ಸಿಎಂ ಸಿದ್ದರಾಮಯ್ಯ ಮನೆಯಲ್ಲಿ ಸನಾತನ ಪದ್ಧತಿಯಂತೆ ಹೋಮ, ಪೂಜೆ!
ದೇಶದಲ್ಲಿ ಈಗ ಸನಾತನ ಪದ್ಧತಿ ಹಾಗೂ ಹಿಂದೂ ಧರ್ಮದ ಬಗ್ಗೆ ದೊಡ್ಡ ಚರ್ಚೆ ಶುರು ಆಗಿದೆ. ಇದಕ್ಕೆಲ್ಲಾ ಕಾರಣವಾಗಿದ್ದು ಡಿಎಂಕೆ ನಾಯಕ ಹಾಗೂ ತಮಿಳುನಾಡು ಸಚಿವರ ಹೇಳಿಕೆ. ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸದಲ್ಲಿ ಹೋಮ ಮತ್ತು ಪೂಜೆ ನಡೆಸಿರುವುದು ವೈರಲ್ ಆಗುತ್ತಿದೆ.
ಹೌದು, ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹೋಮ ಹವನವನ್ನು ನಡೆಸಿದ್ದಾರೆ ಎನ್ನಲಾಗಿದೆ. ಕೆಲ ದಿನಗಳ ಹಿಂದಷ್ಟೇ ಸಿಎಂ ಕಾವೇರಿ ನಿವಾಸಕ್ಕೆ ಶಿಫ್ಟ್ ಆಗಿದ್ದು, ಇದು ಸಿದ್ದರಾಮಯ್ಯ ಅವರ ಲಕ್ಕಿ ಹೌಸ್ ಅಂತ ಕರೆಯಲಾಗುತ್ತೆ. ಇದೇ ಸೋಮವಾರದಂದು ಸಿಎಂ ಸಿದ್ದರಾಮಯ್ಯ ಸರ್ಕಾರಿ ನಿವಾಸದಲ್ಲಿ ಹೋಮ ನೆರವೇರಿಸಿದ್ದಾರಂತೆ. ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಹೋಮ-ಹವನ ನೆರವೇರಿಸಿದ್ದಾರೆ ಅಂತಾ ಹೇಳಲಾಗುತ್ತಿದೆ. ತಮ್ಮ ಮೊಮ್ಮಗ ಧವನ್ ರಾಕೇಶ್ ಜೊತೆಯಲ್ಲಿ ಸಿಎಂ ಸಿದ್ದರಾಮಯ್ಯ ಇರುವ ಫೋಟೋ ವೈರಲ್ ಆಗುತ್ತಿದೆ.

ಸಿಎಂ ಸಿದ್ದರಾಮಯ್ಯ ಮೊಮ್ಮಗ ರಾಜಕೀಯಕ್ಕೆ?
ಇನ್ನು ಮತ್ತೊಂದು ಕಡೆ ಸಿದ್ದರಾಮಯ್ಯ ಅವರ ಮೊಮ್ಮಗ & ರಾಕೇಶ್ ಸಿದ್ದರಾಮಯ್ಯ ಅವರ ಪುತ್ರ ಧವನ್ ರಾಕೇಶ್ ರಾಜಕೀಯ ಎಂಟ್ರಿ ಬಗ್ಗೆ ಚರ್ಚೆ ನಡೆಯುತ್ತಿದೆ. ಅದ್ರಲ್ಲೂ ವಿಧಾನಸಭೆ ಚುನಾವಣೆಯ ಬಳಿಕ ಧವನ್ ರಾಜಕೀಯ ಎಂಟ್ರಿ ಬಗ್ಗೆ ಮಾತು ಜೋರಾಗಿದೆ. ಇಷ್ಟೆಲ್ಲದರ ನಡುವೆ ಮೊಮ್ಮಗನ ಜೊತೆ ತಾತ ಹೋಮ & ವಿಶೇಷ ಪೂಜೆ ನೆರವೇರಿಸಿದ ಫೋಟೋ ವೈರಲ್ ಆಗುತ್ತಿದೆ.
ಉದಯನಿಧಿ ಹೇಳಿಕೆಯಿಂದ ಸಂಚಲನ
ಇತ್ತ ಸಿದ್ದರಾಮಯ್ಯ ಅವರು ಹೋಮ & ಪೂಜೆ ನಡೆಸಿದ ಫೋಟೋ ವೈರಲ್ ಆಗುತ್ತಿದೆ. ಹಾಗೇ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ವಿಚಾರ ದೇಶದ್ಯಂತ ಚರ್ಚೆಗೆ ಗ್ರಾಸವಾಗಿದೆ. ಸನಾತನ ಧರ್ಮವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸೆಪ್ಟಂಬರ್ 2ರಂದು ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ಉದಯನಿಧಿ ಹೇಳಿಕೆಯ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ.
ಕರ್ನಾಟಕದ ಸಚಿವರ ವಿರುದ್ಧ ಎಫ್‌ಐಆರ್
ಉತ್ತರ ಪ್ರದೇಶದ ರಾಂಪುರ ಎಂಬಲ್ಲಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ & ಪ್ರಿಯಾಂಕ್ ಖರ್ಗೆ ವಿರುದ್ಧ ಐಪಿಸಿ ಸೆಕ್ಷನ್ 295 ಎ ಅಂದ್ರೆ ಧಾರ್ಮಿಕ ಭಾವನೆ ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳ ಅಡಿ, ಮತ್ತು 153 ಎ ಅಂದ್ರೆ ವಿವಿಧ ಧಾರ್ಮಿಕ ಗುಂಪು ಮಧ್ಯೆ ದ್ವೇಷ ಉತ್ತೇಜನೆ ಅಡಿಯಲ್ಲಿ ಕೇಸ್ ದಾಖಲಾಗಿದೆ. ಉದಯನಿಧಿ ಸ್ಟಾಲಿನ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಪ್ರಿಯಾಂಕ್ ಖರ್ಗೆ ಅವರ ಮೇಲೆ ಕೂಡ ಎಫ್‌ಐಆರ್ ದಾಖಲಾಗಿದೆ ಎನ್ನಲಾಗಿದೆ.












Click it and Unblock the Notifications