಳೆಯ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಶೋಕಪುರಂ ಸರ್ಕಾರಿ ಪ್ರೌಢಶಾಲೆಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಸಂಜೆ 6 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಮರಳಲಿದ್ದಾರೆ.

ಕೋರ್ಟ್‌ ಆದೇಶದ ಬಳಿಕ ಪ್ರತಿಕ್ರಿಯೆ ನೀಡಿದ್ದ ಅವರು, 'ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರು ಲೋಕಾಯುಕ್ತಕ್ಕೆ ತನಿಖೆಗೆ ಆದೇಶ ನೀಡಿರುವ ವಿಚಾರ ಮಾಧ್ಯಮಗಳ ಮೂಲಕ ತಿಳಿಯಿತು. ಆದೇಶದ ಪೂರ್ಣ ಪ್ರತಿ ಓದಿ ವಿಸ್ತೃತವಾಗಿ ಪ್ರತಿಕ್ರಿಯೆ ನೀಡುತ್ತೇನೆ. ಕಾನೂನು ರೀತಿಯ ಹೋರಾಟ ಮಾಡಲು, ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ. ಈ ಮಾತನ್ನು ನಿನ್ನೆಯೂ ಹೇಳಿದ್ದೆ, ಅದನ್ನೆ ಈಗಲೂ ಪುನರುಚ್ಚರಿಸುತ್ತಿದ್ದೇನೆ. ತನಿಖೆಗೆ ಹೆದರುವ ಪ್ರಶ್ನೆ ಇಲ್ಲ, ಎಲ್ಲವನ್ನು ಎದುರಿಸಲು ನಿರ್ಧರಿಸಿದ್ದೇನೆ. ಕಾನೂನು ಪರಿಣಿತರ ಜೊತೆ ಚರ್ಚೆ ಮಾಡಿ ಮುಂದಿನ ನಡೆಯ ಬಗ್ಗೆ ನಿರ್ಧಾರ ಮಾಡುತ್ತೇನೆ' ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+