ಅವರಿಗೆ ಇನ್ನು ಅನ್ನಭಾಗ್ಯದ ಅಗತ್ಯವಿಲ್ಲ..! ಸಿಎಂ ಸಿದ್ದರಾಮಯ್ಯ ಶಾಕಿಂಗ್ ಹೇಳಿಕೆ
ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೇ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾಗಿದೆ. ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಮತ್ತೆ ಪುನರುಚ್ಛರಿಸಿದ್ದಾರೆ.
ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದಾರೆ. ಜಿಡಿಪಿಯಲ್ಲಿ ಇಡೀ ದೇಶದಲ್ಲಿ ನಾವೇ ಮೊದಲ ಸ್ಥಾನದಲ್ಲಿದ್ದೇವೆ. ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ ಎಂದಿದ್ದಾರೆ.

ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗದಿ ಮಾಡುವಂತಾಗಬೇಕು. ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗಳಿಗೆ ಅವರೇ ಬೆಲೆ ನಿಗದಿ ಮಾಡುತ್ತಾರೆ. ಇದೇ ಅಧಿಕಾರ ನಮ್ಮ ರೈತರಿಗೂ ಸಿಗಬೇಕು ಎಂದು ಸಿಎಂ ಆಶಿಸಿದ್ದಾರೆ.
ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ, ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ನಿಗದಿ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದು ಸಲಹೆ ನೀಡಿದ್ದಾರೆ.

ಈ ದೇಶಕ್ಕೆ ಸಿಕ್ಕ ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ, ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು ಎನ್ನುವುದು ಅಂಬೇಡ್ಕರ್ ಅವರ ಆಶಯ. ಈ ಕಾರಣಕ್ಕೆ ನಾವು ಅನ್ನಭಾಗ್ಯ ಮತ್ತು ಆರ್ಥಿಕ ಶಕ್ತಿ ಕೊಡುವ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಬಡ ಕುಟುಂಬದವರ ಮತ್ತು ನಮ್ಮ ಹೆಣ್ಣು ಮಕ್ಕಳ ಹಣ ಉಳಿತಾಯ ಆಗಲಿ ಎನ್ನುವ ಕಾರಣದಿಂದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ನಮ್ಮ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಕೈಯಲ್ಲಿ ಕಾಸಿದ್ದರೆ ಅಲ್ಲವೇ ನಮ್ಮ ಜನ ಖರೀದಿಸಲು ಮುಂದಾಗೋದು? ಅದಕ್ಕಾಗಿ ಜನರ ಕೈಯಲ್ಲಿ ಕಾಸು ಇರುವ ಯೋಜನೆ ಜಾರಿ ಮಾಡಿದ್ದೇವೆ ಎಂದಿದ್ದಾರೆ.
ಕೆ.ಆರ್.ಪೇಟೆಗೆ ಅಭಯ: ಇನ್ನು ಕೆ.ಆರ್.ಪೇಟೆಯಲ್ಲಿ ಹಾಳಾಗಿರುವ ರಸ್ತೆ, ಕೆರೆ, ಸೇತುವೆಗೆ ಹಣ ಕೊಡಬೇಕು ಎನ್ನುವ ಮನವಿ ಬಂದಿದೆ. ನಾವು ಬೇಡಿಕೆಗೆ ತಕ್ಕಷ್ಟು ಹಣವನ್ನು ಖಂಡಿತವಾಗಿಯೂ ಬಿಡುಗಡೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಪ್ರತೀ ಲೀಟರ್ ಹಾಲಿಗೆ 5 ರೂಪಾಯಿ ಸಹಾಯಧನ ಜಾರಿ ಮಾಡಿದ್ದು ನಾವು. ದಿನಕ್ಕೆ ರಾಜ್ಯದಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಹಾಗಾಗಿ ಪ್ರತೀ ದಿನ 5 ಕೋಟಿ ರೂಪಾಯಿಯನ್ನು ಹಾಲು ಉತ್ಪಾದಕರಿಗೆ ನೀಡುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ನಾವು ಒಂದು ಕಡೆ ರೈತರಿಗೆ ಶಕ್ತಿ ತುಂಬುತ್ತಿದ್ದರೆ, ಮತ್ತೊಂದೆಡೆ ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಎಸಗುತ್ತಿದೆ. ರಾಜ್ಯದ ರೈತರಿಗೆ ನಬಾರ್ಡ್‌ನಿಂದ ಕೊಡುವ ಸಬ್ಸಿಡಿ ಸಾಲದ ಪ್ರಮಾಣವನ್ನು ಶೇ.58ರಷ್ಟು ಕಡಿತಗೊಳಿಸಿದೆ. ಬರೀ ಭಾಷಣ ಮಾಡಿದರೆ ರೈತರ ಬದುಕು ಉದ್ಧಾರ ಆಗಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications