ಮಾನವ-ಕಾಡುಪ್ರಾಣಿ ಸಂಘರ್ಷ ತಡೆಗೆ ವೈಜ್ಞಾನಿಕ ಪರಿಹಾರಕ್ಕೆ ಸಿದ್ದರಾಮಯ್ಯ ಸೂಚನೆ: ಅವು ಯಾವುವು?
Human-Wildlife Conflict Solutions: ಕರ್ನಾಟಕದಲ್ಲಿ ಕಾಡುಪ್ರಾಣಿ ಮತ್ತು ಮಾನವ ಸಂಘರ್ಷ ತಡೆಗೆ ಸರ್ಕಾರ ಮಹತ್ವದ ಮತ್ತು ವೈಜ್ಞಾನಿಕ ಕಾರಣಗಳನ್ನು ಕಂಡುಕೊಳ್ಳುವಲ್ಲಿ ಹೆಜ್ಜೆ ಇಟ್ಟಿದೆ. ರಾಜ್ಯದಲ್ಲಿ ಹಾಸನ, ಶಿವಮೊಗ್ಗ, ಚಾಮರಾಜನಗರ ಭಾಗಗಳಲ್ಲಿ ಹೆಚ್ಚಿನ ಪ್ರಮಾಣ ಆನೆ, ಹುಲಿ ದಾಳಿಗಳು ವರದಿ ಆಗಿವೆ. ಇತರ ಭಾಗಗಳಲ್ಲಿ ಸಂಘರ್ಷಗಳ ಕೊಂಚ ಕಡಿಮೆ. ಇಂತಹ ಘಟನೆಗಳ ತಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಜ್ಞಾನಿಕ ಪರಿಹಾರಗಳನ್ನು ಸೂಚಿಸಿದ್ದಾರೆ. ಅವು ಯಾವುವು? ಇನ್ನು ಮುಂದಾದರೂ ಇದೆಲ್ಲ ನಿಲ್ಲುತ್ತಾ, ನಿಯಂತ್ರಣಕ್ಕೆ ಬರುತ್ತಾ?
ರಾಜ್ಯ ಮಟ್ಟದ ಸಮಗ್ರ ಮಾನವ- ವನ್ಯಜೀವಿ ಸಂಘರ್ಷ ನಿರ್ವಹಣಾ ಕಾರ್ಯತಂತ್ರಗಳನ್ನು ರೂಪಿಸುವುದು ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ಡ್ರೋನ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ. ಇದಕ್ಕಾಗಿ ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿನ ಸಿಎಂ ಸೂಚನೆಗಳು
* ವಯಸ್ಸಾದ ಕಾರಣಕ್ಕೆ ಮತ್ತು ಹೊಸ ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇನ್ನಿತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ಡ್ರೋನ್ ಕ್ಯಾಮರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ಜರುಗಿಸಬೇಕು.
* ಮಾನವ ಸಂಪನ್ಮೂಲದ ನಿರ್ವಹಣೆ ಸಂಘರ್ಷದ ತೀವ್ರತೆಯ ಆಧಾರದ ಮೇಲೆ ಅಧಿಕಾರಿ, ಸಿಬ್ಬಂದಿಯ ನಿಯೋಜನೆ ಮಾಡಬೇಕು.
* ಅರಣ್ಯದ ಅಂಚಿನ ಗ್ರಾಮಗಳಲ್ಲಿ ಗಸ್ತು ಹೆಚ್ಚಳ ಮಾಡುವುದು ಹಾಗೂ ರಿಜಿಸ್ಟರ್ ನಿರ್ವಹಣೆ ಮಾಡಬೇಕು.
* ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು, ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕ್ವಾಡ್ ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸಬೇಕು.
* ಮಾನವ ವನ್ಯಜೀವಿ ಸಂಘರ್ಷ ಇರುವ ಪ್ರದೇಶಗಳನ್ನು ಗುರುತಿಸುವುದು ಮತ್ತು ಯಾವ ಸ್ವರೂಪದ ಸಂಘರ್ಷ ಇದೆ ಎಂದು ಪಟ್ಟಿ ಮಾಡಬೇಕು.
* ಹಿರಿಯ ಅಧಿಕಾರಿಗಳು ನಿಯಮಿತವಾಗಿ ಅರಣ್ಯದಂಚಿನ, ಅದರಲ್ಲೂ ಮಾನವ ವನ್ಯ ಜೀವಿ ಸಂಘರ್ಷ ಇರುವ ಗ್ರಾಮದಲ್ಲಿ ವಾಸ್ತವ್ಯ ಹೂಡಬೇಕೆಂದು ನಿರ್ದೇಶಿಸಿದರು.
* ವನ್ಯಜೀವಿ ಸಂರಕ್ಷಣೆ ಕಾರ್ಯಾಚರಣೆಗೆ ವನ್ಯಜೀವಿಗಳು ಸಂಚರಿಸುವ ಕಾರ್ಯತಂತ್ರ ಸ್ಥಳಗಳಲ್ಲಿ 24/7ವಾಹನ ಮತ್ತು ಅರಣ್ಯ ಸಿಬ್ಬಂದಿ ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕು.
* ಸ್ಥಳೀಯರನ್ನು ತೊಡಗಿಸಿಕೊಳ್ಳುವುದು, ಅರಣ್ಯದಂಚಿನ ಗ್ರಾಮದ ಉತ್ಸಾಹಿ ಯುವಕರು ಮತ್ತು ಹಿರಿಯರನ್ನು ಗುರುತಿಸಿ ಅರಣ್ಯ ಮಿತ್ರ ಎಂದು ಪರಿಗಣಿಸಿ ಗಸ್ತು, ವನ್ಯಜೀವಿ, ಸೆರೆ, ಕಾರ್ಯಾಚರಣೆ ವೇಳೆ ಅವರ ಸೇವೆ ಬಳಸಿಕೊಳ್ಳಬೇಕು.
