Karnataka Rains: ರಾಜ್ಯದಲ್ಲಿ ಉತ್ತಮ ಮಳೆ ಯಾಕೆ ಆಗುತ್ತಿದೆ.?; ಸಿಎಂ ಸಿದ್ದರಾಮಯ್ಯ ಉತ್ತರ ಹೀಗಿತ್ತು

Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಮತ್ತೆ ಮಳೆರಾಯ ಆರ್ಭಟವನ್ನು ಮುಂದುವರೆಸಿದ್ದಾನೆ. ಕಳೆದ ಎರಡು ದಿನ ಬಿಡುವು ನೀಡಿದ್ದು, ಮತ್ತೆ ಆರ್ಭಟ ಮುಂದುವರೆಸಿದ್ದಾನೆ. ಇನ್ನು ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಏನು ಹೇಳಿದ್ದಾರೆ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಅಕ್ಟೋಬರ್‌ 21) ಬೆಳ್ಳಂಬೆಳಗ್ಗೆಯೇ ಸುಮಾರು 5 ಗಂಟೆ ವೇಳಗೆ ರಣಮಳೆ ಸುರಿದಿದೆ. ಬಳಿಕ ಬಿಸಿಲಿನ ವಾತಾವರಣ ಮುಂದುವರೆದಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಮತ್ತೆ ಭಾರೀ ಮಳೆ ಮುಂದುವರೆಯಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈಗಾಗಲೇ ನಗರದಲ್ಲಿ ಭಾರೀ ಮಳೆ ಸುರಿದ ಪರಿಣಾಮ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

CM Siddaramaiah Reacton on Karnataka Rains Know details

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದಲೂ ಮಳೆಯಾಗುತ್ತಿದೆ. ಆದರೆ, ಇಂದು ಸುರಿದ ಮಳೆಗೆ ನಗರದ ಜನರು ಧಂಗಾಗಿದ್ದಾರೆ. ಅಷ್ಟರ ಮಟ್ಟಿಗೆ ರಣಭೀಕರ ಮಳೆಯಾಗಿದೆ. ಹಾಗೆಯೇ ಇನ್ನೂ ಹಲವು ಜಿಲ್ಲೆಗಳಲ್ಲೂ ಕೂಡ ಉತ್ತಮ ಮಳೆ ಮುಂದುವರೆದಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಹೆಚ್ಚಾದಂತಾಗಿದೆ.

ಈಗಾಗಲೇ ಬೆಳಗಾವಿ, ಧಾರವಾಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೀದರ್, ಕೋಲಾರ, ಕಲಬುರಗಿ, ಹಾವೇರಿ, ಮಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಕೊಡಗು, ಮೈಸೂರು, ರಾಮನಗರ, ಮಂಡ್ಯ, ತುಮಕೂರು, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ.

ಇನ್ನೂ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಪ್ರತಿಕ್ರಿಯಿಸಿ, "ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಹೀಗಾಗಿ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ," ಎಂದು ಹೇಳಿ ಗಮನ ಸೆಳದರು. ಇನ್ನು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮತ್ತೆ 7 ದಿನಗಳ ಕಾಲ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಮಂಡ್ಯ, ತುಮಕೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಅದರಲ್ಲೂ ಮಂಗಳವಾರ (ಅಕ್ಟೋಬರ್‌ 22) ಉಡುಪಿ, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಪ್ರತ್ಯೇಕ ಭಾಗಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+