ನನಗೆ ಮೆಡಿಕಲ್ ಸೀಟ್ ಸಿಕ್ಕಿದ್ರೆ ಸಿಎಂ ಆಗುತ್ತಿರಲಿಲ್ಲ..!
ನನ್ನನ್ನು ವೈದ್ಯನಾಗಿ ನೋಡಬೇಕೆಂದು ನನ್ನ ತಂದೆಗೆ ಆಸೆಯಿತ್ತು. ಆದರೆ ನನಗೆ ಉತ್ತಮ ಅಂಕಗಳು ಬರದ ಕಾರಣ ನಾನು ಲಾಯರ್ ಆದೆನು. ನನಗೆ ವೈದ್ಯಕೀಯ ಸೀಟು ಸಿಕ್ಕಿದ್ದಿದ್ದರೆ ನಾನು ಮುಖ್ಯಮಂತ್ರಿಯೇ ಆಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನೆನೆದಿದ್ದಾರೆ.
ವೈದ್ಯರು ಕಾಯಿಲೆ ವಾಸಿ ಮಾಡಿದರೆ ಜನ ಸದಾ ನೆನೆಯುತ್ತಾರೆ. ಹಾಗಾಗಿ ಯಾವುದೇ ಕಾರಣಕ್ಕೂ ವೈದ್ಯರು ರೋಗಿಗಳನ್ನು ನಿರ್ಲಕ್ಷಿಸದೆ ಜಾಗರೂಕತೆಯಿಂದ ನೋಡಿಕೊಳ್ಳಬೇಕು. ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ವೈದ್ಯರಾದಾಗ ಮಾತ್ರ ನಮ್ಮ ಸರ್ಕಾರದ ಆಶಯ ಈಡೇರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣಗೊಳ್ಳಲಿರುವ 500 ಹಾಸಿಗೆಗಳ ಸಾಮರ್ಥ್ಯವುಳ್ಳ ನೂತನ ಆಸ್ಪತ್ರೆ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭದಲ್ಲಿ ಸಿಎಂ ಮಾತನಾಡಿದ್ದಾರೆ. ಬೌರಿಂಗ್ ಆಸ್ಪತ್ರೆ ಸುದೀರ್ಘ ಇತಿಹಾಸವನ್ನು ಹೊಂದಿರುವ ಆಸ್ಪತ್ರೆ. ಸಾವಿರಾರು ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸಿದೆ. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಂಗಳೂರಿಗೆ ಮತ್ತೊಂದು ವೈದ್ಯಕೀಯ ಕಾಲೇಜಿನ ಅಗತ್ಯವನ್ನು ಮನಗಂಡು ಮತ್ತೊಂದು ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಿದ್ದೆ ಎಂದಿದ್ದಾರೆ.
ಬೆಂಗಳೂರು ವೇಗವಾಗಿ ಬೆಳೆಯುತ್ತಿದ್ದು ಮತ್ತೊಂದು ವೈದ್ಯಕೀಯ ಕಾಲೇಜು ಆದರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೂ ಆಗಿ, ಸಾಮಾನ್ಯ ಜನರಿಗೆ, ಬಡವರಿಗೆ, ದಲಿತರಿಗೆ ಬಹಳಷ್ಟು ಉಪಯೋಗವಾಗುತ್ತದೆ ಎಂದು ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಿದ್ದೆ. ಈಗ ಸುಸಜ್ಜಿತವಾದ ವೈದ್ಯಕೀಯ ಕಾಲೇಜು ನಿರ್ಮಾಣವಾಗಿ ಜನರಿಗೆ ಸೇವೆ ನೀಡುತ್ತಿರುವುದು ಸಂತಸದ ವಿಚಾರ ಎಂದು ಹೇಳಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಾಗಿ ಬರುವವರು ಶ್ರೀಮಂತ ವರ್ಗದವರಲ್ಲ. ಸಾಮಾನ್ಯವಾಗಿ ಬಡವರು, ಕೆಳವರ್ಗದವರು ಮಾತ್ರ ಸರ್ಕಾರಿ ಆಸ್ಪತ್ರೆಗೆ ಬರುತ್ತಾರೆ. ಬಡವರು ದುಬಾರಿ ವೆಚ್ಚವನ್ನು ಕೊಟ್ಟು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲ. ಅದಕ್ಕಾಗಿಯೇ ಸರ್ಕಾರಿ ಆಸ್ಪತ್ರೆಗಳು ಅಗತ್ಯವಿದೆ. ನನ್ನನ್ನೂ ಒಳಗೊಂಡಂತೆ ಬಹುತೇಕ ರಾಜಕಾರಣಿಗಳು ಸರ್ಕಾರಿ ಆಸ್ಪತ್ರೆಗೆ ಹೋಗಲ್ಲ. ಹಣವಿರುವವರು ಎಲ್ಲಿಗೆ ಬೇಕಾದರೂ ಹೋಗಿ ಚಿಕಿತ್ಸೆ ಪಡೆಯಬಹುದು. ಆದರೆ ಬಡವರು ಎಲ್ಲಿಗೆ ಹೋಗಲು ಸಾಧ್ಯ? ರಾಜ್ಯದ ಏಳು ಕೋಟಿ ಜನರೂ ಆರೋಗ್ಯವಾಗಿರಬೇಕು, ಇದೇ ನಮ್ಮ ಆಶಯ ಎಂದು ಹೇಳಿದ್ದಾರೆ.
