Siddaramaiah: ಬರ ಪರಿಹಾರ ನೀಡದೇ ಕಟುಕನ ವರ್ತನೆ: ಅನುದಾನ ನೀಡದಿರಲು ಇಲ್ಲಿವೇ ಕಾರಣ: CM
ಬೆಂಗಳೂರು, ಜನವರಿ 05: ಕರ್ನಾಟಕದಲ್ಲಿ ಕಳೆದ ಆರು ತಿಂಗಳಿನಿಂದ ಬರಪೀಡಿತ ಪ್ರದೇಶದ ರೈತರು ಕಡುಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಗ್ಯಾರೆಂಟಿ ಯೋಜನೆಗಳಿಂದ ಉಸಿರಾಡುತ್ತಿರುವ ಜನರಿಗೆ ಪರಿಹಾರ ನೀಡದೇ ಕೇಂದ್ರ ಸರ್ಕಾರ ಕಟುಕನಂತೆ ವರ್ತಿಸುತ್ತಿದೆ. ಮನವಿ ಪತ್ರಕ್ಕೆ ಸ್ಪಂದಿಸದೇ ಸತಾಯಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಬರ ಪರಿಹಾರ ವಿಚಾರವಾಗಿ ಬಿಜೆಪಿಯ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಮೇಲಿನ ಆರೋಪಕ್ಕೆ ತಿರುಗೇಟು ನೀಡಿದರು.

ಬರಪರಿಹಾರ ಬಿಡುಗಡೆಗೆ ಕೇಂದ್ರ ಬಿಜೆಪಿ ಸರ್ಕಾರದ ಆರ್ಥಿಕ ದುಸ್ಥಿತಿ ಕಾರಣ ಎಂದು ಬೊಮ್ಮಾಯಿ ಅವರು ಹೇಳಬೇಕಾಗಿತ್ತು, ಬಾಯಿ ತಪ್ಪಿ ಕೇಂದ್ರ ಸರ್ಕಾರದ ಬದಲಿಗೆ ರಾಜ್ಯ ಸರ್ಕಾರ ಎಂದು ಹೇಳಿದಂತೆ ಕಾಣುತ್ತಿದೆ.
ರಾಜ್ಯದ ರೈತರು ಬರಗಾಲದ ಬವಣೆಯಿಂದ ತತ್ತರಿಸಿಹೋಗಿದ್ದಾರೆ. ಬರಪರಿಹಾರದ ಕೆಲಸಗಳಿಗಾಗಿ 18,177 ಕೋಟಿ ರೂಪಾಯಿಗಳನ್ನು ನೀಡಲು ಮೂರು ತಿಂಗಳಿನಿಂದ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದ್ದೇವೆ. ಪತ್ರ ಬರೆದಿದ್ದೇವೆ, ಇಲ್ಲಿಯವರೆಗೂ ನಯಾಪೈಸೆ ಹಣ ನೀಡಿಲ್ಲ. ಕೇಂದ್ರ ಸರ್ಕಾರದ ಇಂತಹ ಕಠಿಣ ನಿಲುವಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ದ್ವೇಷದ ರಾಜಕಾರಣ ಕಾರಣ ಇರಬಹುದು. ಇಲ್ಲದೆ ಇದ್ದರೆ ಕೇಂದ್ರ ಸರ್ಕಾರದ ಆರ್ಥಿಕ ದುಸ್ಥಿತಿ ಕಾರಣವಾಗಿರಬಹುದು. ಅದೇನು ಎನ್ನುವುದನ್ನು ಬೊಮ್ಮಾಯಿಯವರೇ ರಾಜ್ಯದ ಜನತೆಗೆ ಸ್ಪಷ್ಟಪಡಿಸಿದ್ದಾರೆ ಎಂದು ಟೀಕಿಸಿದರು.
