Vande Bharat Express: ವಂದೇ ಭಾರತ್ ರೈಲು ಸೇವೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಮನವಿ
ಬೆಂಗಳೂರು, ಅಕ್ಟೋಬರ್ 30: ದೇಶದ ವಿವಿಧೆಡೆ ವೇಗದ ಮತ್ತು ಐಶಾರಾಮಿ ಪ್ರಯಾಣ ಸೇವೆ ನೀಡುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು (Vande Bharat Express) ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕದ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬೆಂಗಳೂರಿನಿಂದ ಧಾರವಾಡವರೆಗೆ ಸೇವೆ ನೀಡುತ್ತಿದೆ. ಈ ರೈಲನ್ನು ಕುಂದಾನಗರಿ ಬೆಳಗಾವಿಯವರೆಗೂ ವಿಸ್ತರಿಸುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.

ಪತ್ರದಲ್ಲಿ ಸಿದ್ದರಾಮಯ್ಯ ಅವರು, 'ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ರೈಲು ಸೇವೆಯನ್ನು ಬೆಳಗಾವಿ ನಗರವರೆಗೆ ವಿಸ್ತರಿಸಲು ನಾನು ನಿಮ್ಮನ್ನು ಕೋರುತ್ತೇನೆ. ವಿಸ್ತರಣೆ ಆದಲ್ಲಿ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವಿನ ಸಂಪರ್ಕ ಗಮನಾರ್ಹವಾಗಿ ಹೆಚ್ಚಿಸುತ್ತದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ವಿವರಿಸಿದ್ದಾರೆ.
ಪ್ರಮುಖ ತಾಣಕ್ಕೆ ರೈಲು ವಿಸ್ತರಣೆಗೆ ಕೋರಿಕೆ
ಬೆಳಗಾವಿ ಜಿಲ್ಲೆಯು ಕೈಗಾರಿಕೋದ್ಯಮಿಗಳು, ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರಿಗೆ ಪ್ರಮುಖ ತಾಣವು ಹೌದು. ರಾಜ್ಯದ ದೊಡ್ಡ ಜಿಲ್ಲೆಯಾಗಿರುವ ಈ ಬೆಳಗಾವಿಯಲ್ಲಿ ಸಕ್ಕರೆ, ಅಲ್ಯೂಮಿನಿಯಂ ಮತ್ತು ಪ್ರಮುಖ ಕೈಗಾರಿಕೆಗಳನ್ನು ಹೊಂದಿರುವ ಪ್ರದೇಶವಾಗಿದೆ. ಬೆಳಗಾವಿಯು ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ಪ್ರವಾಸಿ ತಾಣವಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೂ ಮೊದಲು ಈ ಹಿಂದೆ ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರು ಕೇಂದ್ರ ರೈಲ್ವೆ ಸಚಿವರಿಗೆ ಪತ್ರ ಬರೆದಿದ್ದರು. ಹಾಲಿ ಬೆಂಗಳೂರಿನಿಂದ ಉತ್ತರ ಕರ್ನಾಟಕದ ಅವಳಿ ನಗರ ಹುಬ್ಬಳ್ಳಿ-ಧಾರವಾಡ ನಗರಕ್ಕೆ ಕಾರ್ಯನಿರ್ವಹಿಸುತ್ತಿರುವ ವಂದೇ ಭಾರತ್ ರೈಲು ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸುವಂತೆ ಅವರು ಕೋರಿದ್ದರು.

ದಕ್ಷಿಣ-ಉತ್ತರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್
ಇದೇ ವರ್ಷ ಜೂನ್ 27ರಂದು ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆಗೆ ವಿದ್ಯುಕ್ತವಾಗಿ ಚಾಲನೆ ದೊರೆಯಿತು. ಇದು ಕರ್ನಾಟಕದ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿದೆ. ಬೆಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡವರೆಗಿನ ಈ ವೇಗದ ರೈಲು ಸೇವೆಯಿಂದ ಕರ್ನಾಟಕದ ದಕ್ಷಿಣ ಮತ್ತು ಉತ್ತರಕ್ಕೆ ಕೇವಲ 6 ಗಂಟೆ 30 ನಿಮಿಷಗಳಲ್ಲಿ ಸಂಪರ್ಕ ಸಾಧಿಸಬಹುದಾಗಿದೆ.
ವಾರದಲ್ಲಿ ಮಂಗಳವಾರ ಹೊರತುಪಡಿಸಿ ಬೇರೆಲ್ಲ ಆರು ದಿನಗಳಲ್ಲಿ ಈ ವಂದೇ ಭಾರತ್ ರೈಲು ಸೇವೆ ಇರಲಿದೆ. ಬೆಳಗ್ಗೆ ಬೆಂಗಳೂರಿನಿಂದ ಹೊರಟರೆ ಮಧ್ಯಾಹ್ನ ಧಾರವಾಡದಿಂದ ಹೊರಟು ರಾತ್ರಿ ಬೆಂಗಳೂರಿಗೆ ಮರಳುತ್ತದೆ. KSR ಜಂಕ್ಷನ್‌ನಿಂದ ಯಶವಂತಪುರ ಜಂಕ್ಷನ್, ದಾವಣಗೆರೆ ಮೂಲಕ ಎಸ್‌ಎಸ್‌ಎಸ್ ಹುಬ್ಬಳ್ಳಿ ಜಂಕ್ಷನ್ ಹಾದು ಧಾರವಾಡ ತಲುಪುತ್ತದೆ. ಈ ಮೂಲಕ ಒಟ್ಟು 490 ಕಿಮೀ ದೂರವನ್ನು ರೈಲು ಕೇವಲ 6 ಗಂಟೆ 30 ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ತಲುಪುತ್ತದೆ.
-
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru Metro: ORR ರಸ್ತೆಯ ನೀಲಿ ಮಾರ್ಗದಲ್ಲಿ ಸಂಯೋಜಿತ ಗರ್ಡರ್ ಸ್ಥಾಪನೆ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Indian Railway: ಬಣ್ಣದಿಂದಲೇ ರೈಲುಗಳ ವ್ಯತ್ಯಾಸ ಗುರುತಿಸುವುದು ಹೇಗೆ? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications