Karnataka By Election Results: 3 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು, ನವೆಂಬರ್‌ 23: ತೀವ್ರ ಕುತೂಹಲ ಮೂಡಿಸಿದ್ದ ಶಿಗ್ಗಾವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದೆ. ಮೂರು ಕ್ಷೇತ್ರಗಳಲ್ಲಿ ಸೋಲು ಕಂಡಿರುವ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ತೀವ್ರ ಮುಖಭಂಗವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

20 ಸುತ್ತಿನಲ್ಲಿ ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯೋಗೇಶ್ವರ್ ಒಟ್ಟು 1,12,642 ಮತಗಳನ್ನು ಪಡೆಯುವ ಮೂಲಕ ಜಯಭೇರಿ ಸಾಧಿಸಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿಗೆ ಮತ್ತೊಮ್ಮೆ ಸೋಲಿನ ಹಾದಿ ತೋರಿಸಿದ್ದಾರೆ.

CM Siddaramaiah Thanks To Shiggaon Channapatna Sandur Voters

19 ಸುತ್ತಿನಲ್ಲಿ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಈ ತುಕಾರಾಮ್ ಗೆಲುವು ಸಾಧಿಸಿದ್ದಾರೆ. ಅನ್ನಪೂರ್ಣ ಈ ತುಕಾರಾಮ್ 93,616 ಮತಗಳನ್ನು ಪಡೆದುಕೊಂಡಿದ್ದು, ಬಿಜೆಪಿಯ ಬಂಗಾರು ಹನುಮಂತು ಅವರನ್ನು 9,649 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಇನ್ನು ಶಿಗ್ಗಾಂವಿ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಯಾಸಿರ್ ಅಹ್ಮದ್‌ಖಾನ್‌ ಒಟ್ಟು 1,00,756 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಭರತ್‌ ಬೊಮ್ಮಾಯಿ ಅವರನ್ನು 13,448 ಮತಗಳ ಅಂತದಲ್ಲಿ ಸೋಲಿಸಿದ್ದಾರೆ. ಒಟ್ಟಾರೆಯಾಗಿ ಆಡಳಿತಾರೂಢ ಕಾಂಗ್ರೆಸ್‌ ಪಕ್ಷ ಈ ಚುನಾವಣೆಯಲ್ಲಿ ತನ್ನ ವರ್ಚಸ್‌ ಅನ್ನು ಉಳಿಸಿಕೊಂಡಿದೆ. ಮೂರು ಕ್ಷೇತ್ರಗಳಲ್ಲಿ ಮತ ನೀಡಿ ಗೆಲ್ಲಿಸಿರುವ ಮತದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ.

CM Siddaramaiah Thanks To Shiggaon Channapatna Sandur Voters

'ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿ ಪೂರ್ವಕ ಧನ್ಯವಾದಗಳು. ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ್‌, ಅನ್ನಪೂರ್ಣ ತುಕಾರಾಮ್‌ ಹಾಗೂ ಸಿ.ಪಿ. ಯೋಗೇಶ್ವರ್‌ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.

ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ. ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು' ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+