ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ "ಗೊತ್ತಿರಲಿಲ್ಲ" ಸಿಎಂ ಹೇಳಿಕೆಗೆ ಟೀಕೆ!
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತೊಮ್ಮೆ ಚರ್ಚೆಯಲ್ಲಿವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಐದು ಪ್ರಮುಖ ಗ್ಯಾರಂಟಿಗಳನ್ನು ಘೋಷಣೆ ಮಾಡಿರುವುದು. ಇದೇ ಕರ್ನಾಟಕ ಮಾದರಿ ಗ್ಯಾರಂಟಿ ಯೋಜನೆಗಳನ್ನು ದೇಶದ ವಿವಿಧ ರಾಜ್ಯಗಳ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದ್ದು ಹಳೆಯ ವಿಚಾರ. ಬಹುತೇಕ ಗ್ಯಾರಂಟಿ ಯೋಜನೆಗಳ ಮೂಲಕವೇ ಕಾಂಗ್ರೆಸ್ ಕರ್ನಾಟಕ ಹಾಗೂ ನೆರೆಯ ತೆಲಂಗಾಣದಲ್ಲಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದೆ. ಇದೀಗ ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡುರುವ ಹೇಳಿಕೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಸಿ.ಎಂ ಸಿದ್ದರಾಮಯ್ಯ ಅವರು, ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಬಾಕಿ ಉಳಿದಿರುವುದು ನನಗೆ ಗೊತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.
ಇದೀಗ ಇದೇ ಹೇಳಿಕೆಗೆ ವಿರೋಧ ಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮುಗಿಬಿದ್ದಿವೆ. ಮುಡಾ ಹಗರಣದಿಂದ ಬಚಾವಾಗಲು, ಅಧಿಕಾರ ಹಂಚಿಕೆಯ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ರಣತಂತ್ರ ಹಣೆಯುವಲ್ಲಿ ಸಂಪೂರ್ಣವಾಗಿ busy ಆಗಿರುವ outgoing ಸಿಎಂ ಸಿದ್ದರಾಮಯ್ಯನವರಿಗೆ ಪಾಪ ಮೂರು ತಿಂಗಳಿನಿಂದ ಅನ್ನಭಾಗ್ಯದ ಹಣ, ಗೃಹಲಕ್ಷ್ಮಿ ಹಣ ಪಾವತಿ ಬಾಕಿ ಇರುವುದೇ ಗೊತ್ತಿಲ್ಲವಂತೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ವ್ಯಂಗ್ಯವಾಡಿದ್ದಾರೆ.

Outgoing ಸಿಎಂ ಸಿದ್ದರಾಮಯ್ಯ ಅವರೇ ತಮಗೆ ಗೊತ್ತಿಲ್ಲದೆ ತಮ್ಮ ಸರ್ಕಾರದಲ್ಲಿ ಇನ್ನೂ ಏನೇನು ಕರ್ಮಕಾಂಡ ನಡೆಯುತ್ತಿದೆಯೋ ಆ ಪರಮಾತ್ಮನಿಗೆ ಗೊತ್ತು. ತಮಗೆ ಗೊತ್ತಿಲ್ಲದೆ ಯಾವ್ಯಾವ ಮಂತ್ರಿಗಳು, ಯಾವ್ಯಾವ ಶಾಸಕರು ಅದೆಷ್ಟು ಲೂಟಿ ಹೊಡೆಯುತ್ತಿದ್ದಾರೋ ಆ ದೇವರೇ ಬಲ್ಲ ಎಂದೂ ಟೀಕೆ ಮಾಡಿದ್ದಾರೆ.
ಕರ್ನಾಟಕ ಕಂಡ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಎಂಬ ಹಣೆಪಟ್ಟಿ ಕಟ್ಟಿಕೊಳ್ಳುವುದಕ್ಕಿಂತ ಈಗಲಾದರೂ ರಾಜೀನಾಮೆ ಕೊಟ್ಟು ಗೌರವದಿಂದ ನಿರ್ಗಮಿಸಿ. ತಾವು ಕುರ್ಚಿಗೆ ಅಂಟಿಕೊಂಡು ಕೂತಷ್ಟೂ ತಮ್ಮ ಗೌರವ, ವರ್ಚಸ್ಸು ಮತ್ತಷ್ಟು ಕಡಿಮೆ ಆಗುವುದಂತೂ ಗ್ಯಾರಂಟಿ ಎಂದೂ ಅವರು ಹೇಳಿದ್ದಾರೆ.
ಸಿದ್ದರಾಮಯ್ಯ ಹೇಳಿದ್ದೇನು ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ಇಷ್ಟು ದಿನ ಕೊಟ್ಟಿದ್ದೇವೆ ಎಂದಾದರೆ ಮುಂದೆಯೂ ಕೊಡಲಿದ್ದೇವೆ ಎಂದು ಅವರು ಹೇಳಿದ್ದರು. ಆದರೆ, ಈ ರೀತಿ ಹೇಳುವ ಸಂದರ್ಭದಲ್ಲಿ ಅವರು ಅನ್ನಭಾಗ್ಯ ಯೋಜನೆಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಜನರ ಖಾತೆಗೆ ವರ್ಗಾವಣೆ ಆಗದೆ ಇರುವುದು ನನಗೆ ಗೊತ್ತಿರಲಿಲ್ಲ. ಎರಡೂ ಯೋಜನೆಗಳ ಹಣವನ್ನು ಶೀಘ್ರ ಜನರ ಖಾತೆಗೆ ಜಮೆ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದಿದ್ದರು.
ಇನ್ನು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿದೆ. ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳ ಹಣ ಕಳೆದ ಮೂರು ತಿಂಗಳಿನಿಂದ ಜನರ ಖಾತೆಗೆ ಸೇರಿಲ್ಲ ಎಂದಾದರೂ ಸಿಎಂಗೆ ವಿಷಯ ಗೊತ್ತಿಲ್ಲ ಎಂದಾದರೆ ಹೇಗೆ ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಿದ್ದಾರೆ.
ಸಚಿವರಿಂದಲೂ ವಿವಾದಾತ್ಮಕ ಹೇಳಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ರೀತಿ ಹೇಳಿದ ಮೇಲೆ ಕೆಲವು ಪ್ರಭಾವಿ ಸಚಿವರು ಸಹ ಇದೀಗ ಗ್ಯಾರಂಟಿ ಯೋಜನೆಯ ಹಣದ ಬಗ್ಗೆ ವ್ಯಂಗ್ಯ ಹಾಗೂ ವಿವಾದಾತ್ಮಕವಾಗಿ ಮಾತನಾಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.












Click it and Unblock the Notifications