ಸಿದ್ದು ಸಂಪುಟಕ್ಕೆ ವಿಜಯನಗರದ ಶಾಸಕ ಎಂ ಕೃಷ್ಣಪ್ಪ ಎಂಟ್ರಿ

ಬೆಂಗಳೂರು, ಸೆ. 04: ಗಣೇಶ ಹಬ್ಬದ ದಿನದಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ವಿಸ್ತರಣೆ ಮಾಡಲು ನಿರ್ಧರಿಸಿದ್ದಾರೆ. ಬೆಂಗಳೂರಿನ ವಿಜಯನಗರ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ಅವರು ನೂತನ ಸಚಿವರಾಗಿ ಸೋಮವಾರದಂದು ಸಿದ್ದರಾಮಯ್ಯ ಅವರ ಕ್ಯಾಬಿನೆಟ್ ಸೇರಲಿದ್ದಾರೆ.

ಸೋಮವಾರ ಸಂಜೆ 4 ಗಂಟೆಗೆ ರಾಜಭವನದಲ್ಲಿ ನಡೆಯುವ ಪ್ರಮಾಣ ವಚನ ಸ್ವೀಕರ ಸಮಾರಂಭದಲ್ಲಿ ಕೃಷ್ಣಪ್ಪ ಅವರು ಕಾಂಗ್ರೆಸ್ ಸರ್ಕಾರದ ನೂತನ ಸಚಿವರಾಗಲಿದ್ದಾರೆ. ಈ ನಡುವೆ ಪಶು ಸಂಗೋಪನಾ ಖಾತೆ ಸಚಿವ ಅರಕಲಗೂಡು ಮಂಜು ಹಾಗೂ ಗಣಿಗಾರಿಕೆ ಸಚಿವ ವಿನಯ್ ಕುಲಕರ್ಣಿ ಅವರಿಗೆ ಬಡ್ತಿ ನೀಡಿ ಕ್ಯಾಬಿನೆಟ್ ದರ್ಜೆಗೇರಿಸಲಾಗಿದೆ. [ಹೊಸ ಸಚಿವರಿಗೆ ಜವಾಬ್ದಾರಿ: ಯಾರಿಗೆ ಯಾವ ಖಾತೆ?]

CM Siddaramaiah to induct MLA Krishnappa into his Cabinet
ಒಟ್ಟು 14 ಹಾಲಿ ಸಚಿವರನ್ನು ಸಂಪುಟದಿಂದ ಕೈ ಬಿಟ್ಟು, 13 ಶಾಸಕರನ್ನು ಸಿದ್ದರಾಮಯ್ಯ ಅವರು ಸಂಪುಟಕ್ಕೆ ಸೇರಿಸಿಕೊಂಡಿದ್ದರು. ಜೊತೆಗೆ ಸಚಿವ ಸ್ಥಾನಕ್ಕೆ ಕೆಜೆ ಜಾರ್ಜ್ ಅವರು ರಾಜೀನಾಮೆ ನೀಡಿದ್ದರು. [ಮೊದಲ ಬಾರಿ ಸಚಿವರಾದ 7 ಶಾಸಕರ ಪರಿಚಯ]

ಬಾಕಿ ಉಳಿದಿರುವ ಸ್ಥಾನವನ್ನು ತುಂಬಲು ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆ. ಎಂ ಕೃಷ್ಣಪ್ಪ ಅವರ ಸೇರ್ಪಡೆ ಜೊತೆಗೆ ಖಾತೆ ಹಂಚಿಕೆ ಪ್ರಕ್ರಿಯೆಗೂ ಮತ್ತೆ ಚಾಲನೆ ಸಿಗಲಿದ್ದು, ಕೃಷ್ಣಪ್ಪ ಅವರಿಗೆ ವಸತಿ ಖಾತೆ ಮೇಲೆ ಕಣ್ಣಿದೆ.

ಕೃಷ್ಣಪ್ಪ ಅವರಿಗೆ ಸಚಿವ ಸ್ಥಾನ ಸಿಗಲಿಲ್ಲ ಎಂದು ಜೂನ್ ತಿಂಗಳಲ್ಲಿ ಎಂ ಕೃಷ್ಣಪ್ಪ ಅವರ ಬೆಂಬಲಿಗರಿಂದ ಭಾರಿ ಪ್ರತಿಭಟನೆ ಕಂಡು ಬಂದಿತ್ತು. ಮೆಟ್ರೋ ನಿಲ್ದಾಣಕ್ಕೆ ನುಗ್ಗಿ ಗಲಾಟೆ ನಡೆಸಿದ್ದರು.. ರಸ್ತೆಗಳಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ, ಕೃಷ್ಣಪ್ಪ ಅವರಿಗೆ ಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.(ಒನ್ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+