ನರೇಂದ್ರ ಮೋದಿ, ಅಮಿತ್ ಶಾ ಮೇಲೆ ಯತ್ನಾಳ್ ಸೇಡು ತೀರಿಸಿಕೊಳ್ಳುತ್ತಿದ್ದಾರೆ!

ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ವಾಕ್ಸಮರ ಮುಂದುವರೆದಿದೆ. ಸಿದ್ದರಾಮಯ್ಯ ಜೊತೆ ವೇದಿಕೆ ಹಂಚಿಕೊಂಡ ಮೌಲ್ವಿ ತನ್ವೀರ್ ಹಾಶ್ಮಿ ಐಸಿಸಿ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸುವ ಮೂಲಕ ಯತ್ನಾಳ್ ವಿವಾದದಕ್ಕೆ ನಾಂದಿ ಹಾಡಿದ್ದರು.

ಶುಕ್ರವಾರ ಯತ್ನಾಳ್ ಅವರು ಮೌಲ್ವಿ ತನ್ವೀರ್ ಹಾಶ್ಮಿ ಜೊತೆ ವ್ಯವಹಾರದಲ್ಲಿ ಪಾಲು ಹೊಂದಿದ್ದಾರೆ ಎನ್ನುವ ವರದಿ ಬಂದ ನಂತರ, ಸಾಬೀತುಪಡಿಸುವಂತೆ ಯತ್ನಾಳ್ ಸವಾಲು ಹಾಕಿದ್ದರು. ಈಗ ಅದೇ ಮೌಲ್ವಿ ಜೊತೆ ಪ್ರಧಾನಿ ನರೇಂದ್ರ ಮೋದಿ ಇರುವ ಫೋಟೊಗಳನ್ನು ಸಿದ್ದರಾಮಯ್ಯ ಹಂಚಿಕೊಂಡಿದ್ದು ಯತ್ನಾಳ್‌ಗೆ ಪ್ರಶ್ನೆಗಳನ್ನು ಕೇಳಿದ್ದಾರೆ.

 CM Siddaramaiah Questions MLA Yatnal Regarding Reports of Business Association with Maulvi

ಸರಣಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ಯತ್ನಾಳ್ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಹೇಳಿದ್ದೇನು?

ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಪೋಟೊವನ್ನು ಹಿಡ್ಕೊಂಡು ಬಿಜೆಪಿ ಶಾಸಕ ಯತ್ನಾಳ್ ಅವರು ಅವರು ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ ಎಂದು ಹೇಳಿದ್ದಾರೆ.

ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರ ಮೋದಿ ಅವರೂ ಸಂಬಂಧ ಹೊಂದಿರುವುದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ಪೋಟೊಗಳು ಸ್ಪಷ್ಟವಾಗಿ ಹೇಳುತ್ತಿವೆ. ದೀರ್ಘಕಾಲದಿಂದ ಹಾಶ್ಮಿ ಅವರಿಗೆ ಅತ್ಯಂತ ಆತ್ಮೀಯರಾಗಿರುವ ಮತ್ತು ಊರಿನಲ್ಲಿ ತನ್ನ ನೆರೆಹೊರೆಯಾಗಿರುವ ಯತ್ನಾಳ್ ಅವರಿಗೆ ಇದು ತಿಳಿದಿರಲಿಲ್ಲ ಎನ್ನುವುದು ಅಚ್ಚರಿ ಎಂದು ಹೇಳಿದ್ದಾರೆ.

ಸೇಡು ತೀರಿಸಿಕೊಳ್ತಿದ್ದಾರ ಯತ್ನಾಳ್?

