₹13,000 ಕೋಟಿ ರೂಪಾಯಿ ಸಹಿತ ಇಲ್ಲಿ ಅಭಿವೃದ್ಧಿ ಯೋಜನೆಗಳು ಜಾರಿ: ಸಿದ್ದರಾಮಯ್ಯ...KKRDB
ಬೆಂಗಳೂರು, ಜೂನ್ 14: ಕರ್ನಾಟಕದ ವರ್ಷಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ (KKRDB) ಈವರೆಗೆ ₹13,000 ಕೋಟಿ ಹಣ ನೀಡಿದ್ದೇವೆ. ಕೊಟ್ಟ ಭರವಸೆಯಂತೆ ನಡೆದುಕೊಂಡಿದ್ದೇವೆ. ಲವು ಕಾಮಗಾರಿಗಳ ಫಲ ಜನರಿಗೆ ತಲುಪಿದೆ. ಮಂಡಳಿಗೆ ಕೊಡುವ ಈ ಅನುದಾನದ ಹೊರತಾಗಿ ಸರ್ಕಾರ ಈ ಭಾಗಕ್ಕೆ ಇಲಾಖಾವಾರು ಕಾರ್ಯಕ್ರಮಗಳಿಗೆ ಅನುದಾನ ನೀಡುತ್ತಲೇ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿಯಲ್ಲಿ "ಆರೋಗ್ಯ ಆವಿಷ್ಕಾರ" ಯೋಜನೆಯಡಿ ₹440 ಕೋಟಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಪ್ರತಿ ವರ್ಷ KKRDB ಗೆ ₹5,000 ಕೋಟಿ ರೂ. ಕೊಡುವುದಾಗಿ ಚುನಾವಣೆ ವೇಳೆ ಭರವಸೆ ನೀಡಿದ್ದೆವು. ನಮ್ಮ ಭರವಸೆಯಂತೆ ಇಲ್ಲಿಯವರೆಗೂ ₹13,000 ಕೋಟಿ ಹಣ ನೀಡಿದ್ದೇವೆ. ಇಲ್ಲಿಯವರೆಗೂ 5,300 ಕೋಟಿ ವೆಚ್ಚವಾಗಿತ್ತು, ಹಲವು ಕಾಮಗಾರಿಗಳ ಫಲ ಜನರಿಗೆ ತಲುಪಿದೆ. ಕೆ.ಕೆ.ಆರ್.ಡಿ.ಬಿ.ಗೆ ಕೊಡುವ ಈ ಅನುದಾನದ ಹೊರತಾಗಿ ಸರ್ಕಾರ ಈ ಭಾಗಕ್ಕೆ ಇಲಾಖಾವಾರು ಕಾರ್ಯಕ್ರಮಗಳಿಗೆ ಅನುದಾನ ನೀಡುತ್ತಲೇ ಇದೆ.
₹440.63 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ
ನಂಜುಂಡಪ್ಪ ಅವರ ವರದಿಯ ಆಶಯಗಳನ್ನು ನಮ್ಮ ಸರ್ಕಾರ ಮಾಡುತ್ತಿದೆ. ಆರೋಗ್ಯ, ಶಿಕ್ಷಣ, ಉದ್ಯೋಗದಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಸಾಧಿಸುವ ಜೊತೆಗೆ ಮೂಲಭೂತ ಸೌಕರ್ಯಗಳ ಯೋಜನೆಗೆ ಹಣ ವಿನಿಯೋಗ ಮಾಡಲು ಸೂಚನೆ ನೀಡಿದ್ದೇನೆ. ಇದರ ಪ್ರಕಾರ ಅಕ್ಷರ ಆವಿಷ್ಕಾರವು ಇಂದು ₹440.63 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

42 ಆಸ್ಪತ್ರೆಗಳು ಮೇಲ್ದರ್ಜೆಗೆ
ಕೊಲ್ಲೂರು ಮಲ್ಲಪ್ಪ ಅವರ ಸ್ಮಾರಕಕ್ಕೆ ಜಾಗ ಕೊಟ್ಟಿದ್ದೇವೆ. ಮಲ್ಲಪ್ಪ ಅವರು ಕಲ್ಯಾಣ ಕರ್ನಾಟಕದ ಗಾಂಧಿ ಎಂದು ಕರೆಸಿಕೊಂಡವರು. ಸ್ವಾತಂತ್ರ್ಯ ಹೋರಾಟಗಾರರಾದ ಇವರ ಸ್ಮಾರಕ ಆಗಬೇಕು ಎಂದು ಸೂಚನೆ ನೀಡಿದ್ದೇನೆ. 42 ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವ, ಹೊಸ ಆಸ್ಪತ್ರೆಗಳ ನಿರ್ಮಾಣ ಆಗುತ್ತಿದೆ. ಈ ಭಾಗದ ಆರೋಗ್ಯ ಸವಲತ್ತು ವಿಸ್ತರಿಸಲು ಒಟ್ಟು ₹847 ಕೋಟಿ ಕೊಡಲು ಸರ್ಕಾರ ಯೋಜನೆ ರೂಪಿಸಿದೆ.