* ವನ್ಯಜೀವಿ ಸೆರೆ, ವನ್ಯಜೀವಿ ದಾಳಿ ಮಾಡಿದಾಗ ಏನು ಮಾಡಬೇಕು ಎಂಬ ಬಗ್ಗೆ ಮಾಹಿತಿ ನೀಡಲು ಅಣಕು ಪ್ರದರ್ಶನ ಏರ್ಪಡಿಸಬೇಕು.
* ಜಿಲ್ಲಾ ಮಟ್ಟದಲ್ಲಿ ಸಮನ್ವಯ/ ಸಹಯೋಗ ಸಮಿತಿ ರಚನೆ ಮಾಡುವುದು. ತಾಲ್ಲೂಕು ಮಟ್ಟದಲ್ಲಿ ಉಪಸಮಿತಿ ರಚನೆ ಮಾಡಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನೆರವು ಪಡೆಯಬೇಕು.
* ವನ್ಯಜೀವಿಗಳು ಆಹಾರ ಹುಡುಕಿಕೊಂಡು ಹೊರಗೆ ಬರುವುದನ್ನು ನಿಗ್ರಹಿಸಬೇಕು. ಬೇಸಿಗೆಯ ಕಾಲದಲ್ಲಿ ವನ್ಯಜೀವಿಗಳಿಗೆ ಅರಣ್ಯದೊಳಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು.
* ಈ ಸಮಿತಿ ನಿಯಮಿತವಾಗಿ ಸಭೆ ನಡೆಸಿ ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಶ್ರಮಿಸಬೇಕು.
* ಅರಣ್ಯದಲ್ಲಿ ವ್ಯಾಪಕವಾಗಿ ಹರಡುವ ಲಾಂಟಾನ ಕಳೆಯ ತೆಗೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ವನ್ಯಪ್ರಾಣಿಗಳಿಗೆ ಮೇವಿಗೆ ಕೊರತೆ ಉಂಟಾಗುತ್ತದೆ ಎಂದು ಹೇಳಿದರು.
* ಕರ್ನಾಟಕದಲ್ಲಿ ಆನೆಗಳ ಸಂಖ್ಯೆ 6,395 ಇದ್ದು, ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಹುಲಿ ಸಂಖ್ಯೆ 563 ಇದ್ದು, ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಹಾಗೂ 1,879 ಚಿರತೆಗಳಿವೆ., ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ ಎಂದು ಸಿದ್ದರಾಮಯ್ಯ ಅವರು ವಿವರಿಸಿದರು.
-
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: ಮಾ.6 ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ, ಸಮಯ, ನೇರ ಪ್ರಸಾರ ಲಿಂಕ್, ವಿವರ -
ಕರ್ನಾಟಕ ಬಜೆಟ್ 2026: ಹೆಚ್.ಡಿ.ಕುಮಾರಸ್ವಾಮಿ ಟೀಕೆ: ಸಿದ್ದರಾಮಯ್ಯ ಬಜೆಟ್ ರಾಜ್ಯದ ಆರ್ಥಿಕತೆಗೆ ಅಪಾಯ -
ಬಜೆಟ್ನಲ್ಲಿ ಜನರ ಮೇಲೆ ಸಾಲದ ಹೊರೆ, ಖಾಲಿ ಚೊಂಬು ನೀಡಿದ ಕಾಂಗ್ರೆಸ್ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ -
ಮುಖ್ಯಮಂತ್ರಿಗಳಿಂದ ದಿಕ್ಕು-ದೆಸೆ ಇಲ್ಲದ ಅಭಿವೃದ್ಧಿ ಶೂನ್ಯ ಬಜೆಟ್ ಮಂಡನೆ: ಬಸವರಾಜ ಬೊಮ್ಮಾಯಿ -
45,000 ಕೋಟಿ ರೂಪಾಯಿ ಸಂಗ್ರಹ ಗುರಿ, ಮದ್ಯಪ್ರಿಯರಿಗೆ ದಿಢೀರ್ ಎದುರಾಯ್ತು ಆಘಾತ... Karnataka Budget 2026 -
ಶ್ರೀ ಮಾತಾ ವೈಷ್ಟೋದೇವಿ ಭಕ್ತರಿಗೆ ಕರ್ನಾಟಕ ಸರ್ಕಾರದ ವತಿಯಿಂದ ಭರ್ಜರಿ ಸುದ್ದಿ | Karnataka Budget 2026 -
ರಾಜ್ಯ ಬಜೆಟ್ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ -
ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಬಜೆಟ್ನಲ್ಲಿ ಘೋಷಣೆ -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
ಸಿನಿಮಾ ಚಿತ್ರೀಕರಣ ಅನುಮತಿಗೆ "ಸಿನಿ ಮಿತ್ರ" ಆನ್ಲೈನ್ ವ್ಯವಸ್ಥೆ: ಸ್ಯಾಂಡಲ್ವುಡ್ಗೆ ಸಿದ್ದರಾಮಯ್ಯ ಬಜೆಟ್ ಕೊಟ್ಟಿದ್ದೇನು? -
ದಕ್ಷಿಣ ಕನ್ನಡ ವಿಭಾಗಕ್ಕೆ ಆನೆ ಕಾರ್ಯಪಡೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ












Click it and Unblock the Notifications