ಮಳೆಗಾಲ ಕಳೆದುಹೋಗಿ ರಾಜ್ಯ ಬೇಸಿಗೆ ಕಾಲಕ್ಕೆ ಕಾಲಿಡುತ್ತಿದೆ. ಕಳೆದ ಆರು ತಿಂಗಳಿಂದ ಬರಪೀಡಿತ ಪ್ರದೇಶದ ರೈತರು ಕಡುಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಬರಪೀಡಿತ ರೈತ ಕುಟುಂಬಕ್ಕೆ ತಲಾ ಎರಡು ಸಾವಿರ ರೂಪಾಯಿ ನಗದಿನ ಜೊತೆ ಸಾಧ್ಯ ಇರುವ ಎಲ್ಲ ನೆರವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಅನ್ನಭಾಗ್ಯವೂ ಸೇರಿದಂತೆ ನಮ್ಮ ಗ್ಯಾರಂಟಿ…
— CM of Karnataka (@CMofKarnataka) January 5, 2024
ರಾಜ್ಯ ವಿರೋಧಿ ನೀತಿಯಿಂದ ಅನ್ಯಾಯ
ಮಳೆಗಾಲ ಕಳೆದುಹೋಗಿ ರಾಜ್ಯ ಬೇಸಿಗೆ ಕಾಲಕ್ಕೆ ಕಾಲಿಡುತ್ತಿದೆ. ಕಳೆದ ಆರು ತಿಂಗಳಿನಿಂದ ಬರಪೀಡಿತ ಪ್ರದೇಶದ ರೈತರು ಕಡುಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಬರಪೀಡಿತ ರೈತ ಕುಟುಂಬಕ್ಕೆ ತಲಾ ಎರಡು ಸಾವಿರ ರೂಪಾಯಿ ನಗದು ಜೊತೆ ಸಾಧ್ಯವಿರುವ ಎಲ್ಲ ನೆರವನ್ನು ರಾಜ್ಯ ಸರ್ಕಾರ ನೀಡುತ್ತಿದೆ.

ಅನ್ನಭಾಗ್ಯವೂ ಸೇರಿದಂತೆ ನಮ್ಮ ಗ್ಯಾರಂಟಿ ಯೋಜನೆಗಳಿಂದ ಜನತೆ ಕಷ್ಟ-ನಷ್ಟದ ನಡುವೆಯೂ ಉಸಿರಾಡುವಂತಾಗಿದೆ. ಹೀಗಿದ್ದರೂ ಕಟುಕನಂತೆ ವರ್ತಿಸುತ್ತಿರುವ ಕೇಂದ್ರದ ಸರ್ಕಾರ ಬರಪರಿಹಾರ ನೀಡದೆ ಸತಾಯಿಸುತ್ತಿದೆ. ಕೇಂದ್ರ ಸರ್ಕಾರದ ರಾಜ್ಯ ವಿರೋಧಿ ನೀತಿಯಿಂದಾಗಿ ತೆರಿಗೆ ಹಂಚಿಕೆಯಲ್ಲಿಯೂ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.
ತೆರಿಗೆ ಹಂಚಿಕೆಯಲ್ಲಿನ ಅನ್ಯಾಯದ ಲೆಕ್ಕ ಕೊಟ್ಟ ಸಿಎಂ
ಜಿಎಸ್‌ಟಿ ಪಾವತಿಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದ್ದರೂ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯ ಈಗ ಜಗಜ್ಜಾಹೀರಾಗಿದೆ. ಸ್ಥಳೀಯ ಸಂಸ್ಥೆಗಳು, ವಿಪತ್ತು ನಿರ್ವಹಣೆ ಮತ್ತು ಆರೋಗ್ಯ ಕ್ಷೇತ್ರಗಳಿಗೆ 2021-22ರಿಂದ 2023-24ರವರೆಗೆ ಮೂರು ವರ್ಷಗಳ ಅವಧಿಗೆ 29,110 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕಾಗಿತ್ತು, ಬಿಡುಗಡೆಗೊಳಿಸಿದ್ದು ಕೇವಲ 11,449 ಕೋಟಿ ರೂಪಾಯಿಗಳು ಎಂದು ಮುಖ್ಯಮಂತ್ರಿಗಳು ದೂರಿದರು.
ವಿಪತ್ತು ನಿರ್ವಹಣೆಗೆ ಅನುದಾನದ ರೂಪದಲ್ಲಿ ಕೇಂದ್ರ ಸರ್ಕಾರವೇ ನಿಗದಿಯಾಗಿರುವ ವಸ್ತುಗಳನ್ನು ಆಧರಿಸಿ 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ರೂ.4,369 ಕೋಟಿ ನೀಡಬೇಕಾಗಿತ್ತು. ಆದರೆ ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿರುವುದು ಕೇವಲ ರೂ.1,803 ಕೋಟಿ ಮಾತ್ರ.
ಸುಳ್ಳು ಆರೋಪ ಮಾಡಲು ನೈತಿಕತೆ ಇದಿಯೇ?
