'ಆಪರೇಷನ್‌ ಕಮಲʼಕ್ಕೆ ಸಿದ್ದರಾಮಯ್ಯ ಟಾಂಗ್‌; ಸಿಎಂ ಹೇಳಿದ್ದಿಷ್ಟು?

ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯವರು 100 ಕೋಟಿ ರೂಪಾಯಿ ಆಫರ್‌ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ಗಣಿಗ ರವಿ ಮಾಡಿದ್ದ ಆರೋಪ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿತ್ತು. ಈ ವಿಚಾರವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ಪಕ್ಷ ರಾಜ್ಯದಲ್ಲಿ ಈ ಹಿಂದೆಯೂ ಅಧಿಕಾರ ಹಿಡಿದಿರುವುದು ಆಪರೇಷನ್‌ ಕಮಲ ಮಾಡಿಯೇ, ಈಗಲೂ ಅದೇ ಪ್ರಯತ್ನವನ್ನು ಮಾಡುತ್ತಿದೆ. ಆದರೆ ಈ ಬಾರಿ ಆಪರೇಷನ್‌ ಕಮಲ ಆಗದ ಮಾತು ಎಂದು ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ನಮ್ಮ ಶಾಸಕರು ದುಡ್ಡಿನ ಆಸೆಗೆ ಬಲಿಯಾಗುವುದಿಲ್ಲ. ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಶಾಸಕ ರವಿ ಗಣಿಗ ನನ್ನ ಬಳಿಯೂ ಹೇಳಿದ್ದಾರೆ ಎಂದಿದ್ದಾರೆ.

CM Siddaramaiah Said That Our MLAs Will Not Be Lured By Money

ರಾಜ್ಯದಲ್ಲಿ ಬಿಜೆಪಿಯವರು ಎಂದಿಗೂ ಜನಾಶೀರ್ವಾದದಿಂದ ಅಧಿಕಾರಕ್ಕೆ ಬಾರದೇ, ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ 2008, 2018ರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಯವರು ಇಂತಹ ಪ್ರಯತ್ನಕ್ಕೆ ಈಗಲೂ ಕೈಹಾಕಿದ್ದು, 136 ಶಾಸಕರ ಬಲವಿರುವ ನಮ್ಮ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭದ ಮಾತಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕುರಿತು ಮಾತನಾಡಿ, ಬಿ.ವೈ.ವಿಜಯೇಂದ್ರ ಹೇಳಿದ್ದಾರೆ ಎಂದು ರಾಜೀನಾಮೆ ನೀಡಲು ಸಾಧ್ಯವೇ? ನಾಳೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಆದೇಶವನ್ನು ನಿರೀಕ್ಷಿಸಲಾಗಿದೆ ಎಂದಿದ್ದಾರೆ.

ಅಲ್ಲದೆ, ನಾಳೆ ಸರ್ಕಾರದ ಎಲ್ಲ ಸಚಿವರು, ಶಾಸಕರು, ಪರಿಷತ್ ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ಹಾಗೂ ನಿರಾಣಿ ಮೇಲಿನ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಒತ್ತಾಯಿಸಲಿದ್ದಾರೆ. ಇವರೆಲ್ಲರ ಪ್ರಕರಣಗಳಲ್ಲಿ ವಿಚಾರಣೆಯಾಗಿ ಚಾರ್ಜ್‌ಶೀಟ್ ಹಾಕುವ ಪ್ರಕ್ರಿಯೆ ಮಾತ್ರ ಬಾಕಿ ಇದ್ದು, ಅನುಮತಿ ಸಿಗಬೇಕಿದೆ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

CM Siddaramaiah Said That Our MLAs Will Not Be Lured By Money

ಕೇಂದ್ರ ಒಪ್ಪಿದರೆ ಮಹದಾಯಿ ಶುರು: ಮಹದಾಯಿ ಯೋಜನೆಗೆ ಚಾಲನೆ ನೀಡಲು ಸರ್ಕಾರ ಸಿದ್ಧವಿದೆ. ಆದರೆ ಕೇಂದ್ರದಿಂದ ಪರಿಸರ ತೀರುವಳಿ ನೀಡುವುದು ಬಾಕಿ ಇದ್ದು, ತೀರುವಳಿ ನೀಡಿದ ತಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಿನ್ನೆ 16ನೇ ಹಣಕಾಸು ಆಯೋಗದವರೊಂದಿಗೆ ಸಭೆ ನಡೆದಿದ್ದು, ತೆರಿಗೆ ಹಂಚಿಕೆ ಹಾಗೂ ವಿಶೇಷ ಅನುದಾನಗಳ ಬಗ್ಗೆ ರಾಜ್ಯದ ನಿಲುವನ್ನು ಅವರಿಗೆ ಸ್ಪಷ್ಟಪಡಿಸಲಾಗಿದೆ ಎಂದಿದ್ದಾರೆ.

15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದರ ಬಗ್ಗೆ ನವದೆಹಲಿಯಲ್ಲಿ ಸರ್ಕಾರ ಪ್ರತಿಭಟನೆ ನಡೆಸಿತ್ತು. ಆಯೋಗ ಶಿಫಾರಸ್ಸು ಮಾಡಿದ್ದ 11,495 ಕೋಟಿ ರೂಪಾಯಿ ರಾಜ್ಯಕ್ಕೆ ಬಿಡುಗಡೆ ಆಗಿರಲಿಲ್ಲ. ಕಳೆದ ಐದು ವರ್ಷಗಳಿಂದ ರಾಜ್ಯಕ್ಕೆ ಸುಮಾರು 80,000 ಕೋಟಿ ರೂ. ನಷ್ಟವಾಗಿದೆ. ಈ ಕೊರತೆಯನ್ನು ಸರಿದೂಗಿಸಲು ನಿನ್ನೆ ನಡೆದ ಸಭೆಯಲ್ಲಿ ಆಯೋಗದವರಿಗೆ ವಿವರಿಸಲಾಗಿದೆ. 16ನೇ ಹಣಕಾಸಿನ ಆಯೋಗದವರು ಹಿಂದಿನ ಹಣಕಾಸಿನ ಆಯೋಗದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಅನುದಾನದ ಕೊರತೆಯನ್ನು ಸರಿದೂಗಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+