T20 World Cup: ಸ್ಕಾಟ್ಲೆಂಡ್ ಜೆರ್ಸಿ ಮೇಲೆ ರಾರಾಜಿಸಿದ ‘ನಂದಿನಿ’ ಲೋಗೋ: ಸಿದ್ದರಾಮಯ್ಯ ಏನಂದ್ರು?
ಬೆಂಗಳೂರು, ಮೇ 16: ಅಮೆರಿಕದಲ್ಲಿ ಜೂನ್ 1ರಿಂದ ಆರಂಭವಾಗಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಅಂತರರಾಷ್ಟ್ರೀಯ ಕ್ರಿಕೆಟಿಗರ ಜರ್ಸಿಯಲ್ಲಿ ಭಾರತೀಯ ಭಾಷೆಯೊಂದನ್ನು ಪ್ರದರ್ಶಿಸಲಾಗುವುದು. ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್‌ನ ಆಟಗಾರರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಕೆಎಂಎಫ್‌ನ ನಂದಿನಿಯ ಲಾಂಛನವಿರುವ ಜೆರ್ಸಿಯನ್ನು ಧರಿಸಿ ಕಣಕ್ಕಿಳಿಯಲಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಸಂತಸ ವ್ಯಕ್ತಪಡಿಸಿದ್ದು, ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ.

ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿ ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಸವನ್ನ ವ್ಯಕ್ತಪಡಿಸಿದ್ದಾರೆ.
ನಂದಿನಿಯ ಮಾತೃ ಸಂಸ್ಥೆಯಾದ ಕರ್ನಾಟಕ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ಅವರು ಮಾತನಾಡಿ, ಸ್ಕಾಟ್ಲೆಂಡ್ ಪುರುಷರ ಕ್ರಿಕೆಟ್ ತಂಡದ ಟಿ20 ವಿಶ್ವಕಪ್ ಅಭಿಯಾನಕ್ಕಾಗಿ ಪಾಲುದಾರರಾಗಲು ನಾವು ತುಂಬಾ ಉತ್ಸುಕರಾಗಿದ್ದೇವೆ. ನಂದಿನಿಯು ಶ್ರೇಷ್ಠತೆ ಮತ್ತು ಶುದ್ಧತೆಯನ್ನು ಪ್ರತಿನಿಧಿಸುತ್ತದೆ ಮತ್ತು ಕಳೆದ ನಲವತ್ತು ವರ್ಷಗಳಲ್ಲಿ ನಾವು ಜಾಗತಿಕ ಬ್ರಾಂಡ್ ಆಗಿ ಬೆಳೆದಿದ್ದೇವೆ ಎಂದು ಹೇಳಿದ್ದಾರೆ.
ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ.
— Siddaramaiah (@siddaramaiah) May 16, 2024
ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ… pic.twitter.com/CG7UhDtmLM
ಸ್ಕಾಟ್ಲೆಂಡ್ ಜೊತೆ ಪಾಲುದಾರಿಕೆಯು ನಂದಿನಿ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ತಲುಪಿಸಲು ಸಹಾಯ ಮಾಡುತ್ತದೆ. ನಮ್ಮ ಬ್ರ್ಯಾಂಡ್ ಅನ್ನು ವಿಶ್ವದಾದ್ಯಂತ ಹೆಚ್ಚಿನ ದೇಶಗಳಿಗೆ ಕೊಂಡೊಯ್ಯುವಲ್ಲಿ ಇದು ಮೊದಲ ಹೆಜ್ಜೆ. ಭಾರತದಲ್ಲಿ ಎರಡನೇ ಅತಿ ದೊಡ್ಡ ಡೈರಿ ಬ್ರ್ಯಾಂಡ್ ಆಗಿ, ಭಾರತ ಮತ್ತು ಜಗತ್ತಿಗೆ ಪೌಷ್ಟಿಕ ಮತ್ತು ಗುಣಮಟ್ಟದ ಡೈರಿ ಉತ್ಪನ್ನಗಳನ್ನು ಪೂರೈಸಲು ಉತ್ಸುಕರಾಗಿದ್ದೇವೆ ಎಂದಿದ್ದಾರೆ.












Click it and Unblock the Notifications