ಮೂರು ದಿನ ಸಿದ್ದರಾಮನ ಹುಂಡಿಯಲ್ಲಿ ಸಿಎಂ ವಾಸ್ತವ್ಯ
ಬೆಂಗಳೂರು, ನವೆಂಬರ್ 28 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಮೂರು ದಿನಗಳ ಕಾಲ ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಸಿದ್ದರಾಮಯ ಹುಂಡಿಯಲ್ಲಿ ನಡೆಯಲಿರುವ ಕುಟುಂಬದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಂಗಳವಾರ ಸಂಜೆ ಸಿದ್ದರಾಮಯ್ಯ ಅವರು ಸಿದ್ದರಾಮನ ಹುಂಡಿಗೆ ತೆರಳಲಿದ್ದಾರೆ. ಶುಕ್ರವಾರ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಆದ್ದರಿಂದ, ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಅವರ ಯಾವುದೇ ಕಾರ್ಯಕ್ರಮಗಳು ಇರುವುದಿಲ್ಲ.

ಸಿದ್ದರಾಮಯ್ಯ ಅವರ ಸ್ವಂತ ಊರಾದ ಸಿದ್ದರಾಮನ ಹುಂಡಿಯಲ್ಲಿ ತಮ್ಮನ ಮಗನ ಮದುವೆ ನಡೆಯಲಿದೆ. ಮದುವೆ ಶಾಸ್ತ್ರ ಆರಂಭವಾದ ದಿನದಿಂದ ಮೂರು ದಿನಗಳ ಕಾಲ ಸಿದ್ದರಾಮಯ್ಯ ಅವರು ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಸೋಮವಾರ ಸಿದ್ದರಾಮಯ್ಯ ಅವರು ಗದಗ ಜಿಲ್ಲೆಯ ಪ್ರವಾಸ ಕೈಗೊಂಡಿದ್ದರು. ನರಗುಂದ ಹಾಗೂ ರೋಣ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರೂ.1524 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ಮಾಡಿದರು. ಹಲವು ಯೋಜನೆಗಳನ್ನು ಉದ್ಘಾಟಿಸಿದರು.
ನರಗುಂದದಲ್ಲಿ ಸರ್ಕಾರಿ ಇಂಜಿನಿಯರಿಂಗ್ ಮಹಾವಿದ್ಯಾಲಯದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದರು. ತಾಲ್ಲೂಕಿನಲ್ಲಿ ಕೃಷಿಭಾಗ್ಯ ಯೋಜನೆಯಡಿ ನಿರ್ಮಾಣಗೊಂಡ 5,111 ಕೃಷಿ ಹೊಂಡಗಳಿಗೆ ಸಾಂಕೇತಿಕವಾಗಿ ಬಾಗೀನ ಅರ್ಪಿಸಿದರು.












Click it and Unblock the Notifications