ಆರ್ಥಿಕವಾಗಿ ಸದೃಢವಾಗಿರುವವರು ಗ್ಯಾರಂಟಿಗಳನ್ನು ಬಿಟ್ಟುಕೊಟ್ಟು ಬಡವರಿಗೆ ನೆರವಾಗಿ: ಸಿದ್ದರಾಮಯ್ಯ ಮನವಿ
ಬೆಂಗಳೂರು, ಜೂನ್, 05: ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 5 ಭರವಸೆಗಳನ್ನು ಘೋಷಣೆ ಮಾಡಿದೆ. ಹಾಗೆಯೇ ಈ ಭರವಸೆಗಳನ್ನು ಯಾರೆಲ್ಲ ಪಡೆಯಬಹುದು ಎನ್ನುವ ಮಾಹಿತಿಯನ್ನು ಕೂಡ ನೀಡಿದ್ದರು. ಇದೀಗ ಈ ಕುರಿತು ಮತ್ತೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್, ಉಳ್ಳವರು ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಭರವಸೆಗಳನ್ನು ಇಲ್ಲದವರಿಗೆ ಬಿಟ್ಟುಕೊಟ್ಟು ಅವರಿಗೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡರು.
ಉಳ್ಳವರು ಆರ್ಥಿಕವಾಗಿ ಹಿಂದುಳಿದವರಿಗೆ ಗ್ಯಾರಂಟಿಗಳನ್ನು ಬಿಟ್ಟುಕೊಟ್ಟರೆ, ಸರ್ಕಾರದ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಸಹಾಯ ಮಾಡಿದಂತೆ ಆಗುತ್ತದೆ. ಇದನ್ನು ಅನುಸರಿಸಿದರೆ ಹಣವನ್ನು ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಿಕೊಳ್ಳಬಹುದು ಎಂದು ಸಿಎಂ ಸಿದ್ದರಾಮಯ್ಯ ಅವರು ಪತ್ರದ ಮೂಲಕ ತಿಳಿಸಿದ್ದಾರೆ.

ಅನೇಕ ಸರ್ಕಾರಿ ಕೆಲಸದಲ್ಲಿರುವ ಅಧಿಕಾರಿಗಳು ಹಾಗೂ ಖಾಸಗಿ ವಲಯದಲ್ಲಿರುವವರು ಗೃಹ ಜ್ಯೋತಿಯನ್ನು ತ್ಯಜಿಸಲು ಬಯಸುವುದಾಗಿ ನನಗೆ ಪತ್ರ ಬರೆದಿದ್ದಾರೆ. ಈ ಯೋಜನೆಯಿಂದ ಹೊರಗುಳಿಯಲು ಇಚ್ಛಿಸುವವರಿಗೆ ಅವಕಾಶ ನೀಡಲಾಗುವುದು. ಕೇಂದ್ರ ಸರ್ಕಾರವು ಎಲ್‌ಪಿಜಿ ಸಬ್ಸಿಡಿಯನ್ನು ತ್ಯಜಿಸುವಂತೆ ಜನರನ್ನು ಕೇಳುವ ಅಭಿಯಾನವನ್ನು ಪ್ರಾರಂಭಿಸಿದಾಗ, ಅನೇಕರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು ಎಂದರು.
ಅದೇ ರೀತಿ ಉಳ್ಳವರು ನಾವು ಘೋಷಿಸಿರುವ ಗ್ಯಾರಂಟಿಗಳನ್ನು ಕೈಬಿಟ್ಟು ಬಡವರಿಗೆ ಅನುವು ಮಾಡಿಕೊಡಬೇಕು. ಯಾವುದೇ ಪಕ್ಷದ ಬೆಂಬಲಿಗರಾದರೂ ಕೂಡ ನಮ್ಮ ಗ್ಯಾರಂಟಿಗಳನ್ನು ಬಿಟ್ಟುಕೊಟ್ಟು ಬಡವರಿಗೆ ಸಹಾಯ ಆಗುವಂತೆ ಮಾಡಬಹುದು ಎಂದರು.