ಇನ್ನೂ ಆರು ತಿಂಗಳ ಹಿಂದೆ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿದ್ದರು. ಆದರೆ ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಸೊಲ್ಲೆತ್ತುವ ಧೈರ್ಯ ಮಾಡದೆ ರೈತರಿಗೆ ದ್ರೋಹ ಎಸಗಿದ್ದರು. ಇವರಿಗೆ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ನೈತಿಕತೆ ಎಲ್ಲಿದೆ? ಎಂದು ಅವರು ಪ್ರಶ್ನಿಸಿದರು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ತಮ್ಮ ಅಧಿಕಾರಾವಧಿಯ ನಾಲ್ಕು ವರ್ಷಗಳ ಆಳ್ವಿಕೆಯಲ್ಲಿ ದುರಾಡಳಿತ ಮತ್ತು ಭ್ರಷ್ಟಾಚಾರದಿಂದಾಗಿ ಕರ್ನಾಟಕ ರಾಜ್ಯವನ್ನು ದಿವಾಳಿ ಸ್ಥಿತಿಗೆ ತಂದಿದ್ದರು. ಸಾವಿರಾರು ಕೋಟಿ ರೂಪಾಯಿಗಳ ಬಾಕಿ ಬಿಲ್‌ಗಳನ್ನು ನಾವು ಪಾವತಿ ಮಾಡಬೇಕಾಗಿದೆ. ಈಗ ತಮ್ಮ ಪಾಪದ ಹೊರೆಯನ್ನು ನಮ್ಮ ಸರ್ಕಾರದ ಹೆಗಲಿಗೆ ಹೊರಿಸಲು ಬೊಮ್ಮಾಯಿಯವರು ಒಡ್ಡಾಡುತ್ತಿದ್ದಾರೆ.
ಕೇಂದ್ರದಿಂದ ಬರುತ್ತಿದೆ ಅತೀ ಕನಿಷ್ಠ ಅನುದಾನ
ಕನ್ನಡಿಗರು ಕೇಂದ್ರ ಸರ್ಕಾರಕ್ಕೆ 1 ರೂಪಾಯಿ ತೆರಿಗೆ ಪಾವತಿಸಿದರೆ ಕರ್ನಾಟಕದ ಅಭಿವೃದ್ಧಿಗಾಗಿ ವಾಪಾಸ್ ಸಿಗುತ್ತಿರುವುದು ಕೇವಲ 15 ಪೈಸೆ. ಕನ್ನಡಿಗರು ಬೆವರು ಸುರಿಸಿ ದುಡಿದ ದುಡ್ಡನ್ನು ಉತ್ತರದ ರಾಜ್ಯಗಳಿಗೆ ಹಂಚಿಕೆ ಮಾಡಲಾಗುತ್ತಿದೆ ಎಂದು ಅವರು ವಿವರಿಸಿದರು.
ಆರ್ಥಿಕ ವರ್ಷ ಪ್ರಾರಂಭವಾಗಿ 6 ತಿಂಗಳು ಕಳೆದರೂ ಕೇಂದ್ರ ಸರ್ಕಾರದ 61 ಯೋಜನೆಗಳಿಗೆ 23 ಇಲಾಖೆಗಳಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ. ಈ ಅನ್ಯಾಯವನ್ನು ಪ್ರಶ್ನಿಸುವ ಎದೆಗಾರಿಕೆ ಬಸವರಾಜ ಬೊಮ್ಮಾಯಿ ಅವರಿಗಿಲ್ಲ. ತಮ್ಮ ವೈಫಲ್ಯವನ್ನು ಮುಚ್ಚಿಡಲು ಕರ್ನಾಟಕ ಬಿಜೆಪಿ ನಾಯಕರು ನಮ್ಮ ಸರ್ಕಾರದ ವಿರುದ್ಧ ಹುಸಿ ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಮೂಲೆಗುಂಪಾಗಿರುವ ಬೊಮ್ಮಾಯಿ ಅವರಿಗೆ ತನ್ನ ಅಸ್ತಿತ್ವವನ್ನು ತೋರಿಸಲು ಇಂತಹ ಹುಸಿ ಆರೋಪಗಳು ಅನಿವಾರ್ಯವಾಗಿರಬಹುದು ಎಂದು ಲೇವಡಿ ಮಾಡಿದರು.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications