Manmohan Singh Death: ಮನಮೋಹನ್ ಸಿಂಗ್ ಹೇಳಿದ್ದ ಆ ಒಂದು ಮಾತನ್ನು ಸ್ಮರಿಸಿದ ಸಿದ್ದರಾಮಯ್ಯ, ಏನದು?
ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಸಿಎಂ ನೆನೆದಿದ್ದಾರೆ.
ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸಂತಾಪ ಸಭೆಯಲ್ಲಿ ಅವರು ಮಾತನಾಡಿದ್ದಾರೆ. ದೇಶದ ಆರ್ಥಿಕ ಸಮಸ್ಯೆಗಳನ್ನು ನಿಖರವಾಗಿ ಗ್ರಹಿಸಿ ಅವುಗಳನ್ನು ಪರಿಹರಿಸುತ್ತಿದ್ದ ಅವರು ನಿರ್ಗವಿ, ಅತ್ಯಂತ ವಿನಯಶೀಲರಾಗಿದ್ದರು. ತಾವು ಬದುಕಿರುವಾಗ ನನ್ನ ಕೆಲಸಗಳಿಗೆ ಹೆಚ್ಚು ಮಾನ್ಯ ಸಿಗದಿದ್ದರೂ ಮುಂದೆ ನಮ್ಮ ಕೆಲಸಗಳಿಗೆ ಹೆಚ್ಚು ಮಹತ್ವ ಸಿಗಲಿದೆ ಎಂದು ಮನಮೋಹನ್ ಸಿಂಗ್ ಅವರು ಅವತ್ತೇ ಹೇಳಿದ್ದರು ಎಂದು ಮೆಲುಕು ಹಾಕಿದ್ದಾರೆ.

ಮನಮೋಹನ್ ಸಿಂಗ್ ಅವರ ಬದುಕಿನ ಮಾರ್ಪಾಡು ನೋಡಿದಾಗ ಆಶ್ಚರ್ಯವಾಗುತ್ತದೆ. ಅತ್ಯಂತ ಕಡುಬಡತನದ ಕುಟುಂಬದಲ್ಲಿ ಜನಿಸಿ, ವಿಶ್ವ ಶ್ರೇಷ್ಠ ಆರ್ಥಿಕ ತಜ್ಞರಾಗಿ ಬೆಳೆದು ಎರಡು ಬಾರಿ ದೇಶದ ಪ್ರಧಾನಿಯಾದರು. ಇವರಿಗಿಂತ ದೊಡ್ಡ ಆರ್ಥಿಕ ತಜ್ಞರು ಇರಬಹುದು. ಆದರೆ ಬಹಳ ಮೃದು ಸ್ವಭಾವದ, ಮಿತ ಭಾಷಿಯಾಗಿ, ಮಧ್ಯಮ ಮತ್ತು ಬಡಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದವರು ಮನಮೋಹನ್ ಸಿಂಗ್ ಎಂದು ಬಣ್ಣಿಸಿದ್ದಾರೆ.
ನಾನು ಹಲವು ಬಾರಿ ಮನಮೋಹನ್ ಸಿಂಗ್‌ರನ್ನು ಭೇಟಿಯಾಗಿದ್ದೆ. ಸಂಯಮದಿಂದ ನಮ್ಮ ಮಾತನ್ನು ಕೇಳಿಸಿಕೊಂಡು ಬಳಿಕ ಪ್ರಾಮಾಣಿಕ ಅಭಿಪ್ರಾಯ ನೀಡುತ್ತಿದ್ದರು. ತಾವು ಅಲಂಕರಿಸಿದ ಎಲ್ಲ ಹುದ್ದೆಗಳಿಗೂ ನ್ಯಾಯ ಒದಗಿಸಿದರು. ಆರ್.ಬಿ.ಐ ಗವರ್ನರ್ ಆಗಿ, ಆರ್ಥಿಕ ಸಚಿವರಾಗಿ, ಹತ್ತು ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಎಲ್ಲ ಹುದ್ದೆಗಳಿಗೂ ಪ್ರಾಮಾಣಿಕ ನ್ಯಾಯ ಒದಗಿಸಿದರು ಎಂದು ಶ್ಲಾಘಿಸಿದ್ದಾರೆ.