ಕಾಂಗ್ರೆಸ್ ಅಭೂತಪೂರ್ವ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವುದರಿಂದ, ಇತರೆ ಕೆಲವು ಪಕ್ಷದ ಬೆಂಬಲಿಗರು ಗ್ಯಾರಂಟಿಗಳನ್ನು ಬಿಟ್ಟುಕೊಡುವ ನಿರ್ಧಾರವನ್ನು ತೆಗೆದುಕೊಳ್ಳಲು ಸಿದ್ಧರಿರಬಹುದು ಎಂದು ಮನವಿ ಮಾಡಿದ್ದಾರೆ. ಸಾಮಾನ್ಯವಾಗಿ ರಾಜ್ಯದಲ್ಲಿ ಬಡಕುಟುಂಬದವರು ತುಂಬಾ ಜನರಿದ್ದಾರೆ. ಆದ್ದರಿಂದ ಆರ್ಥಿಕವಾಗಿ ಸದೃಢವಾಗಿರುವವರು ಗ್ಯಾರಂಟಿಗಳನ್ನು ಬಳಸದೇ ಈ ಮೂಲಕ ಬಡವರಿಗೆ ನೆರವಾಗುವುದು ತುಂಬಾ ಅಗತ್ಯವಾಗಿದೆ ಎಂದು ಮನವಿ ಮಾಡಿದ್ದಾರೆ.
ಘೋಷಣೆ ಮಾಡಿದ್ದ 5 ಗ್ಯಾರೆಂಟಿಗಳಿವು
1. ಗೃಹಜ್ಯೋತಿ: ಯಾರು ಎಷ್ಟು ವಿದ್ಯುತ್ ಬಳಸುತ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಆಧಾರದ ಮೇಲೆ ಶೇಕಡಾ 10ರಷ್ಟರ ವರೆಗಿನ ವಿದ್ಯುತ್ ಉಚಿತ. ಜುಲೈನಿಂದ ಮಾಡಿರುವ ಖರ್ಚಿನ ಬಿಲ್ ಆಗಸ್ಟ್‌ನಲ್ಲಿ ಬರಲಿದೆ. ಜುಲೈವರೆಗಿನ ಬಾಕಿ ಉಳಿಸಿಕೊಂಡವರಿಗೆ ಸಮಯ ಕೊಡುತ್ತೇವೆ. ಅದನ್ನು ಅವರೇ ಕಟ್ಟಬೇಕು ಎಂದು ಕಟ್ಟುವುದಿಲ್ಲ. ಜುಲೈನಿಂದ ಮಾತ್ರ ಸರ್ಕಾರ ಕಟ್ಟಲಿದೆ ಎಂದು ಇತ್ತೀಚೆಗಷ್ಟೇ ಹೇಳಿದ್ದರು.
2. ಗೃಹಲಕ್ಷ್ಮೀ: ಬ್ಯಾಂಕ್ ಖಾತೆ, ಆಧಾರ್ ಲಿಂಕ್ ಪ್ರಕ್ರಿಯೆ ಆಗಬೇಕಿದೆ. ಸಾಫ್ಟ್‌ವೇರ್ ಅಭಿವೃದ್ಧಿಪಡಿಸಬೇಕಿದ್ದು, ನಂತರ ಮನೆಯ ಒಡತಿ ಖಾತೆಗೆ ಮಾಸಿಕ 2 ಸಾವಿರ ರೂಪಾಯಿ ಜಮೆ ಮಾಡಲಾಗುತ್ತದೆ. ಇದಕ್ಕೆ ಜೂನ್ 15 ರಿಂದ ಜುಲೈ 15 ರೊಳಗೆ ಆನ್‌ಲೈನ್‌ಅಲ್ಲಿ ಅರ್ಜಿ ಹಾಕಬೇಕು. ಬಿಪಿಎಲ್, ಎಪಿಎಲ್ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ.
