Waqf Board: ರೈತರ ತಂಟೆಗೆ ಹೋಗಬೇಡಿ; ವಕ್ಫ್‌ ಬೋರ್ಡ್‌ಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ವಕ್ಫ್‌ ಬೋರ್ಡ್ ರೈತರಿಗೆ ನೋಟಿಸ್ ಕೊಟ್ಟ ಬಳಿಕ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈಗಾಗಲೇ ಈ ವಿಚಾರ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿದೆ. ಹಲವು ಕಡೆಗಳಲ್ಲಿ ಪಂಚಾಯಿತಿ ಕಚೇರಿಗಳು, ದೇವಸ್ಥಾನಗಳ ಜಾಗಗಳು ಕೂಡ ತಮಗೆ ಸೇರಿದ್ದೆಂದು ವಕ್ಫ್ ಬೋರ್ಡ್ ನೋಟಿಸ್‌ ಕೊಟ್ಟಿದ್ದು ಭಾರಿ ವಿವಾದಕ್ಕೆ ಕಾರಣವಾಗಿದೆ. ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ರೈತರ ತಂಟೆಗೆ ಹೋಗದಂತೆ ಖಡಕ್ ಸೂಚನೆ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಸರ್ಕಾರದ ಸಚಿವರು ಮತ್ತು ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಯಾವುದೇ ಕಾರಣಕ್ಕೂ ರೈತರ ತಂಟೆಗೆ ಹೋಗಬಾರದು, ಈಗ ಕೊಟ್ಟಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡಯಬೇಕು ಎಂದು ಸೂಚನೆ ಕೊಟ್ಟಿದ್ದಾರೆ.

CM Siddaramaiah Stops Waqf Board Notices to Farmers

ಸಿಎಂ ಸಿದ್ದರಾಮಯ್ಯ ಟ್ವೀಟ್‌

ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, "ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯಬೇಕು. ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು. ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ಸಣ್ಣ ತೊಂದರೆಯನ್ನೂ ನೀಡಬಾರದು." ಎಂದು ಸೂಚನೆ ಕೊಟ್ಟಿರುವುದಾಗಿ ತಿಳಿಸಿದ್ದಾರೆ.

ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳಿಂದ ರೈತರಿಗೂ ಬೇಸರವಾಗಿದೆ. ಈ ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಆ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ ಎಂದು ಅವರು ಹೇಳಿದ್ದಾರೆ.

ಉದ್ದೇಶಪೂರ್ವಕವಾಗಿ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನತೆ ಸೊಪ್ಪು ಹಾಕಬಾರದು ಎಂದು ಮನವಿ ಮಾಡಿದ್ದಾರೆ. ಈ ವಿಚಾರವನ್ನು ಇಟ್ಟುಕೊಂಡು ಕೆಲವರು ಅಪಪ್ರಚಾರ ಕೂಡ ಮಾಡುತ್ತಿದ್ದು ಜನ ಅದಕ್ಕೆ ಕಿವಿಗೊಡಬಾರದು, ಅಧಿಕಾರಿಗಳು ಕೂಡ ಈ ಬಗ್ಗೆ ಎಚ್ಚರ ವಹಿಸಬೇಕು, ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.

ಕಾನೂನು ಬಾಹಿರವಾಗಿ ಹಾಗೂ ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ರೈತರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+