ಸಾರಿಗೆ ಇಲಾಖೆ ಚಾಲಕ ಆತ್ಮಹತ್ಯೆ: ಕುಮಾರಸ್ವಾಮಿ ಆರೋಪದಲ್ಲಿ ಹುರುಳಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ 06: ಸಾರಿಗೆ ಇಲಾಖೆ ಚಾಲಕರು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೆ ಸಚಿವ ಚೆಲುವರಾಯಸ್ವಾಮಿ ಕಾರಣ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ಚಾಲಕರು ಡೆತ್ ನೋಟಿನಲ್ಲಿ ಸಚಿವ ಚೆಲುವರಾಯಸ್ವಾಮಿಯವರ ಹೆಸರು ಬರೆದಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಚಿವರ ರಾಜೀನಾಮೆ ಕೊಡಬೇಕು ಎಂದಿರುವ ಬಗ್ಗೆ ಮಾತನಾಡಿ, ಕುಮಾರಸ್ವಾಮಿ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದಿದ್ದಾರೆ. ಚಾಲಕನ ಪತ್ನಿ ಪಂಚಾಯತಿ ಸದಸ್ಯರು, ಅಧ್ಯಕ್ಷರಾಗುವ ಪ್ರಯತ್ನ ಮಾಡುತ್ತಿದ್ದಾರೆ. ಇಲಾಖೆ ವರ್ಗಾವಣೆ ಮಾಡಿದ್ದು, ವರ್ಗಾವಣೆ ಮಾಡಿದ ಕಾರಣಕ್ಕೆ ವಿಷ ಕುಡಿದಿದ್ದಾರೆ ಎಂದರು.

CM Siddaramaiah Reacts On HD Kumaraswamy Allegations

ಕುಮಾರಸ್ವಾಮಿ ಹತಾಶರಾಗಿದ್ದಾರೆ

ಎಚ್.ಡಿ.ಕುಮಾರಸ್ವಾಮಿ ಅವರು ವರ್ಗಾವಣೆಗಳ ಬಗ್ಗೆ ಹತಾಶರಾಗಿದ್ದಾರೆ. ಸರ್ಕಾರ ವರ್ಗಾವಣೆ ಮಾಡಲೇಬೇಕು, ಮಾಡುತ್ತಿದೆ. ಅದಕ್ಕೆ ಧಂಧೆ ನಡೆದಿದೆ, ಲಂಚ ಪಡೆದಿದ್ದಾರೆ ಎನ್ನುವುದು ಸುಳ್ಳು ಆರೋಪ. ಅವರ ಕಾಲದಲ್ಲಿಯೂ ವರ್ಗಾವಣೆ ಆಗಿದ್ದವು. ಅವರು ದುಡ್ಡು ಪಡೆದಿದ್ದರೆ? ಊಹೆ ಮೇಲೆ ಹೇಳಲಾಗುವುದಿಲ್ಲ. ಹೊಸ ಸರ್ಕಾರ ಬಂದಿದೆ. ವರ್ಗಾವಣೆಯನ್ನು ಆಡಳಿದ ಹಿತದೃಷ್ಟಿಯಿಂದ ಮಾಡಬೇಕು. ಮಾರ್ಚ್, ಏಪ್ರಿಲ್‌ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ವರ್ಗಾವಣೆ ಆಗಿರಲಿಲ್ಲ. ಈಗ ಸಾಮಾನ್ಯ ವರ್ಗಾವಣೆಗಳಾಗುತ್ತಿವೆ ಎಂದರು.

ಕುಮಾರಸ್ವಾಮಿ ಅವರು ಆಡಿಯೋ ಬಿಡುಗಡೆ ಮಾಡುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಕುಮಾರಸ್ವಾಮಿ ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ. ಅವರು ಮಾಡಿರುವ ಯಾವ ಆರೋಪಗಳನ್ನು ತಾರ್ತಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರೆ? ಎಂದು ಪ್ರಶ್ನಿಸಿದರು.

ಮಾಜಿ ಶಾಸಕ ಯತೀಂದ್ರ ಅವರ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ಮಾತನಾಡಿದ ಅವರು, ಸುಮ್ಮನೆ ಯತೀಂದ್ರ ಮೇಲೆ ಆರೋಪ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರ ಮನೆ ಮಗ, ಅವರ ಅಣ್ಣ ಸಚಿವರಾಗಿದ್ದವರು. ಅವರ ಪತ್ನಿ ಶಾಸಕರು,ಅ ವರ ತಂದೆ ಪ್ರಧಾನಿಗಳಾಗಿದ್ದವರು, ಅವರ ಅಣ್ಣನ ಮಕ್ಕಳು ಶಾಸಕರಾಗಿದ್ದಾರಲ್ಲ, ಅವರನ್ನು ಏನಂತ ಕರೆಯಬೇಕು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+