ಸೋನಿಯಾಗಾಂಧಿ ಅವರು ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಆ ಹುದ್ದೆಗೆ ಮನಮೋಹನ್ ಸಿಂಗ್ ಅವರನ್ನು ಆರಿಸಿದರು. ಒದಗಿಬಂದ ಅವಕಾಶದ ಸಂಪೂರ್ಣ ಸದುಪಯೋಗ ಮಾಡಿಕೊಂಡು ಹತ್ತು ವರ್ಷಗಳ ಕಾಲ ದೇಶವನ್ನು ಅತ್ಯಂತ ಸದೃಢವಾಗಿ ಮುನ್ನಡೆಸಿದರು. ಭಾರತ ಆರ್ಥಿಕ ಸಂಕಷ್ಟದಲ್ಲಿದ್ದಾಗ ಉದಾರೀಕರಣ ಜಾರಿ ಮಾಡಿ ದೇಶವನ್ನು ಆರ್ಥಿಕವಾಗಿ ಮೇಲೆತ್ತಿದರು ಎಂದು ನೆನೆದಿದ್ದಾರೆ.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗುವ ಮೊದಲು ದೇಶದ ಆರ್ಥಿಕತೆಯನ್ನು ವಿಶ್ವ ಆರ್ಥಿಕತೆ ಜೊತೆಗೆ ಮುಕ್ತಗೊಳಿಸಿರಲಿಲ್ಲ. ಮುಕ್ತಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ಹೊಸ ಚೈತನ್ಯ ತುಂಬಿದರು. ಆಹಾರ ಭದ್ರತೆ, ಶಿಕ್ಷಣ ಹಕ್ಕು ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ ಸೇರಿದಂತೆ ಹಲವು ಮೂಲಭೂತ ಹಕ್ಕುಗಳನ್ನು ಜಾರಿಗೊಳಿಸಿ ದೇಶದ ಬಡವರು, ಮಧ್ಯಮ ವರ್ಗದವರನ್ನು ಆರ್ಥಿಕವಾಗಿ ಮೇಲೆತ್ತುವುದರಲ್ಲಿ ಯಶಸ್ವಿಯಾದರು. ಮನಮೋಹನ್ ಸಿಂಗ್ ಅವರ ಅಗಲಿಕೆ ಇಡೀ ವಿಶ್ವ ಆರ್ಥಿಕತೆಗೆ ಆಗಿರುವ ನಷ್ಟ ಎಂದು ಸಂತಾಪ ಸೂಚಿಸಿದ್ದಾರೆ.

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನಾವು ಆರಂಭಿಸಿದಾಗ ನಾವು ಮನಮೋಹನ್ ಸಿಂಗ್ ಅವರನ್ನು ಇಲ್ಲಿಗೆ ಕರೆಸಿದ್ದೆವು. ಕರ್ನಾಟಕದ ಆರ್ಥಿಕತೆ ಬಗ್ಗೆ ಒಂದು ಕಾರ್ಯಕ್ರಮಕ್ಕೆ ನಾವು ಕರೆಸಿದ್ದೆವು. ಆಗ, ನಮ್ಮ ಅವಧಿಯಲ್ಲಿ ರಾಜ್ಯದ ಆರ್ಥಿಕತೆ ಅತ್ಯಂತ ಸದೃಢವಾಗಿದೆ ಎಂದು ಮೆಚ್ಚುಗೆ ಸೂಚಿಸಿದ್ದರು. ಅವರ ಜ್ಞಾನ ಭಾರತದ ಅನೇಕ ಸಮಸ್ಯೆಗಳಿಗೆ ಪರಹಾರ ಕಂಡುಕೊಳ್ಳಲು ಸಾಧ್ಯವಾಯಿತು ಎಂದಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು











Click it and Unblock the Notifications