KPSC: PDO ನೇಮಕಾತಿ ಪರೀಕ್ಷೆ: ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು
ಬೆಂಗಳೂರು, ಡಿಸೆಂಬರ್ 13: ಕರ್ನಾಟಕ ಲೋಕಸೇವಾ ಆಯೋಗವು (KPSC) ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂಬಂಧಿಸಿದಂತೆ ಕರ್ನಾಟಕ ಖಾಲಿ ಇದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO Recruitment 2024) ಹುದ್ದೆಗಳಿಗೆ ಪರೀಕ್ಷೆ ನಡೆಸಿತ್ತು. ಅದರ ಪಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಸಮಿತಿ ರಚನೆ ಹಾಗೂ ವರದಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿ ನೀಡಿದ್ದಾರೆ.
ಕಲ್ಯಾಣ ಕರ್ನಾಟಕದ ಪಿಡಿಒ ಹುದ್ದೆಗಳ ನೇಮಕಾತಿಗಾಗಿ ಇತ್ತೀಚೆಗೆ ರಾಯಚೂರಿನ ಸಿಂಧನೂರಿನಲ್ಲಿ ಸರ್ಕಾರ ಕಾಲೇಜಿನಲ್ಲಿ ಪಿಡಿಒ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಮತ್ತೊಮ್ಮೆ ಪರೀಕ್ಷೆ ನಡೆಸುವಂತೆ ಆಗ್ರಹಿಸಿ ಪರೀಕ್ಷೆ ಬರೆದ ನೂರಾರು ವಿದ್ಯಾರ್ಥಿಗಳು ಪ್ರತಿಭಟಿಸಿದ್ದರು.

ಈ ವಿಚಾರವು ಬೆಳಗಾವಿ ಅಧಿವೇಶನದಲ್ಲಿ ಸದ್ದು ಮಾಡಿತು. ಸದನದಲ್ಲಿ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಶೀಲ್ ನಮೋಶಿ ಅವರು ಪರೀಕ್ಷೆ ವಿಳಂಬ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಸ್ತಾಪಿಸಿದರು.
ಇದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಪಿಡಿಒ ನೇಮಕಾತಿಗೆ ಸಂಬಂಧಿಸಿದಂತೆ ಖಾಲಿ ಹುದ್ದೆಗಳ ಭರ್ತಿಗೆ ನಡೆಸಿದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದರ ಕುರಿತು KPSC ತನಿಖೆಗಾಗಿ ತ್ರಿಸದಸ್ಯ ಉಪಸಮಿತಿಯ ವರದಿ ರಚನೆ ಮಾಡಿದೆ. ಅದರ ವರದಿ ಆಧರಿಸಿ ನಮ್ಮ ಸರ್ಕಾರ ಮುಂದಿನ ಕ್ರಮ ವಹಿಸಲಿದೆ ಎಂದು ಅವರು ತಿಳಿಸಿದರು.

ಮುಂದುವರಿದು ಮಾತನಾಡಿದ ಅವರು, ಯಾವುದೇ ಪತ್ರಿಕೆ ಸೋರಿಕೆ ಅಥವಾ ಪರೀಕ್ಷೆ ತಡವಾಗಿ ಆರಂಭವಾಗಿದೆ ಎಂಬ ಆರೋಪವನ್ನು ತಳ್ಳಿ ಹಾಕಿದರು. ಕಲ್ಯಾಣ ಕರ್ನಾಟಕದ ರಾಯಚೂರಿನ ಸಿಂಧನೂರಿನ ಸರ್ಕಾರಿ ಕಾಲೇಜೊಂದರದಲ್ಲಿ ಈ ಪಿಡಿಒ ಪರೀಕ್ಷೆ ನಡೆದಿದೆ. ಈ ಕಾಲೇಜಿನಲ್ಲಿ 800ಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
ಆದರೆ ಒಟ್ಟು ಪರೀಕ್ಷಾರ್ಥಿಗಳ ಪೈಕಿ 12 ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಮಾಡಿದ್ದಾರೆ. ಇವರು ಹೀಗೆ ಹೇಳುವ ಮೂಲಕ ಇನ್ನಿತರ ಉದ್ಯೋಗಾಕಾಂಕ್ಷಿಗಳಲ್ಲಿ ಗೊಂದಲ ಉಂಟು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.
ಸದ್ಯ ಹೀಗೆ ಆರೋಪ ಕೇಳಿ ಬಂದ ಕೂಡಲೇ ಅಗತ್ಯ ಮಾಹಿತಿ ಆಧರಿಸಿ ಒಟ್ಟು 12 ಅಭ್ಯರ್ಥಿಗಳ ದಾಖಲಿಸಲಾಗಿದೆ. ಪರೀಕ್ಷೆ ನಡೆಸುವುದರಲ್ಲಿ ವಿಳಂಬವಾಗಿಲ್ಲ. ಪಿಡಿಒ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ ಎಂದು ಮುಖ್ಯಮಂತ್ರಿಗಳು ಸದನದಲ್ಲಿ ಎರಡು ಮೂರು ಭಾರಿ ಪುನರುಚ್ಚರಿಸಿದರು. ಜೊತೆಗೆ ಕರ್ನಾಟಕ ಲೋಕಸೇವೆ ಆಯೋಗವು ಸಮಿತಿ ರಚನೆ ಮಾಡಿದೆ. ಆರೋಪಕ್ಕೆ ಸಂಬಂಧಿಸಿದಂತೆ ಏನು ವರದಿ ನೀಡಲಿದೆಯೋ ನೋಡಿಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದರು..
ಸಿಎಂ ಉತ್ತರಿಸುತ್ತಿದ್ದಂತೆ ವಿಧಾನಪರಿಷತ್ ಸದಸ್ಯ ನಮೋಶಿ ಅವರು, ಪಿಡಿಒ ಪ್ರಶ್ನೆ ಪತ್ರಿಕೆ ಅಭ್ಯರ್ಥಿಗಳಿಗೆ ನೀಡುವಲ್ಲಿ ವಿಳಂಬ ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳಿಗೆ ಹೆಚ್ಚುವರಿ ಅರ್ಧ ಗಂಟೆ ಕಾಲಾವಕಾಶ ನೀಡಲಾಗಿದೆ ಎಂದರು. ಅದೇನೆ ಇದ್ದರೂ ವರದಿ ಸಲ್ಲಿಕೆ ಬಳಿಕ ಸರ್ಕಾರ ಕಮ್ರ ಕೈಗೊಳ್ಳುತ್ತದೆ ಎಂದು ಹೇಳಿದರು..












Click it and Unblock the Notifications