ಗೂಂಡಾಗಿರಿ, ಅನಧಿಕೃತ ಕ್ಲಬ್‌ ಚಟುವಟಿಕೆ, ಡ್ರಗ್‌ ಮಾಫಿಯಾ ನಾಶ ಮಾಡಿ: ಪೊಲೀಸ್‌ ಅಧಿಕಾರಿಗಳಿಗೆ ಸಿಎಂ ಖಡಕ್‌ ಆದೇಶ

ಬೆಂಗಳೂರು, ಮೇ 23: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿದರು. ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್‌ ಮಾಡಿದೆ.

ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಸಭೆಯಲ್ಲಿ ಸೂಚಿಸಿದ್ದಾರೆ.

CM Siddaramaiah Ordered Police Dept to Control Rowdism

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದೂ ಸಿಎಂ ಸೂಚಿಸಿದ್ದಾರೆ.

CM Siddaramaiah Ordered Police Dept to Control Rowdism

ಪೊಲೀಸ್‌ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್‌ ಠಾಣೆಗೆ ಸಮಸ್ಯೆಗಳ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.

ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್‌ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್‌ ಮಾಫಿಯಾವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಸಿಎಂ ತಿಳಿಸಿದ್ದಾರೆ.

ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು. ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ, ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುತ್ತೇವೆ ಎಂದೂ ಹೇಳಿದ್ದಾರೆ.

ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಕೆಜೆ ಜಾರ್ಜ್‌, ಕೆ.ಹೆಚ್. ಮುನಿಯಪ್ಪ, ಜಮೀರ್‌ ಅಹ್ಮದ್‌ ಖಾನ್‌, ಎಂ.ಪಿ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ಉಪಸ್ಥಿತರಿದ್ದರು ಎಂದು ಸಿಎಂ ಆಫ್‌ ಕರ್ನಾಟಕ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+