2. ಗೃಹಲಕ್ಷ್ಮೀ: ಬ್ಯಾಂಕ್ ಖಾತೆ, ಆಧಾರ್ ಲಿಂಕ್ ಪ್ರಕ್ರಿಯೆ ಆಗಬೇಕಿದೆ. ಸಾಫ್ಟ್‌ವೇರ್ ಅಭಿವೃದ್ಧಿಪಡಿಸಬೇಕಿದ್ದು, ನಂತರ ಮನೆಯ ಒಡತಿ ಖಾತೆಗೆ ಮಾಸಿಕ 2 ಸಾವಿರ ರೂಪಾಯಿ ಜಮೆ ಮಾಡಲಾಗುತ್ತದೆ. ಇದಕ್ಕೆ ಜೂನ್ 15 ರಿಂದ ಜುಲೈ 15 ರೊಳಗೆ ಆನ್‌ಲೈನ್‌ಅಲ್ಲಿ ಅರ್ಜಿ ಹಾಕಬೇಕು. ಬಿಪಿಎಲ್, ಎಪಿಎಲ್ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ.
18 ವರ್ಷ ತುಂಬಿದವರು ಜುಲೈ 15 ರಿಂದ ಆಗಸ್ಟ್ 15ರವರೆಗೆ ಪ್ರಕ್ರಿಯೆ ನಡೆಸಿ, ಆಗಸ್ಟ್ 15ರಿಂದ ಇದು ಜಾರಿಗೆ ಬರಲಿದೆ. ಇದಕ್ಕೆ ಬೇರಾವುದೇ ಷರತ್ತುಗಳಿಲ್ಲ. ಸಾಮಾಜಿಕ ಭದ್ರತಾ ಸೇವೆಗಳಡಿ ಪಿಂಚಣಿಯ ಜೊತೆಗೆ ಇದೂ ಸಿಗಲಿದೆ. ಸರ್ಕಾರದ ನಿವೃತ್ತ ನೌಕರರ ಪಿಂಚಣಿ ಪಡೆಯುತ್ತಿರುವವರಿಗೆ ಇಲ್ಲ. ಮನೆಯ ಯಜಮಾನಿ ಯಾರು ಅನ್ನುವುದನ್ನು ಕುಟುಂಬ ನಿರ್ಧರಿಸಿ ಅರ್ಜಿ ಹಾಕಬೇಕಾಗುತ್ತದೆ. ಅರ್ಹ ಫಲಾನುಭವಿಗಳಿಗೆ ಆಗಸ್ಟ್ 15 ರಿಂದ 2,000 ರೂ. ಜಮೆ ಆಗಲಿದೆ ಎಂದಿದ್ದರು.
3. ಅನ್ನಭಾಗ್ಯ: ಕೇಂದ್ರ ಸರ್ಕಾರ ಅಕ್ಕಿಯನ್ನು 5 ಕೆ.ಜಿ.ಗೆ ಇಳಿಸಿದೆ. ಆದರೆ ನಾವು 10 ಕೆ.ಜಿ. ಆಹಾರಧಾನ್ಯ ಕೊಡುವುದಾಗಿ ಹೇಳಿದ್ದೆವು. ಈಗಾಗಲೇ ಆಹಾರಧಾನ್ಯ ಸರಬರಾಜು ಆಗಿದ್ದು, ದಾಸ್ತಾನು ಇಲ್ಲ. ಆದ್ದರಿಂದ ಜುಲೈ 1ರಿಂದ ಬಿಪಿಎಲ್, ಅಂತ್ಯೋದಯ ಕಾರ್ಡುದಾರರಿಗೆ ತಲಾ 10 ಕೆ.ಜಿ. ಅಕ್ಕಿ ಕೊಡುತ್ತೇವೆ. ಇದನ್ನು ನ್ಯಾಫೆಡ್, ಕೇಂದ್ರ, ಎನ್‌ಸಿಸಿಎಫ್ ಎಲ್ಲಿಂದಲಾದರೂ ತಂದು ಕೊಡುತ್ತೇವೆ ಎಂದು ಹೇಳಿದ್ದರು.
