Ksrtc: ಹಿಂಗ್ ಮಾಡಿದರೆ ಕೆಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತೆ ಎಂದಿದ್ಯಾಕೆ ಮುಖ್ಯಮಂತ್ರಿ ಸಿದ್ದರಾಮಯ್ಯ

Free bus travel controversy: ಕರ್ನಾಟಕದಲ್ಲಿ ಮಹಿಳೆಯರಿಗೆ ಶಕ್ತಿ ಯೋಜನೆಯ ಮೂಲಕ ಫ್ರೀ ಬಸ್‌ ಬಿಡಲಾಗಿದೆ. ಈ ಯೋಜನೆಯ ಬಗ್ಗೆ ಕೆಲವು ಸಣ್ಣಪುಟ್ಟ ತಕರಾರುಗಳು ಇವೆ. ಫ್ರೀ ಬಸ್‌ನಿಂದ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ದಿನ ನಿತ್ಯ ಬಸ್‌ನಲ್ಲಿ ಪ್ರಯಾಣಿಸುವವರಿಗೆ ಸ್ವಲ್ಪ ಕಷ್ಟವಾಗುತ್ತಿದೆ ಎನ್ನುವ ಮಾತಿದೆ. ಆದರೆ ರಾಜ್ಯ ಸರ್ಕಾರವು ಬಸ್‌ಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುತ್ತಿದೆ. ಆದರೆ, ರಾಜ್ಯದಲ್ಲಿ ಮಹಿಳೆಯರಿಗೆ ಮಾತ್ರ ಫ್ರೀ ಬಸ್‌ ಬಿಡಲಾಗಿದೆ. ಪುರುಷರಿಗೂ ಫ್ರೀ ಬಸ್‌ ವ್ಯವಸ್ಥೆ ಕಲ್ಪಿಸಬೇಕು ಎಂದು ಕೆಲವರು ಮೊದಲಿನಿಂದಲೂ ಆಗ್ರಹಿಸುತ್ತಿದ್ದಾರೆ. ಇದೀಗ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪುರುಷರಿಗೆ ಫ್ರೀ ಬಸ್‌ ಸೇವೆ ಕೊಡುವ ಬಗ್ಗೆ ಮಾತನಾಡಿದ್ದಾರೆ. ಏನಂದ್ರು ಎನ್ನುವ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪರಿಚಯಿಸಿದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಮನಸ್ಸು ಗೆದ್ದಿದ್ದು, ಶಕ್ತಿ ಯೋಜನೆ ಎಂದೇ ಹೇಳಬಹುದು. ಬಹು ವರ್ಷಗಳಿಂದ ತಮ್ಮ ಇಷ್ಟದ ಊರುಗಳಿಗೆ, ಜಾಗಗಳಿಗೆ ಹಾಗೂ ಪವಿತ್ರ ಕ್ಷೇತ್ರಗಳಿಗೆ ಆರ್ಥಿಕ ಕಾರಣಕ್ಕೆ ಹೋಗಲು ಸಾಧ್ಯವಾಗದೆ ಇದ್ದ ಕೆಲವರು ರಾಜ್ಯ ಸರ್ಕಾರ ಫ್ರೀ ಬಸ್‌ ಯೋಜನೆಯ ಪ್ರಯೋಜನ ಪಡೆದರು. ಇದರಿಂದ ಪ್ರವಾಸಿ ಕ್ಷೇತ್ರಗಳಿಗೆ ಭೇಟಿ ನೀಡುವುದು ಹೆಚ್ಚಾಯಿತು. ಪರೋಕ್ಷವಾಗಿ ರಾಜ್ಯ ಸರ್ಕಾರದ ಆದಾಯವೂ ಹೆಚ್ಚಾಯಿತು. ಆದರೆ, ಮಹಿಳೆಯರಿಗೆ ಫ್ರೀ ಬಸ್‌ ಬಿಟ್ಟಿರುವಂತೆ ಪುರುಷರಿಗೂ ಈ ಯೋಜನೆ ವಿಸ್ತರಿಸಬೇಕು ಎಂದು ಕೆಲವು ಪುರುಷರು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದರ ಬಗ್ಗೆ ಮಾತನಾಡಿದ್ದು, ವ್ಯಂಗ್ಯವಾಡಿದ್ದಾರೆ.