ಸಣ್ಣವರಿಗೂ ಬಿಪಿ, ಶುಗರ್ ಬರ್ತಿದೆ!
ಈ ಹಿಂದೆ ಸಕ್ಕರೆ ಕಾಯಿಲೆ, ರಕ್ತದೊತ್ತಡ ಶ್ರೀಮಂತರ ಕಾಯಿಲೆ ಎನ್ನುತ್ತಿದ್ದರು. ಈಗ ಬಡವರಿಗೆ ಹಾಗೂ ಸಣ್ಣ ವಯಸ್ಸನವರಿಗೂ ಬರಲು ಶುರುವಾಗಿದೆ. ಊಟದ ಕ್ರಮದಲ್ಲಿ ಬದಲಾವಣೆಯಾಗಿದ್ದು, ದೈಹಿಕ ವ್ಯಾಯಾಮ ಕೂಡ ಇಲ್ಲವಾಗಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಕ್ರೀಡೆಗಳಲ್ಲಿ ಇರಲೇಬೇಕು. ಕ್ರೀಡಾಪಟುಗಳಿಗೂ ಸಾಮಾನ್ಯ ಜನರಿಗೂ ವ್ಯತ್ಯಾಸವನ್ನು ಸುಲಭವಾಗಿ ಗುರುತಿಸಬಹುದು. ಆರೋಗ್ಯ ಬಹಳ ಮುಖ್ಯ. ವಯಸ್ಸಿಗೆ ಸರಿಯಾಗಿ ದೈಹಿಕ ವ್ಯಾಯಾಮವಿಲ್ಲದೆ, ಆಹಾರ ಪದ್ದತಿಯನ್ನು ಉತ್ತಮವಾಗಿಟ್ಟುಕೊಳ್ಳದೇ ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಹಿಂದೆ ನಾನು ಹಣಕಾಸು ಮಂತ್ರಿಯಾಗಿದ್ದಾಗ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸ್ಥಾಪಿಸುವ ತೀರ್ಮಾನ ಮಾಡಿದ್ದೆ. ಈಗ ಪ್ರಸ್ತುತ 22 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳನ್ನು ಸ್ಥಾಪಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಸಮುದಾಯದವರಿಗೂ ಪ್ರಾತಿನಿಧ್ಯ ನೀಡಲು, ಇಂತಹ ಆಸ್ಪತ್ರೆಗಳಲ್ಲಿ ವೈದ್ಯರು ಕಾರ್ಯನಿರ್ವಹಿಸಲು ಮೀಸಲಾತಿ ವ್ಯವಸ್ಥೆಯಾಗುತ್ತದೆ. ಸೂಕ್ತ ಅವಕಾಶ ದೊರೆತರೆ, ಎಲ್ಲರೂ ಜೀವನದಲ್ಲಿ ಅಭಿವೃದ್ಧಿ ಹೊಂದಬಹುದು. ಸಮಾಜದಲ್ಲಿ ಅಶಕ್ತರಿಗೆ ಬದುಕುವ ಅವಕಾಶವನ್ನು ಸರ್ಕಾರ ಕಲ್ಪಿಸುತ್ತಿದೆ ಎಂದು ಭರವಸೆ ನೀಡಿದ್ದಾರೆ.
300 ಕೋಟಿ ರೂಪಾಯಿ ವೆಚ್ಚದಲ್ಲಿ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯನ್ನು ಶಂಕುಸ್ಥಾಪನೆ ಮಾಡಿ, ನಮ್ಮ ಅವಧಿಯಲ್ಲಿಯೇ ಉದ್ಘಾಟನೆಯನ್ನೂ ನೆರವೇರಿಸಲಾಗುವುದು. ಉತ್ತಮ ಜೀವನ ಶೈಲಿ ಹಾಗೂ ಆಹಾರ ಪದ್ಧತಿ ಪಾಲಿಸುವುದರಿಂದ ಸದೃಢ ಆರೋಗ್ಯವನ್ನು ಪಡೆಯಬಹುದು. ಕ್ಯಾನ್ಸರ್ ರೋಗಕ್ಕೆ ಆರಂಭಿಕ ಹಂತದಲ್ಲಿದ್ದರೆ ಗುಣಪಡಿಸಬಹುದು. ವೈಜ್ಞಾನಿಕ ಸಂಶೋಧನೆಗಳಿಂದ ಅನೇಕ ಕಾಯಿಲೆಗಳಿಗೆ ಔಷಧಿ ಕಂಡುಹಿಡಿಯಲಾಗುತ್ತಿದೆ ಎಂದು ಹೇಳಿದ್ದಾರೆ.
ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ವಹಣೆ, ಸ್ವಚ್ಚತೆ ಉತ್ತಮವಾಗಿರಬೇಕು. ಉತ್ತಮ ಆರೋಗ್ಯ ಸೇವೆ ಸಿಗುವಂತಾಗಬೇಕು. ಉತ್ತಮ ಜನಸಂಪರ್ಕ ಹೊಂದುವುದರಿಂದ ಆಸ್ಪತ್ರೆಗೆ ಸಾರ್ವಜನಿಕರಿಂದ ದೇಣಿಗೆಯೂ ದೊರೆಯಲಿದೆ. ಆ ಮೂಲಕ ಗುಣಮಟ್ಟದ ಸೇವೆಗಳನ್ನು ಆಸ್ಪತ್ರೆ ನೀಡಲು ಸಹಾಯವಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications