ಗುತ್ತಿಗೆದಾರರಿಗೆ ಭಯ ಬೇಡ: ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದ ಸಿಎಂ ಸಿದ್ದರಾಮಯ್ಯ

ರಾಜ್ಯ ರಾಜಕೀಯದಲ್ಲಿ ಕಮಿಷನ್ ಆರೋಪ ಈಗ ತಾರಕಕ್ಕೇರಿದೆ. ವಿರೋಧ ಪಕ್ಷವಾಗಿದ್ದ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಕಾಂಗ್ರೆಸ್ ಸದ್ಯ ತಾನೇ ಸ್ವತಃ ಭ್ರಷ್ಟಾಚಾರ ಆರೋಪ ಎದುರಿಸುತ್ತಿದೆ. ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದು, ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಲು ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾಜಿ ಸಚಿವ ಆರ್ . ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ 15% ಕಮಿಷನ್ ಪಡೆಯುತ್ತಿರುವ ಆರೋಪ ಮಾಡಿದ್ದಾರೆ. ಇದಕ್ಕೆ ಈಗ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಸರಣಿ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ. ಬಿಜೆಪಿ ಅವಧಿಯಲ್ಲಿನ ಕಮಿಷನ್ ಹಗರಣವನ್ನು ತನಿಖೆಗೆ ಒಪ್ಪಿಸಿದ್ದೇವೆ ಎಂದು ಹೇಳಿದ್ದಾರೆ.

 CM Siddaramaiah Responds to Allegations of Corruption by Opposition

ಟ್ವೀಟ್ ಮಾಡಿರುವ ಅವರು, "ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ‌ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ತನಿಖೆಗೆ ಒಪ್ಪಿಸಿದ್ದೇವೆ." ಎಂದು ಹೇಳಿದ್ದಾರೆ.

ಉಪ್ಪು ತಿಂದವರು ನೀರು ಕುಡಿಯಬೇಕು

ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಯುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ.

ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ. ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಅಶೋಕ್ ಆರೋಪ ಸತ್ಯಕ್ಕೆ ದೂರವಾದದ್ದು

ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವ ಆರ್. ಅಶೋಕ್ ಮಾಡಿರುವ 15% ಕಮಿಷನ್ ಆರೋಪ ಸತ್ಯಕ್ಕೆ ದೂರವಾದ್ದು, ಆದರೂ ಅವರು ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ. ಅಶೋಕ್ ಅವರ ಈ ಹೇಳಿಕೆಯಿಂದ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರ ಉತ್ತಮ ಎಂಬುದು ಅವರ ಮನಸಿನಲ್ಲೇ ಇದೆ ಎನ್ನುವುದನ್ನು ತೋರಿಸುತ್ತದೆ.

ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ಎಂಬುದನ್ನು ನಾಡಿನ ಜನತೆಯೆದುರು ಸಾಬೀತು ಮಾಡುತ್ತೇವೆ ಎಂದು ಜನರಿಗೆ ಆಶ್ವಾಸನೆ ನೀಡಿದ್ದಾರೆ.

ಮೋದಿ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇಲ್ಲವೇ?

ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ, ಹೀಗಾಗಿ ರಾಹುಲ್ ಗಾಂಧಿಯವರು ಮಧ್ಯಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ.

ಅವರು ಮಾಡಬೇಕಿರುವ ಕೆಲಸವನ್ನು ರಾಹುಲ್ ಗಾಂಧಿಯವರಿಗೆ ಮಾಡಿ ಎಂದು ಒತ್ತಾಯಿಸುತ್ತಿರುವುದು ನೋಡಿದರೆ ಸ್ವತಃ ಬೊಮ್ಮಾಯಿಯವರಿಗೆ ಮೋದಿ ಅವರ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇದ್ದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ನಾಯಕರ ಕಾಲೆಳೆದಿದ್ದಾರೆ.

ಶೀಘ್ರದಲ್ಲೇ ಹಣ ಬಿಡುಗಡೆ

ಈಗಾಗಲೇ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ, ಲೋಕೋಪಯೋಗಿ ಇಲಾಖೆ ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.

ಈ ನಡುವೆ ಕೆಲವೇ ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶದ ಈಡೇರಿಕೆಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಸ್ವತಃ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು? ಎಂದು ವಿಪಕ್ಷ ನಾಯಕರಿಗೆ ಪ್ರಶ್ನಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+