CM Siddaramaiah has said that if men in Karnataka are given free bus facilities KSRTC will have to be closed It is said that the government has no plans to extend the scope of the Shakti Yojana to men

ನಾವೇನಾದರೂ ಗಂಡಸರಿಗೆ ಫ್ರೀ ಬಸ್‌ ಪ್ರಯಾಣ ಯೋಜನೆಯನ್ನು ವಿಸ್ತರಿಸಿದರೆ ಕೆಎಸ್‌ಆರ್‌ಟಿಸಿಯನ್ನೇ ಮುಚ್ಚಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕರ್ನಾಟಕದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುವಾಗ ಸಿದ್ದರಾಮಯ್ಯ ಅವರು ಈ ರೀತಿ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಪುರುಷರು ನಮಗೂ ಫ್ರೀ ಬಸ್ ಕೊಡಿ ಅಂತ ಮನವಿ ಮಾಡಿದ್ದಾರೆ. ಅದಕ್ಕೆ ಸಿದ್ದರಾಮಯ್ಯ ಅವರು ಈ ರೀತಿ ಉತ್ತರಿಸಿದ್ದಾರೆ. ಒಂದೊಮ್ಮೆ ಗಂಡಸರಿಗೂ ಏನಾದರು ಫ್ರೀ ಬಸ್ ಕೊಟ್ಟರೆ ಕೆಎಸ್ಆರ್‌ಟಿಸಿ ಮುಚ್ಚಿಬಿಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪುರುಷರಿಗೆ ಫ್ರೀ ಬಸ್‌ ಕೊಡುವ ಯಾವುದೇ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪುರುಷರಿಗೂ ಫ್ರೀ ಕೊಟ್ಟರೆ ಭಾರೀ ನಷ್ಟವಾಗಿ ಸಂಸ್ಥೆಯನ್ನೇ ಮುಚ್ಚಿಬಿಡಬೇಕಾಗುತ್ತದೆ ಎಂದಿದ್ದಾರೆ.

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡುವವರಿಗೆ ರಾಜ್ಯ ಸರ್ಕಾರ ಇತ್ತೀಚಿನ ದಿನಗಳಲ್ಲಿ ಖಡಕ್‌ ಉತ್ತರ ಕೊಡುತ್ತಿದೆ. ರಾಜ್ಯದ ವಿರೋಧ ಪಕ್ಷದ ನಾಯಕ ಪ್ರಶ್ನೆಗಳಿಗೂ ಇದೇ ರೀತಿ ಉತ್ತರಿಸಲಾಗುತ್ತಿದೆ. ಇನ್ನು ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ಈಚೆಗೆ ಮಾತನಾಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಕೆಲವೊಮ್ಮೆ ಸರ್ಕಾರಿ ವ್ಯವಸ್ಥೆಯಲ್ಲಿ ವೇತನ ವಿಳಂಬವಾಗುವುದು ಇದೆ ಎಂದಿದ್ದರು. ಗೃಹಲಕ್ಷ್ಮಿ ಯೋಜನೆಯಲ್ಲಿ ಕೆಲವೊಮ್ಮೆ ವಿಳಂಬವಾಗುವುದು ಇದೆ. ಆದರೆ, ನಾವು ವಚನಭ್ರಷ್ಟರಲ್ಲ ಅಂತ ಹೇಳುವ ಮೂಲಕ ವಿರೋಧ ಪಕ್ಷಗಳಿಗೆ ಟಾಂಗ್ ಕೊಟ್ಟಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+