4. ಶಕ್ತಿ: ಸಮಾಜದಲ್ಲಿ ಶೇಕಡಾ 50ರಷ್ಟು ಮಹಿಳೆಯರು ಇದ್ದಾರೆ. ಸ್ಥಾನಮಾನ ಪರಿಗಣಿಸದೆ ವಿದ್ಯಾರ್ಥಿನಿಯರನ್ನೂ ಒಳಗೊಂಡಂತೆ ಕರ್ನಾಟಕದ ಎಲ್ಲ ಮಹಿಳೆಯರಿಗೆ ಜೂನ್ 11 ರಿಂದ ರಾಜ್ಯದೊಳಗೆ ಎಸಿ, ನಾನ್ ಎಸಿ ಸ್ಲೀಪರ್, ಐಷಾರಾಮಿ ಬಸ್‌ಗಳನ್ನು ಬಿಟ್ಟು ಬೇರೇ ಸಾಮಾನ್ಯ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ.
ಕೆಎಸ್‌ಆರ್‌ಟಿಸಿಯಲ್ಲಿ ಶೇಕಡಾ 50ರಷ್ಟು ಆಸನ ಮೀಸಲಾಗಿದ್ದು, ಹೆಣ್ಣು ಮಕ್ಕಳಿಲ್ಲದಿದ್ದರೆ, ಗಂಡಸರು ಕುಳಿತು ಹೋಗಬಹುದಾಗಿದೆ. ಬಿಎಂಟಿಸಿಯಲ್ಲೂ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದಾಗಿದೆ. ಆದರೆ ಇಲ್ಲಿ ರಿಸರ್ವೇಶನ್ ಇರುವುದಿಲ್ಲ ಎಂದು ಸಿದ್ದಾರಾಮಯ್ಯ ತಿಳಿಸಿದ್ದರು.
5. ಯುವನಿಧಿ: ಇನ್ನು 2022-23 ರಲ್ಲಿ ತೇರ್ಗಡೆ ಹೊಂದಿದ ವೃತ್ತಿಶಿಕ್ಷಣವೂ ಸೇರಿ ಎಲ್ಲ ಪದವೀಧರರು ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದವರೆಗೆ ಪ್ರತಿ ತಿಂಗಳು 3 ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ 1,500 ರೂ., ನೀಡಲಾಗುತ್ತದೆ. ಯುವಕ, ಯುವತಿ, ತೃತೀಯಲಿಂಗಿಗಳಿಗೂ ಇದು ಅನ್ವಯ ಆಗತ್ತದರ. 2022-23ರಲ್ಲಿ ತೇರ್ಗಡೆ ಹೊಂದಿದವರು ಈ ಯೋಜನೆಯ ಲಾಭ ಪಡೆಯಲು ಅರ್ಜಿ ಹಾಕಬೇಕು. ನಿರುದ್ಯೋಗ ಯುವಕ, ಯವತಿಗೆ 2 ವರ್ಷ ಹಣ ಜಮೆ ಆಗಲಿದೆ. ಈ ಯೋಜನೆ ಲಾಭ ಪಡೆಯುವ ನಡುವೆ ಉದ್ಯೋಗ ಗಿಟ್ಟಿಸಿಕೊಂಡ ವ್ಯಕ್ತಿಗೆ ಈ ಯೋಜನೆ ಮುಂದುವರಿಯುವುದಿಲ್ಲ ಎಂದು ತಿಳಿಸಿದ್ದರು.












Click it and Unblock the Notifications