ರಾಜ್ಯ ಬಿಜೆಪಿ ಅಧ್ಯಕ್ಷತೆ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ತಪ್ಪಿಹೋಗಿರುವುದರಿಂದ ಅವರು ಕೆರಳಿ ಕೆಂಡವಾಗಿದ್ದಾರೆ. ಇದಕ್ಕೆ ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದಲೇ ಮೌಲ್ವಿ ತನ್ವೀರ್ ಹಾಶ್ಮಿ ಜೊತೆಗಿನ ನನ್ನ ಪೋಟೋವನ್ನು ತೋರಿಸಿ ಆರೋಪ ಮಾಡಿದ್ದಾರೆ. ಈ ಆರೋಪದ ನಂತರ ಮೌಲ್ವಿ ಅವರ ಜೊತೆಗಿನ ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧದ ವಿವರವೂ ಹೊರಬರಲಿದೆ ಎನ್ನುವುದು ಅವರಿಗೆ ಖಂಡಿತ ಗೊತ್ತಿತ್ತು. ಅವೆಲ್ಲವೂ ಬಯಲಾಗಿ ಪ್ರಧಾನಿ ಮತ್ತು ಬಿಜೆಪಿ ನಾಯಕರು ಮುಜುಗರಕ್ಕೀಡಾಗಲಿ ಎನ್ನುವ ದುರುದ್ದೇಶದಿಂದ ನನ್ನ ವಿರುದ್ಧ ಆರೋಪ ಮಾಡುವ ಆಟವಾಡಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮೌಲ್ವಿ ಹಾಶ್ಮಿ ಜೊತೆ ನನ್ನ ಸ್ನೇಹವನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದೇನೆ. ಸ್ವತಃ ಮೌಲ್ವಿಯವರೇ ತಮ್ಮ ಮೇಲೆ ಯತ್ನಾಳ್ ಮಾಡಿರುವ ಆರೋಪದ ತನಿಖೆಯನ್ನು ಕೇಂದ್ರ ಬಿಜೆಪಿ ಸರ್ಕಾರ ನಡೆಸಲಿ ಎಂದು ಸವಾಲು ಹಾಕಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯೆ ನೀಡಬೇಕು.

ತನ್ವೀರ್ ಹಾಶ್ಮಿ ಅವರಿಗೆ ನಿಜವಾಗಿ ಐಸಿಎಸ್ ಜೊತೆ ಸಂಬಂಧ ಇದ್ದರೆ ಆ ಬಗ್ಗೆ ತನಿಖೆಗೆ ಪ್ರಧಾನಿಯವರು ತಕ್ಷಣ ಆದೇಶ ನೀಡಬೇಕು ಮತ್ತು ಹಾಶ್ಮಿ ಮತ್ತು ತನ್ನ ಸಂಬಂಧದ ವಿವರವನ್ನು ದೇಶದ ಮುಂದಿಡಬೇಕು. ಇದು ಎರಡೂ ಮಾಡದೆ ಇದ್ದರೆ ಇಂತಹ ಸುಳ್ಳು ಆರೋಪ ಮಾಡುವ ಯತ್ನಾಳ್ ವಿರುದ್ಧ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್‌ವೈ ವಿರುದ್ಧ ಕೂಡ ಯತ್ನಾಳ್ ಹಲವು ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲಿ ಸಿಎಂ ಆಗಬೇಕೆಂದರೆ ಹೈಕಮಾಂಡ್‌ಗೆ 2000 ಕೋಟಿ ರೂ. ನೀಡಬೇಕು ಎನ್ನುವ ಆರೋಪ ಕೂಡ ಮಾಡಿದ್ದರು. ಯತ್ನಾಳ್ ಅವರು ಉನ್ನತ ನಾಯಕರ ವಿರುದ್ಧ ಆರೋಪ ಮಾಡುತ್ತಿರುವ ಅವರ ಹಿಂದೆ ಇರುವ ಶಕ್ತಿ ಯಾವುದು ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯಲ್ಲಿರುವ ಯಾವ 'ಜೀ' ಗಳ ಬಲದಿಂದ ಇಂತಹ ಸ್ವಪಕ್ಷೀಯರ ವಿರುದ್ಧ ಇಂತಹ ಮಾನಹಾನಿಕರ ಆರೋಪ ಮಾಡಿಯೂ ಅವರೂ ಬಚಾವಾಗುತ್ತಿದ್ದಾರೆ ಎನ್ನುವುದು ಕೂಡಾ ಬಯಲಾಗಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+