ತಿರುಗಿದ ಕಾಲಚಕ್ರ: ಸಿದ್ದರಾಮಯ್ಯಗೆ ಮಾಜಿ ಸಿಎಂ ಪುತ್ರರ ಕ್ಲಾಸ್!
ಕಾಲಚಕ್ರ ತಿರುಗಿದಂತೆ ಕರ್ನಾಟಕದಲ್ಲಿ ರಾಜ್ಯ ರಾಜಕೀಯದಲ್ಲಿ ಅದೇ ಹಳೆಯ ಸನ್ನಿವೇಶಗಳು ರಿಪೀಟ್ ಆಗುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಕೇಳಿದ್ದ ಅಥವಾ ಮಾತನಾಡಿದ್ದ ವಿಷಯಗಳು ಇದೀಗ ಅವರೇ ಉತ್ತರಿಸುವಂತೆ ಆಗಿದೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ವಿಧಾನಸಭೆಯಲ್ಲಿ ತೊಡೆ ತಟ್ಟಿದ್ದರು. ಆಡಳಿತ ಪಕ್ಷದ ನಾಯಕರು ಹಾಗೂ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಸಿದ್ದರಾಮಯ್ಯ ಅವರಿಗೆ ಇದೀಗ ಅದೇ ಮಾದರಿಯ ಪರಿಸ್ಥಿತಿಗಳು ಎದುರಾಗಿವೆ. ಮುಡಾ ಹಗರಣದ ವಿಚಾರಣೆ ಸಂದರ್ಭದಲ್ಲಿ ರಾಜೀನಾಮೆ ಯಾಕೆ ಕೊಡಬೇಕು ಅಂತ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದರು. ಇದೀಗ ಮತ್ತೊಂದು ವಿಷಯದಲ್ಲಿ ಅದೇ ರೀತಿಯ ಪರಿಸ್ಥಿತಿ ಎದುರಾಗಿದೆ.
ಅತ್ತೆಗೊಂದು ಕಾಲ.. ಸೊಸೆಗೊಂದು ಕಾಲ ಎನ್ನುವಂಗೆ ಇದೀಗ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಕಾಲ ಬಂದಿದೆ. ಯಾವ ಪ್ರಶ್ನೆಯನ್ನು ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೇಳಿದ್ದರೋ ಅದೇ ಪ್ರಶ್ನೆಯನ್ನು ಇದೀಗ ಬಿ.ವಿ ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಳಿದ್ದಾರೆ. ಈ ಮೂಲಕ ಅಪ್ಪನಿಗೆ ಕೊಟ್ಟಿದ್ದ ತಿರುಗೇಟನ್ನು ಬಿ.ವೈ ವಿಜಯೇಂದ್ರ ಅವರು ತಿರುಗಿಸಿಕೊಟ್ಟಿದ್ದಾರೆ. ಅಲ್ಲದೇ ಅತ್ತ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಸಹ ಸಿದ್ದರಾಮಯ್ಯ ಹಾಗೂ ಸರ್ಕಾಟಕ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕರ್ನಾಟಕದಲ್ಲಿ ಇದೀಗ ಕಾಂಗ್ರೆಸ್ ಸರ್ಕಾರದ ಭಾಗವಾಗಿರುವವರೇ ನೀಡಿರುವ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. " ದೇಶದಲ್ಲೇ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ.1 " ಎನ್ನುವ ವಿಷಯ ಇಂದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದೇ ರೀತಿಯ ಸಂದರ್ಭ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೂ ಎದುರಾಗಿತ್ತು. ಅಂದು ಕಾಂಗ್ರೆಸ್ ಬೀದಿಗೆ ಇಳಿದು ಈ ವಿಚಾರವಾಗಿ ಪ್ರತಿಭಟನೆ ಮಾಡಿತ್ತು. ಕರ್ನಾಟಕವನ್ನು ದೇಶದಲ್ಲಿ ಭ್ರಷ್ಟಾಚಾರದಲ್ಲಿ ನಂ 1 ಮಾಡಲಾಗಿದೆ ಎಂದು ದೂರಲಾಗಿತ್ತು. ಇದೀಗ ಅದೇ ಪರಿಸ್ಥಿತಿ ಕಾಂಗ್ರೆಸ್‌ಗೆ ಎದುರಾಗಿದೆ. ಅದರಲ್ಲೂ ಈ ಪ್ರಶ್ನೆಗಳನ್ನು ಮಾಡಿದ್ದ ಸಿದ್ದರಾಮಯ್ಯ ಅವರೇ ಇದೀಗ ಅದೇ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ.
ಈ ಸಂಬಂಧ ಮಾತನಾಡಿರುವ ಬಿ.ವೈ ವಿಜಯೇಂದ್ರ ಅವರು, ಸರ್ಕಾರದ ಅವಿಭಾಜ್ಯ ಅಂಗ ಎಂಬುದನ್ನು ಸ್ವತಃ ನಿಮ್ಮ ಆರ್ಥಿಕ ಸಲಹೆಗಾರರೂ ಆಗಿರುವ ಶಾಸಕ ಬಸವರಾಜ ರಾಯರೆಡ್ಡಿ ಅವರೇ ಸ್ಪಷ್ಟವಾಗಿ ಬಹಿರಂಗಪಡಿಸಿದ್ದಾರೆ. ದೇಶದಲ್ಲೇ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ.1 ಎಂದು ಹೇಳುವ ಮೂಲಕ ಈ ಸರ್ಕಾರದ ಕರಾಳ ಭ್ರಷ್ಟತೆಯ ಮುಖವಾಡವನ್ನು ಬಯಲು ಮಾಡಿ ರಾಜ್ಯದ ಘನತೆ ಕುಗ್ಗಿದ ಸ್ವರೂಪವನ್ನು ಬಿಚ್ಚಿಟ್ಟಿದ್ದಾರೆ ಅಂತ ಹೇಳಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಕ್ಲಾಸ್: ಇನ್ನು ಬಿಜೆಪಿಯೊಂದು ಕಡೆ ಕ್ಲಾಸ್ ತೆಗೆದುಕೊಳ್ಳುತ್ತಿದ್ದರೆ ಮತ್ತೊಂದು ಕಡೆ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಸಹ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. Saakappa Saaku, Congress Government! Scan the code, join the movement!
ಸಾಕಪ್ಪ ಸಾಕು, ಕಾಂಗ್ರೆಸ್ ಸರ್ಕಾರ! ಸ್ಕ್ಯಾನ್ ಮಾಡಿ, ನಿಮ್ಮ ನಮ್ಮ ಹೋರಾಟಕ್ಕೆ ಕೈ ಜೋಡಿಸಿ ಅಂತ ಅವರು ಟ್ವೀಟ್ ಮಾಡಿದ್ದಾರೆ. ಹೊಸ ಅಭಿಯಾನಕ್ಕೆ ಕರೆಕೊಟ್ಟಿದ್ದಾರೆ.












Click it and Unblock the Notifications