ಐದು ತಿಂಗಳ ಹಿಂದೆಯೇ ಸಂಪುಟ ಪುನಾರಚನೆಗೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್: ಸಿದ್ದರಾಮಯ್ಯ ತಡ ಮಾಡಿದ್ಯಾಕೆ?

ಚಿಕ್ಕಬಳ್ಳಾಪುರ, ನವೆಂಬರ್‌ 24: ರಾಜ್ಯ ರಾಜಕೀಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ಜೋರಾಗಿತ್ತು. ಈ ಹೊತ್ತಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ. ಈ ವೇಳೆ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. ಇನ್ನೂ ಸಂಪುಟ ಪುನಾರಚನೆ ಹಾಗೂ ನಾಯಕತ್ವದ ಬದಲಾವಣೆ ಕುರಿತು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಹೈ ಕಮಾಂಡ್ ಐದು ತಿಂಗಳ ಹಿಂದೆ ಭೇಟಿಯಾದಾಗ. ಸಚಿವ ಸಂಪುಟ ಪುನರ್ ರಚನೆ ಮಾಡಲು ಸೂಚನೆ ನೀಡಿದ್ದರು. ನಾನು ಎರಡೂವರೆ ವರ್ಷ ತುಂಬಿದ ನಂತರ ಮಾಡೋಣ ಎಂದು ತಿಳಿಸಿದ್ದೆ. ಈಗ ಏನು ಸೂಚನೆ ನೀಡುತ್ತಾರೋ ಅದರಂತೆ ನಡೆಯುತ್ತೇವೆ ಎಂದು ಹೇಳಿದರು.

CM Siddaramaiah Reaction On Karnataka Cabinet Reshuffle

ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ . ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. ಸುಳ್ಳೇ ಅವರ ಮನೆ ದೇವರು ಎಂದರು.

ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ. ನಾವು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿದ್ದೆವು. ಅದರಂತೆ ನಡೆದಿದ್ದೇವೆ ಎಂದರು. ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ನಮ್ಮಲ್ಲಿ ಹೈ ಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ನಾನು ಹಾಗೂ ಡಿ. ಕೆ.ಶಿವಕುಮಾರ್ ಒಪ್ಪಬೇಕು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+