ನೇತ್ರದಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಪತ್ರ
ಬೆಂಗಳೂರು, ನ.29 : 'ವರನಟ ಡಾ.ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸಲು ಕಣ್ಣುಗಳನ್ನು ದಾನ ಮಾಡಿ' ಎಂದು ಕರೆ ನೀಡಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮರಣ ನಂತರ ನೇತ್ರದಾನ ಮಾಡುವುದಾಗಿ ಘೋಷಿಸಿದ್ದಾರೆ.
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಶನಿವಾರ ಡಾ.ರಾಜ್ ಸ್ಮಾರಕವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಎಲ್ಲರೂ ನೇತ್ರದಾನ ಮಾಡಿ, ಕಣ್ಣಿಲ್ಲದವರಿಗೆ ಬೆಳಕು ನೀಡಿ, ಆ ಸಂತೋಷವನ್ನು ಹಂಚಿಕೊಳ್ಳಿ ಎಂದು ಕರೆ ನೀಡಿದರು.

ಡಾ.ರಾಜ್‌ಕುಮಾರ್ ಅವರು ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಕಣ್ಣಿಲ್ಲದವರಿಗೆ ಬೆಳಕು ನೀಡಿದ್ದಾರೆ. ನಾವು ನೇತ್ರದಾನ ಮಾಡುವ ಮೂಲಕ ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ಕಾರ್ಯಕ್ರಮದಲ್ಲೇ ಮರಣದ ನಂತರ ತಾವು ನೇತ್ರದಾನ ಮಾಡುವುದಾಗಿ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆ ಕುರಿತ ಪತ್ರಕ್ಕೆ ಸಹಿ ಹಾಕಿದರು. ನೇತ್ರದಾನ ಮಾಡುವ ಮೂಲಕ ನಾನು ರಾಜ್‌ಗೆ ಗೌರವ ಸಲ್ಲಿಸುತ್ತಿದ್ದೇನೆ ಎಂದರು. [ರಾಜ್ ಸ್ಮಾರಕ ಉದ್ಘಾಟನೆಯ ವಿವರಗಳು ಇಲ್ಲಿವೆ]

ಡಾ.ರಾಜ್ ಕುಮಾರ್ ಅವರಿಗೆ ಕನ್ನಡ ನಾಡು, ನುಡಿ, ಸಂಸ್ಕೃತಿಯ ಬಗ್ಗೆ ಅಪಾರವಾದ ಗೌರವಿತ್ತು ಎಂದು ಹೇಳಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ ಎಂದು ಹೇಳಿದರು. ರಾಜ್ ಕುಮಾರ್ ಅವರಿಗೆ ಅವರೇ ಸಾಟಿ, ಎಲ್ಲಾ ಪಾತ್ರಗಳಿಗೂ ಜೀವ ತುಂಬಿದ ಅವರು, ತಮ್ಮ ನಟನೆ ಮೂಲಕ ಜನರನ್ನು ತಲುಪುವುದರ ಜೊತೆ ತಮ್ಮ ಸರಳತೆ ಮೂಲಕ ಜನರಿಗೆ ಹತ್ತಿರವಾದರು ಎಂದು ಸಿಎಂ ಬಣ್ಣಿಸಿದರು.
ಡಾ.ರಾಜ್ ಅವರಿಗಿದ್ದ ವಿನಯ, ಸರಳ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಬೇಕು ಎಂದು ಕರೆ ನೀಡಿದ ಸಿಎಂ, ಡಾ.ರಾಜ್ ನಮ್ಮ ಜಿಲ್ಲೆಯವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತಿದೆ. ನಾನು ಸಿಎಂ ಆಗಿರುವಾಗಲೇ ಅವರ ಸ್ಮಾರಕ ಲೋಕಾರ್ಪಣೆಯಾಗುತ್ತಿದೆ ಎಂದರು.

ನಮ್ಮ ಕಾಡಿನವರು : 'ನಾವು ಡಾ.ರಾಜ್ ಅವರನ್ನು ಭೇಟಿ ಮಾಡಿದರೆ ಬನ್ನಿ..ಬನ್ನಿ ನಮ್ಮ ಕಾಡಿನವರು ಬಂದಿದ್ದೀರಿ' ಎಂದು ಪ್ರೀತಿಯಿಂದ ಹೇಳುತ್ತಿದ್ದರು. ರಾಜ್‌ಗೆ ಅವರ ಊರಿನವರೆಂದರೆ ಬಹಳ ಪ್ರೀತಿ ಇತ್ತು. ಮೈಸೂರಿನವರನ್ನು ನಮ್ಮ ಕಾಡಿನವರು ಎಂದು ಹೇಳುತ್ತಿದ್ದರು ಎಂದು ಸಿದ್ದರಾಮಯ್ಯ ಅವರು ಹಳೆಯ ನೆನಪನ್ನು ಹಂಚಿಕೊಂಡರು.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ?












Click it and Unblock the Notifications