ರಾಜ್ಯದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎಂಬ ಬಿಜೆಪಿಯ ಎಲ್ಲಾ ಸುಳ್ಳುಗಳಿಗೆ ಜನರೇ ಉತ್ತರ ನೀಡುತ್ತಿದ್ದಾರೆ. ಏಕೆಂದರೆ ನಾವು ಅಭಿವೃದ್ಧಿಗೆ ಕೊಟ್ಟಿರುವ ಹಣ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿದೆ. ಬೆಲೆ ಏರಿಕೆಗೆ ಕಾರಣವಾಗಿರುವುದು ಕೇಂದ್ರದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ. ಮೋದಿಯವರು ಬರುವ ಮೊದಲು ಚಿನ್ನ, ಪೆಟ್ರೋಲ್, ಡೀಸೆಲ್, ಔಷಧ, ರಸಗೊಬ್ಬರ, ಅಡುಗೆ ಎಣ್ಣೆ, ಅಡುಗೆ ಅನಿಲದ ಬೆಲೆ ಎಷ್ಟಿತ್ತು ? ಮೋದಿಯವರು ಬಂದ ಬಳಿಕ ಎಷ್ಟು ಏರಿಕೆಯಾಗಿದೆ ನೋಡಿ. ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ ಅವರೇ ಅನ್ನುವುದರಲ್ಲಿ ಅನುಮಾನವಿಲ್ಲ ಎಂದು ದೂರಿದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಾಡಿಲ್ಲ: ಸಿಎಂ ಆರೋಪ
ಸುಳ್ಳೇ ಬಿಜೆಪಿಯ ಮನೆ ದೇವರು. ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ. ಬಿಜೆಪಿ 371(ಜೆ) ಗೆ ವಿರುದ್ಧವಿತ್ತು. ಉಪ ಪ್ರಧಾನಿ ಆಗಿದ್ದ ಎಲ್.ಕೆ.ಅಡ್ವಾಣಿ ಅವರು 371(ಜೆ) ಜಾರಿ ಎಂದು ಪತ್ರ ಬರೆದಿದ್ದರು. ಕೊನೆಗೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂಸಿಂಗ್ ಅವರ ಹೋರಾಟಕ್ಕೆ ಮಾನ್ಯತೆ ನೀಡಿ 371(ಜೆ) ಜಾರಿ ಮಾಡಿದರು.
ಸಾಧನೆ ಮಾಡಿ ತೋರಿಸುತ್ತೇವೆ: ಸಿಎಂ
ನಾವು ಬಸವಣ್ಣನವರ ಆಶಯದ ಪ್ರಕಾರ ನುಡಿದಂತೆ ನಡೆಯುತ್ತೇವೆ. ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಐದು ಗ್ಯಾರಂಟಿಗಳು ಸೇರಿ 200 ಭರವಸೆಗಳನ್ನು ನೀಡಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಎಲ್ಲಾ ಭರವಸೆಗಳನ್ನು ಭರವಸೆ ನೀಡಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಸಾಧಿಸಿ ತೋರಿಸುತ್ತೇವೆ.
ಜಿಎಸ್‌ಟಿ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿರುವುದು ಆರ್ಥಿಕವಾಗಿ ರಾಜ್ಯ ಪ್ರಗತಿ ಪಥದಲ್ಲಿರುವುದಕ್ಕೆ ಸಾಕ್ಷಿ. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಮನಮೋಹನ್ ಸಿಂಗ್ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸಂವಿಧಾನ ತಿದ್ದುಪಡಿ ಮಾಡಿ 371 ಜೆ ಜಾರಿ ಮಾಡಿದರು. ಮಲ್ಲಿಕಾರ್ಜುನ ಖರ್ಗೆ, ದಿವಂಗತ ಧರಂ ಸಿಂಗ್ ಅವರ ಶ್ರಮ' ಮತ್ತು ಹೋರಾಟ 371ಜೆ ಜಾರಿ ಹಿಂದೆ ಕೆಲಸ ಮಾಡಿದೆ ಎಂದು ತಿಳಿಸಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications