ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದು ಏನು?
ಶ್ರೀರಾಮ ಭಕ್ತರಿಗೆ ಜನವರಿ 22, 2024 ಎಂದೆಂದಿಗೂ ಮರೆಯಲು ಆಗದು. ಯಾಕಂದ್ರೆ ಈ ಯುಗದಲ್ಲೇ ಶ್ರೀರಾಮನ ಭಕ್ತರಿಗೆ ಈ ದಿನ ಅವಿಸ್ಮರಣೀಯ. ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ಉದ್ಘಾಟನೆ ಆಗುತ್ತಿದೆ. ಇದೇ ಸಮಯದಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಶ್ರೀರಾಮ ಮಂದಿರ ಉದ್ಘಾಟನೆ ಬಗ್ಗೆ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಸಿದ್ದರಾಮಯ್ಯ ಅವರು ಹೇಳಿದ್ದಾದರೂ ಏನು? ಮುಂದೆ ಓದಿ.
ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಹಬ್ಬದ ವಾತಾವರಣ ನಿರ್ಮಾಣ ಆಗಿದ್ದು ಸಂಭ್ರಮ ಮೇಳೈಸಿದೆ. ಕೆಲವೇ ಗಂಟೆಯಲ್ಲಿ ಶತಕೋಟಿ ಶ್ರೀರಾಮ ಭಕ್ತರ ಕನಸು ಈಡೇರಲಿದೆ. ಹೀಗಿದ್ದಾಗ ಕನ್ನಡಿಗರ ನೆಲದಲ್ಲೂ ಖುಷಿ ಇದೆ. ಆದರೆ ಈ ವೇಳೆ ಭದ್ರತೆ ಬಗ್ಗೆ ಚರ್ಚೆಗಳೂ ಶುರುವಾಗಿವೆ. ಹೀಗಿದ್ದಾಗ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಅಂದಹಾಗೆ ಇದೀಗ ಸಿಎಂ ಸಿದ್ದರಾಮಯ್ಯ ಹೇಳಿದ್ದು ಏನು? ಬನ್ನಿ ಆ ಕುರಿತಾಗಿ ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯೋಣ.

ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದೇನು?
ಹೌದು, ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಹೇಳಿರುವಂತೆ, 'ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.' ಎಂದು ಭದ್ರತೆ ಬಗ್ಗೆ ಮಾಹಿತಿ ನೀಡಿದ್ದಾರೆ.
ತಪ್ಪು ಮಾಡುವವರಿಗೆ ಖಡಕ್ ವಾರ್ನಿಂಗ್
'ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ತಕ್ಷಣ ಆತುರಕ್ಕೆ ಬಿದ್ದು ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕಪ್ರಸಂಗತನವನ್ನು ಮಾಡಬಾರದು.' ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
ವಿಜಯೇಂದ್ರ ವಿರುದ್ಧವೂ ಸಿಎಂ ಗರಂ!
'ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಹೊಣೆಯಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಶಾಂತಿ ಕಾಪಾಡಿಕೊಂಡು ಬರಬೇಕೆಂಬ ಸದಾಶಯಕ್ಕಿಂತ ಹೆಚ್ಚಾಗಿ ಬೆದರಿಕೆ ಮತ್ತು ಪ್ರಚೋದನೆಯ ದನಿ ಇದೆ. ಸರ್ಕಾರಕ್ಕೆ ಅದರ ಕರ್ತವ್ಯದ ಅರಿವಿದೆ. ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತದೆ.' ಎಂದು ತಿಳಿಸಿದ್ದಾರೆ ಸಿಎಂ ಸಿದ್ದರಾಮಯ್ಯ.

'ಬಿಜೆಪಿಯ ಕೆಲವು ಶಾಸಕರು, ಸಂಸದರು ಈಗಾಗಲೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಸರ್ಕಾರ ಗಮನಿಸಿದೆ. ಇಂತಹವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಕಠಿಣ ಕ್ರಮಗಳನ್ನು ಕೈಗೊಂಡರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸರ್ಕಾರದ ಕೆಲಸ ಸುಲಭವಾಗುತ್ತದೆ. ದೇವರು - ಧರ್ಮ - ಪೂಜೆ - ಆರಾಧನೆಗಳೆಲ್ಲ ವೈಯಕ್ತಿಕವಾದುದು. ಇದನ್ನು ವೈಯಕ್ತಿಕ ಮಟ್ಟದಲ್ಲಿಯೇ ಉಳಿಸಿಕೊಂಡರೆ ದೇವರು - ಧರ್ಮ ಎಲ್ಲರಿಗೂ ಗೌರವ ಮತ್ತು ಸಮಾಜಕ್ಕೂ ಕ್ಷೇಮ. ಇದು ಎಲ್ಲ ಧರ್ಮಾನುಯಾಯಿಗಳಿಗೂ ಅನ್ವಯಿಸುತ್ತದೆ.' ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.












Click it and Unblock the Notifications