Muda Scam: ಸಿದ್ದರಾಮಯ್ಯಗೆ ಲೋಕಾಯುಕ್ತ ಸಮನ್ಸ್: ಸಿಎಂಗೆ ಮತ್ತಷ್ಟು ಸಂಕಷ್ಟ
ಬೆಂಗಳೂರು, ನವೆಂಬರ್ 04: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ( ಮುಡಾ)ದಲ್ಲಿನ ನಿವೇಶನ ಹಂಚಿಕೆ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಿಂದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಈ ಪ್ರಕರಣ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತಷ್ಟು ಕಗ್ಗಂಟಾಗುತ್ತಿದ್ದು, ಇದೀಗ ನೇರವಾಗಿ ವಿಚಾರಣೆ ಎದುರಿಸಬೇಕಾದ ಸಂದರ್ಭ ಬಂದಿದೆ.
ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣ ಪ್ರಕರಣದಲ್ಲಿ ತನಿಖೆಯ ಮುಂದುವರಿದ ಭಾಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವೆಂಬರ್ 6 ಬುಧವಾರದಂದು ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಪೊಲೀಸರು ಸಮನ್ಸ್ ನೀಡಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ನವೆಂಬರ್ 6ರ ಬೆಳಗ್ಗೆ ಮೈಸೂರಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಮನ್ಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಲೋಕಾಯುಕ್ತ ಎಸ್.ಪಿ. ಟಿ.ಜೆ. ಉದೇಶ್ ಪ್ರಜಾವಾಣಿಯೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ, ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನಿನ ಮಾಲೀಕ ದೇವರಾಜು ವಿರುದ್ಧ ಆರೋಪ ಕೇಳಿಬಂದಿತ್ತು.

ಈಗಾಗಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಸೂಚನೆಯಂತೆ ಲೋಕಾಯುಕ್ತ ಪೊಲೀಸರು ಈ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಅಲ್ಲದೇ ಮುಂದಿನ ತಿಂಗಳ ಅಂತ್ಯಕ್ಕೆ ಪ್ರಕರಣದ ಸಂಪೂರ್ಣ ವರದಿಯನ್ನು ನ್ಯಾಯಾಲಯಕ್ಕೆ ಲೋಕಾಯುಕ್ತ ಪೊಲೀಸರು ಸಲ್ಲಿಸಬೇಕಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತದಿಂದ ತನಿಖೆ ಮತ್ತಷ್ಟು ಚುರುಕುಗೊಂಡಿದೆ.
ಇನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ನಿವೇಶನ ಹಂಚಿಕೆ ಹಗರಣದಲ್ಲಿ ಆರೋಪ ಎದುರಿಸುತ್ತಿರುವವರ ಪೈಕಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ, ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನಿನ ಮಾಲೀಕ ದೇವರಾಜು ಹಾಗೂ ಇತರರ ವಿಚಾರಣೆ ಈಗಾಗಲೇ ಮುಗಿದಿದೆ. ಇನ್ನು ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆ ಬಾಕಿಯಿದ್ದು, ನವೆಂಬರ್ 6 ಬುಧವಾರದಂದು ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಪೊಲೀಸರು ಸಮನ್ಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.












Click it and Unblock the Notifications