ಬಿಜೆಪಿ ನಮ್ಮ ಗ್ಯಾರಂಟಿಗಳನ್ನು ಕದ್ದಿರುವುದು ಈ ಕಾರಣಕ್ಕೇ: ಸದನದಲ್ಲಿ ಬಹಿರಂಗ ಪಡಿಸಿದ ಸಿದ್ದರಾಮಯ್ಯ
ಬೆಂಗಳೂರು, ಮಾರ್ಚ್ 19: ನಾವು ಗ್ಯಾರಂಟಿಗಳ ಮೂಲಕ ಜನ ಸಾಮಾನ್ಯರ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದರಿಂದ ಆರ್ಥಿಕತೆಗೆ ಚೈತನ್ಯ ಬಂದು ರಾಜ್ಯಕ್ಕೆ ತೆರಿಗೆಯೂ ಹೆಚ್ಚುತ್ತದೆ. ಕೇಂದ್ರ ಸರ್ಕಾರದ ಸಂಸ್ಥೆಗಳು, ವಿಶ್ವದ ಅಧ್ಯಯನ ಸಂಸ್ಥೆಗಳು ನಮ್ಮ ಗ್ಯಾರಂಟಿಗಳನ್ನು ಶ್ಲಾಘಿಸಿರುವುದು, ಬಿಜೆಪಿ ನಮ್ಮ ಗ್ಯಾರಂಟಿಗಳನ್ನು ಕದ್ದಿರುವುದು ಈ ಕಾರಣಕ್ಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಬಹಿರಂಗಪಡಿಸಿದ್ದಾರೆ.
1949 ನವೆಂಬರ್ 25 ನೇ ತಾರೀಖಿನಂದು ಸಂವಿಧಾನ ಜಾರಿ ಸಭೆಯಲ್ಲಿ ಡಾ.ಬಿ.ಆರ್ .ಅಂಬೇಡ್ಕರ್ ರವರು ಮಾಡಿದ ಭಾಷಣವನ್ನು ನೀವು ಓದಬೇಕು. ನಾವು ವೈರುದ್ಯದ ಸಮಾಜಕ್ಕೆ ಪ್ರವೇಶಿಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಆರ್ಥಿಕ ಸಾಮಾಜಿಕ ಸಮಾನತೆ ಇಲ್ಲ. ದುರ್ಬಲವರ್ಗದವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವಿದಲ್ಲವೋ , ಅಲ್ಲಿಯವರೆಗೂ ಸಮಾನತೆ ಬರಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಒಂದು ಅಧ್ಯಯನ ವರದಿಯಂತೆ ನಮ್ಮ ದೇಶದ 100 ಕೋಟಿ ದೇಶದ ಜನರಿಗೆ ಕೊಂಡುಕೊಳ್ಳುವ ಆಯ್ಕೆಯಿಲ್ಲ, ಶಕ್ತಿ ಇಲ್ಲ ಎಂದು ತಿಳಿಸಿದ್ದಾರೆ.

ಮೊದಲ ವರ್ಗದಲ್ಲಿ 14 ಕೋಟಿ ಜನರಿದ್ದು, ಅವರ ಸರಾಸರಿ ವಾರ್ಷಿಕ ಆದಾಯ 15 ಸಾವಿರ ಡಾಲರ್ (13 ಲಕ್ಷ ರೂ.), 7 ಕೋಟಿ ಕುಟುಂಬಗಳ ತಲಾ ಆದಾಯ 3 ಸಾವಿರ ಡಾಲರ್ (2.62 ಲಕ್ಷ) 20.5 ಕೊಟಿ ಕುಟುಂಬಗಳ 100 ಕೋಟಿ ಜನರು ತಲಾ ಆದಾಯ 1 ಸಾವಿರ ಡಾಲರ್ (87 ಸಾವಿರ , ಅಂದರೆ ತಿಂಗಳಗೆ ಸುಮಾರು 7 ಸಾವಿರ), ಈ ವರ್ಗದವರಲ್ಲಿ ತಮ್ಮ ಅಗತ್ಯಗಳನ್ನು ಪೂರೈಸಲು ಹಣವಿರುವುದಿಲ್ಲ. 143 ಕೋಟಿ ಜನ ಮುಖ್ಯವಾಹಿನಿಗೆ ತರುವ ವ್ಯವಸ್ಥೆಯೇನು ? ಈ ದಿಸೆಯಲ್ಲಿ ಅಂತಹ ಜನರಿಗೆ ಆರ್ಥಿಕ ಸಾಮಾಜಿಕ ಸಮಾನತೆ ತರಲು ನಮ್ಮ ಸರ್ಕಾರ ಮಾಡಿರುವ ಪ್ರಮಾಣಿಕ ಪ್ರಯತ್ನ ಈ ಗ್ಯಾರಂಟಿಗಳು. United Nations ನ General Assembly ಅಧ್ಯಕ್ಷರಾದ ಕ್ಯಾಮರೂನ್ ದೇಶದ ಪಿಲೆಮಾನ್ ಯಾಂಗ್ ಅವರು ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿದ್ದಾರೆ.
