ಪ್ರಧಾನಿಯ ಗಾಢ ನಿದ್ರೆ ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ: ಸಿದ್ದರಾಮಯ್ಯ ಹೀಗಂದಿದ್ದೇಕೆ?
ಬೆಂಗಳೂರು, ಜನವರಿ 16: ಕರ್ನಾಟಕ ಬರಗಾಲ ಪರಿಹಾರ ವಿಚಾರವಾಗಿ ಇತ್ತೀಚೆಗಷ್ಟೆ ಬಿಜೆಪಿ-ಕಾಂಗ್ರೆಸ್ ಮಧ್ಯೆ ವಾಗ್ವಾದ ನಡೆದಿತ್ತು. ಅದಾದ ಬಳಿಕ ಕೇಂದ್ರ ಅನುದಾನ ಲೆಕ್ಕ ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ ಅವರು, ಇದೀಗ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ್ದಾರೆ.
ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ನರೇಂದ್ರ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ ಪ್ರಧಾನಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಂಗಳವಾರ ಟ್ವೀಟ್ ಮಾಡಿರುವ ಅವರು, 'ಪ್ರಧಾನಿಯ ಗಾಢ ನಿದ್ರೆ ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ' #AnswerMadiModi, #WakeUpModi ಎಂದು ಹ್ಯಾಶ್ ಟ್ಯಾಗ್ ಹಾಕಿ ಕೇಂದ್ರ ಸರ್ಕಾರದ ಆಡಳಿತ ಧೋರಣೆ ವಿರುದ್ಧ ಕಿಡಿ ಕಾರಿದ್ದಾರೆ.
ಸದಾ ಪಲಾಯನ ಮಾಡುವ ಪ್ರಧಾನಿ ಮೋದಿ
ಕರ್ನಾಟಕದ ಕಟು ವಾಸ್ತವಕ್ಕೆ ಸ್ಪಂದಿಸದ ಮೋದಿಯಿಂದ ಸದಾ ಪಲಾಯನ ಮಾಡುತ್ತಾರೆ ಎಂದು ಅವರು ಆರೋಪಿಸಿದ್ದಾರೆ. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಸರಿಯಾಗಿ ಅನುದಾನ ಕೊಡುತ್ತಿಲ್ಲ. ಕನ್ನಡಿಗರ ಮಹತ್ವಾಕಾಂಕ್ಷೆಗಳಿಗೆ ಕಿಂಚಿತ್ತು ಬೆಲೆ ನೀಡುತ್ತಿಲ್ಲ. ಇನ್ನೂ ಕೇಂದ್ರದ ಪರಿಹಾರ ಹಣ ಇನ್ನೂ ರೈತರ ಕೈಗೆ ತಲುಪಿಲ್ಲ ಎಂದು ರಾಜ್ಯದ ಬರಗಾಲ ಪರಿಹಾರ ಕುರಿತು ಮನವಿ ಮಾಡಿದರೂ ಕೇಂದ್ರ ಸ್ಪಂದಿಸಿಲ್ಲ ಎಂದು ಅವರು ದೂರಿದರು.
ಪ್ರಧಾನಿಯ ಗಾಢ ನಿದ್ರೆ
— Siddaramaiah (@siddaramaiah) January 16, 2024
ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ
ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ನರೇಂದ್ರ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ.
ಕರ್ನಾಟಕದ ಕಟು ವಾಸ್ತವಕ್ಕೆ ಸ್ಪಂದಿಸದ ಮೋದಿಯಿಂದ ಸದಾ ಪಲಾಯನ
- ಕೇಂದ್ರವು… pic.twitter.com/q37nCcijbn
ಪ್ರಧಾನಿ ಮತ್ತು ಸಂಸದರ ಮಂತ್ರಿ ಇದು
ಪ್ರಧಾನಿ ನರೇಂದ್ರ ಮೋದಿ ಮಂತ್ರವಿಷ್ಟೇ ಕಡೆಗಣಿಸು, ನಿರ್ಲಕ್ಷಿಸು, ನಿದ್ರಿಸು, ಮತ್ತದನ್ನೇ ಪುನರಾವರ್ತಿಸು!. ಇನ್ನು ಬಿಜೆಪಿ ಸಂಸದರ ಮಂತ್ರ ಬಾಯಿಗೆ ಬೀಗ ಹಾಕಿಕೊಂಡಿರುವುದು, ಮೋದಿಯದ್ದೇ ಜಪ ಮಾಡಿಕೊಂಡಿರು, ಕನ್ನಡಿಗರ ನಂಬಿಕೆಗೆ ದ್ರೋಹ ಬಗೆಯುತ್ತಿರುವುದು. ಮೋದಿ ನಿಶ್ಚಿಂತೆಯಿಂದ ನಿದ್ರಿಸಲು ಮತ್ತದನ್ನೇ ಪುನರಾವರ್ತಿಸು. ಹೀಗೆಂದು ಪ್ರಧಾನಿ ಮೋದಿಯ ಜೊತೆಗೆ ಬಿಜೆಪಿ ರಾಜ್ಯ ಸಂಸದರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಎದ್ದೇಳಿ, ಪ್ರಧಾನಮಂತ್ರಿಯವರೇ! ಕರ್ನಾಟಕದ ನ್ಯಾಯಯುತ ಪಾಲನ್ನು ಕೊಡಬೇಕಾದ ಸಮಯವಿದು ಎಂದು ತಿವಿದಿದ್ದಾರೆ. ಕರ್ನಾಟಕದಲ್ಲಿ ಬರಗಾಲ ಬಂದಾಗ ಪರಿಹಾರಕ್ಕಾಗಿ ಸಿಎಂ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಅದಾದ ಬಳಿಕ ರಾಜ್ಯದಿಂದ ತೆರಿಗೆ ಕೇಂದ್ರ ಸರ್ಕಾರಕ್ಕೆ ಎಷ್ಟು ಹೋಗುತ್ತದೆ. ಅಲ್ಲಿಂದ ಕರ್ನಾಟಕಕ್ಕೆ ಎಷ್ಟು ಪಾಲು ಸಿಗುತ್ತದೆ ಎಂಬೆಲ್ಲ ವಿಚಾರವನ್ನು ತಿಳಿಸಿದ್ದರು.












Click it and Unblock the Notifications