Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಸ್ಫೋಟ
ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಇದರ ನೇರ ಪರಿಣಾಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ.
ವಜಾ ಮಾಡಲು ಕಾರಣವೇನು?
ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ಶಮನೂರು ಅವರಿಗೆ ಟಿಕೆಟ್ ನೀಡಿತ್ತು. ಆದರೆ, ಈ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ನಸೀರ್ ಅಹ್ಮದ್ ಸೇರಿದಂತೆ ಪಕ್ಷದ ಹಲವು ಅಲ್ಪಸಂಖ್ಯಾತ ನಾಯಕರು ಪಟ್ಟು ಹಿಡಿದಿದ್ದರು. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಇವರು ಪಕ್ಷದ ಅಧಿಕೃತ ಅಭ್ಯರ್ಥಿ ಪರ ಪ್ರಚಾರದಿಂದ ದೂರ ಉಳಿದಿದ್ದರು ಎನ್ನಲಾಗಿದೆ. ಅಲ್ಲದೆ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ದೂರುಗಳು ಕೂಡ ಹೈಕಮಾಂಡ್ ಮೆಟ್ಟಿಲೇರಿದ್ದವು.

ನಸೀರ್ ಅಹ್ಮದ್ ಅವರನ್ನು ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನೇಮಿಸಿ ಹೊರಡಿಸಲಾಗಿದ್ದ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಹೈಕಮಾಂಡ್ ಸೂಚನೆಯ ಮೇರೆಗೆ ಮುಖ್ಯಮಂತ್ರಿಗಳು ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸರಣಿ ರಾಜೀನಾಮೆ & ಅಸಮಾಧಾನ
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಸೀರ್ ಅಹ್ಮದ್ ಅವರೂ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ ಕೂಡ ನಜೀರ್ ಅವರೂ ರಾಜೀನಾಮೆ ನೀಡಬಹುದು ಎಂದು ಅಂದುಕೊಂಡಿದ್ದೇನೆ, ಇಲ್ಲಿವರೆಗೆ ಕೊಟ್ಟಿಲ್ಲ ಎಂದಿದ್ದರು. ಆದರೆ ಅವರು ರಾಜೀನಾಮೆ ನೀಡಲು ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ ಸರ್ಕಾರವೇ ಅವರನ್ನು ಹುದ್ದೆಯಿಂದ ಮುಕ್ತಗೊಳಿಸಿದೆ.
ಈ ಬೆಳವಣಿಗೆಯು ಅಲ್ಪಸಂಖ್ಯಾತ ನಾಯಕರು ಮತ್ತು ಕಾಂಗ್ರೆಸ್ ಸರ್ಕಾರದ ನಡುವಿನ ಶೀತಲ ಸಮರಕ್ಕೆ ಕಾರಣವಾಗಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರ ನಡೆ ಕೂಡ ಪಕ್ಷದ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಎಐಸಿಸಿ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದ್ದು, ಮುಂಬರುವ ದಿನಗಳಲ್ಲಿ ಪಕ್ಷದಲ್ಲಿ ಇನ್ನು ಕೆಲವು ಬದಲಾವಣೆಗಳಾಗುವ ಸಾಧ್ಯತೆ ಇದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ.
ಜಮೀರ್ ಅಚ್ಚರಿ ಹೇಳಿಕೆ
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ಅವರನ್ನು ವಜಾಗೊಳಿಸಿದ ಬೆನ್ನಲ್ಲೇ, ಸಚಿವ ಜಮೀರ್ ಅಹಮದ್ ಖಾನ್ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ನಸೀರ್ ಅಹ್ಮದ್ ಅವರ ಪರವಾಗಿ ಬ್ಯಾಟಿಂಗ್ ಮಾಡಿರುವ ಜಮೀರ್, ಈ ಬೆಳವಣಿಗೆಯ ಹಿಂದೆ ಭಿನ್ನಾಭಿಪ್ರಾಯಗಳಿವೆಯೇ ಎಂಬ ಅನುಮಾನಕ್ಕೆ ಕಾರಣರಾಗಿದ್ದಾರೆ.
ನಸೀರ್ ಅಹ್ಮದ್ ಅವರು ದಾವಣಗೆರೆ ಉಪಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದರು ಎಂಬ ಆರೋಪವನ್ನು ಜಮೀರ್ ಅಹಮದ್ ಅಲ್ಲಗಳೆದಿದ್ದಾರೆ. ನಸೀರ್ ಅಹ್ಮದ್ ಅವರು ಬಾಗಲಕೋಟೆ ಚುನಾವಣಾ ಜವಾಬ್ದಾರಿಯನ್ನು ಹೊತ್ತಿದ್ದರು. ಸ್ವತಃ ಮುಖ್ಯಮಂತ್ರಿಗಳೇ ಅವರಿಗೆ ಬಾಗಲಕೋಟೆಯಲ್ಲಿ ಬೀಡುಬಿಡುವಂತೆ ಸೂಚಿಸಿದ್ದರು. ದಾವಣಗೆರೆಗೆ ಬರುವ ಬಗ್ಗೆ ನಸೀರ್ ಕೇಳಿದಾಗಲೂ, ಬಾಗಲಕೋಟೆಯಲ್ಲಿಯೇ ಕೆಲಸ ಮುಂದುವರಿಸಲು ಸಿಎಂ ತಿಳಿಸಿದ್ದರು. ಅದರಂತೆ ಅವರು 10 ದಿನಗಳ ಕಾಲ ಅಲ್ಲಿಯೇ ಕಾರ್ಯನಿರ್ವಹಿಸಿದ್ದರು ಎಂದು ಜಮೀರ್ ಸ್ಪಷ್ಟಪಡಿಸಿದ್ದಾರೆ.
ಕಳೆದ ವಾರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ ನಂತರ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಸ್ತುತ ಇರುವ ಅಲ್ಪಸಂಖ್ಯಾತ ಘಟಕವನ್ನೇ ಸಂಪೂರ್ಣವಾಗಿ ವಿಸರ್ಜಿಸಿ, ಹೊಸದಾಗಿ ಪುನರ್ ರಚಿಸುವುದಾಗಿ ಘೋಷಿಸಿದ್ದರು. ಪಕ್ಷದ ಶಿಸ್ತು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಂದೇಶವನ್ನು ಇದು ನೀಡಿದೆ. ಈಗ ಮುಖ್ಯಮಂತ್ರಿಗಳ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಸೀರ್ ಅಹ್ಮದ್ ಅವರ ತಲೆದಂಡವಾಗಿರುವುದು ಸಚಿವ ಜಮೀರ್ ಅಹಮದ್ ಅವರಿಗೆ ಪರೋಕ್ಷವಾಗಿ ನೀಡಿದ ಎಚ್ಚರಿಕೆ ಎಂದು ಹೇಳಲಾಗುತ್ತಿದೆ.
-
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ











Click it and Unblock the Notifications