05-03-2025 ರಂದು ಕೇರಳ ಸರ್ಕಾರದ ಅಧಿಕಾರಿಗಳ ತಂಡ ಹಾಗೂ ಇತರೆ ದಿನಾಂಕಗಳಲ್ಲಿ ಆಂಧ್ರಪ್ರದೇಶದ ಹಾಗೂ ಮಹಾರಾಷ್ಟ್ರದ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಅಧ್ಯಯನಕ್ಕೆ ರಾಜ್ಯಕ್ಕೆ ಆಗಮಿಸಿದ್ದರು. ಆ ತಂಡಗಳಿಗೆ ಗ್ಯಾರಂಟಿಗಳ ಬಗ್ಗೆ ವಿಸ್ತೃತವಾಗಿ ವಿವರಿಸಲಾಯಿತು. ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ Indian Institute of Pubic Administration ಸಂಸ್ಥೆಯ ಅಧ್ಯಕ್ಷರು , ಕೇಂದ್ರಸಚಿವರಾಗಿದ್ದಾರೆ. ಉಪರಾಷ್ಟ್ರಪತಿಗಳ ಜಗದೀಪ್ ಧನಕರ್ ಅವರು ಅಧ್ಯಕ್ಷರಾಗಿ , ರಾಜ್ಯದ ಗ್ಯಾರಂಟಿಗಳ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ.
ವಿರೋಧಪಕ್ಷದವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಿದ್ದಾರೆ. ಸರ್ಕಾರದಲ್ಲಿ ಗ್ಯಾರಂಟಿಗಳಿಂದ ಸರ್ಕಾರದಲ್ಲಿ ದುಡ್ಡಿಲ್ಲ ಎಂದು ಹೇಳಿದ್ದಾರೆ. ಸರ್ಕಾರ ಫೆಬ್ರವರಿ ಅಂತ್ಯದಲ್ಲಿ 76509 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. 2024-25 ರಲ್ಲಿ 52009 ಕೋಟಿಗಳನ್ನು ಗ್ಯಾರಂಟಿಗಳಿಗೆ ಬಜೆಟ್ ನಲ್ಲಿ ಇಡಲಾಗಿದ್ದು, ಅದರಲ್ಲಿ 41560 ಕೋಟಿ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅದರಲ್ಲಿ ಗೃಹ ಲಕ್ಷ್ಮಿ 28608 ಕೋಟಿ - ಖರ್ಚು 22611 ಕೋಟಿ , ಗೃಹಜ್ಯೋತಿ - 9657 ಕೋಟಿ -ಖರ್ಚು 8389 ಕೋಟಿ ,ಅನ್ನಭಾಗ್ಯ 8079 ಕೊಟಿ - ಖರ್ಚು 5590 ಕೋಟಿ ಶಕ್ತಿ ಯೋಜನೆಗೆ 5015 ಕೋಟಿಗಳಲ್ಲಿ -4821 ಕೋಟಿ , ಯುವನಿಧಿ 650 ಕೋಟಿ- ವೆಚ್ಚ 240 ಕೋಟಿ , ಒಟ್ಟು 52009 ರಲ್ಲಿ 41650 ಕೋಟಿ ವೆಚ್ಚ ಮಾಡಲಾಗಿದೆ. ಸರ್ಕಾರದಲ್ಲಿ ಹಣವಿಲ್ಲದಿದ್ದರೆ 1.26 ಕೋಟಿ ಕುಟುಂಬಗಳು ಗೃಹಲಕ್ಷ್ಮಿ ಅನ್ನಭಾಗ್ಯದ ಫಲಾನುಭವಿಗಳು , 1.60 ಕೋಟಿ ಕುಟುಂಬದ ಗೃಹಜ್ಯೋತಿಯಿಂದ ಲಾಭಪಡೆದಿದ್ದಾರೆ ಎಂದು ಹೇಳಿದರು.
-
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು












Click it and Unblock the Notifications