ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ

Posted By: Gururaj
Subscribe to Oneindia Kannada

ಬೆಂಗಳೂರು, ಆಗಸ್ಟ್. 23 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಗೃಹ ಕಚೇರಿಯಲ್ಲಿ ಅವರು ಕೆಲಸ ಮಾಡಲು ಆರಂಭಿಸಿದ್ದಾರೆ. ಸಂಜೆಅಖಿಲ ಭಾರತ ವೀರಶೈವ ಮಹಾ ಸಭಾದ ಪದಾಧಿಕಾರಿಗಳನ್ನು ಭೇಟಿ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ.

ಸಿದ್ದರಾಮಯ್ಯಗೆ ಶೀತ, ಜ್ವರ : ಸಿದ್ದರಾಮಯ್ಯ ಶೀತ, ಜ್ವರದಿಂದ ಬಳಲುತ್ತಿದ್ದು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ. ಆದ್ದರಿಂದ, ಬುಧವಾರ ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ಸಿದ್ದರಾಮಯ್ಯ ಅವರಿಗೆ ಮಂಗಳವಾರ ಮಧ್ಯಾಹ್ನವೇ ಶೀತ, ಜ್ವರ ಕಾಣಿಸಿಕೊಂಡಿತ್ತು. ಆದ್ದರಿಂದ, ಮಧ್ಯಾಹ್ನದ ಎಲ್ಲಾ ಕಾರ್ಯಕ್ರಮ ರದ್ದುಗೊಳಿಸಲಾಗಿತ್ತು.

CM Siddaramaiah suffering from fever, all programme of August 23 cancelled

ಬುಧವಾರವೂ ಸಂಪೂರ್ಣ ಗುಣಮುಖರಾಗದ ಹಿನ್ನಲೆಯಲ್ಲಿ ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಬೆಂಗಳೂರಿನ ನಿವಾಸದಲ್ಲಿಯೇ ಅವರು ಇದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ.

ಸಿದ್ದರಾಮಯ್ಯ ಇಂದಿನ ಕಾರ್ಯಕ್ರಮಗಳು

* ಬೆಳಗ್ಗೆ10.30: "ಶಾಲೆಯ ಅಂಗಳದಲ್ಲೇ ತಾರಾಲಯ" ಸಂಚಾರಿ ಡಿಜಿಟಲ್ ತಾರಾಲಯ ಉದ್ಘಾಟನಾ ಸಮಾರಂಭ

ಸ್ಥಳ: ಬ್ಯಾಂಕ್ವೆಟ್ ಹಾಲ್, ವಿಧಾನ ಸೌಧ

* ಮಧ್ಯಾಹ್ನ 12ಕ್ಕೆ ಬೆಳಗಾವಿ ಜಿಲ್ಲಾ ಪ್ರವಾಸ

* ಮಧ್ಯಾಹ್ನ 2.30ಪರಮ ಪೂಜ್ಯ ಆಚಾರ್ಯ ಶ್ರೀ ಶಾಂತಿಸಾಗರ ಮಹಾರಾಜರ 62ನೇ ಪುಣ್ಯತಿಥಿ ಸಮಾರಂಭ. ಸ್ಥಳ : ಶಮನೇವಾಡಿ ಗ್ರಾಮ, ಚಿಕ್ಕೋಡಿ ತಾಲೂಕು, ಬೆಳಗಾವಿ

* ಸಂಜೆ 6.30ಬೆಳಗಾವಿಯಿಂದ ಬೆಂಗಳೂರಿಗೆ ವಾಪಸ್

* ರಾತ್ರಿ 8ಕ್ಕೆ ಅಖಿಲ ಭಾರತ ವೀರಶೈವ ಮಹಾ ಸಭಾದ ಪದಾಧಿಕಾರಿಗಳ ನಿಯೋಗದ ಭೇಟಿ

ಸ್ಥಳ : ಗೃಹ ಕಚೇರಿ ಕೃಷ್ಣಾ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Chief Minister Siddaramaiah suffering from cold and fever all programme of August 23, 2017 cancelled.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