ಗುಜರಾತ್ ಚುನಾವಣೆಯಲ್ಲಿ ಸೋತು ಗೆದ್ದಿದ್ದೇವೆ : ಸಿದ್ದರಾಮಯ್ಯ

Recommended Video

      ಗುಜರಾತ್ ಹಿಮಾಚಲ ಪ್ರದೇಶದ ಚುನಾವಣೆ ಫಲಿತಾಂಶದ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ | Oneindia Kannada

      ಯಾದಗಿರಿ, ಡಿಸೆಂಬರ್ 18 : 'ಗುಜರಾತ್ ಚುನಾವಣೆಯಲ್ಲಿ ನಾವು ಸೋತು ಗೆದ್ದಿದ್ದೇವೆ. ರಾಜ್ಯದಲ್ಲಿ ನರೇಂದ್ರ ಮೋದಿ ಅವರ ಪ್ರಭಾವ ಕುಗ್ಗಿದೆ' ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

      ಸೋಮವಾರ ಯಾದಗಿರಿಯಲ್ಲಿ ಮಾತನಾಡಿದ ಅವರು, 'ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ಫಲಿತಾಂಶ ಸುಧಾರಿಸಿದೆ. ನರೇಂದ್ರ ಮೋದಿ, ಅಮಿತ್ ಶಾ ಆಟ ಕರ್ನಾಟಕದಲ್ಲಿ ನಡೆಯುವುದಿಲ್ಲ' ಎಂದು ಸ್ಪಷ್ಟಪಡಿಸಿದರು.

      CM Siddaramaiah reaction on Gujarat, Himachal Pradesh result

      'ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತು ಗೆದ್ದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ತವರು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ತವರು ರಾಜ್ಯವದು. ಕೇಂದ್ರ ಸರ್ಕಾರವೂ ಅವರದ್ದೆ. ಗೆಲುವು ಸುಲಭವಾಗಿದೆ' ಎಂದರು.

      'ಗುಜರಾತ್ ರಾಜ್ಯದಲ್ಲಿ ನರೇಂದ್ರ ಮೋದಿ ಅವರ ಪ್ರಭಾವ ಕುಗ್ಗಿದೆ. ನೋಟು ಬ್ಯಾನ್, ಜಿಎಸ್‌ಟಿಗೆ ಜನರು ಬೆಂಬಲ ನೀಡಿದ್ದರೆ ಕಾಂಗ್ರೆಸ್ ಸಂಪೂರ್ಣವಾಗಿ ಸೋಲಬೇಕಿತ್ತಲ್ಲವೇ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

      'ಎರಡೂ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಕರ್ನಾಟಕದ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ತೀರ್ಪನ್ನು ಸ್ವಾಗತಿಸುತ್ತೇವೆ' ಎಂದು ಸಿದ್ದರಾಮಯ್ಯ ತಿಳಿಸಿದರು.

      '2018ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಜೆಡಿಎಸ್ ಕಳೆದ ಬಾರಿಗಿಂತ ಕಡಿಮೆ ಸ್ಥಾನಗಳಿಸಲಿದೆ' ಎಂದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+