Congress CLP Meeting: ಬಸವರಾಜ ರಾಯರೆಡ್ಡಿಯನ್ನ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ 28: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದು ಎರಡು ತಿಂಗಳು ಕಳೆದಿದೆಯಷ್ಟೇ, ಹಲವು ಆಂತರಿಕ ಅಸಮಾಧಾನಗಳು ಬುಗಿಲೆದ್ದಿವೆ. ಈ ಹಿನ್ನೆಲೆ ಶಾಸಕರ ಅಸಮಾಧಾನ ತಣಿಸಲು, ಅವರ ಅಹವಾಲನ್ನು ಆಲಿಸುವ ಸಲುವಾಗಿ ಗುರುವಾರ ರಾತ್ರಿ ಕಾಂಗ್ರೆಸ್‌ ಶಾಸಕಾಂಗ ಸಭೆ ನಡೆಯುತ್ತಿದೆ. ಈ ವೇಳೆ ಸಿದ್ದರಾಮಯ್ಯ ಶಾಸಕ ಬಸವರಾಜ ರಾಯರೆಡ್ಡಿ ಅವರ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಹೌದು, ಕೆಲವು ಮಂದಿ ಸಚಿವರ ವಿರುದ್ದ ಬಹಿರಂಗ ಪತ್ರ ವಿಚಾರವಾಗಿ ಬಸವರಾಜ ರಾಯರೆಡ್ಡಿ ವಿರುದ್ದ ಸಿದ್ದರಾಮಯ್ಯ ಅವರು ಮಾತನಾಡಿದ್ದು, ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕಾಂಗ್ರೆಸ್​ನ ಕೆಲವು ಶಾಸಕರು ಮುಖ್ಯಮಂತ್ರಿಗಳಿಗೆ ಪತ್ರ ಬರೆದ ವಿಚಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆಯಾಗಿದೆ. ಇನ್ನೂ ಮಾಧ್ಯಮಗಳ ಮೂಲಕ ಬಹಿರಂಗ ಅಸಮಾಧಾನ ಹೊರ ಹಾಕಿದ್ದ ಕೆಲ ಶಾಸಕರ ವಿರುದ್ದ ಸಿದ್ದರಾಮಯ್ಯ ಕೆಂಡಾಮಂಡಲವಾದರು.

cm-siddaramaiah

ಇನ್ನೂ ಬಹಿರಂಗ ಪತ್ರ ಬರೆದಿರುವುದಕ್ಕೆ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದು, ಆಪ್ತರಾಗಿರುವ ಬಸವರಾಜ ರಾಯರೆಡ್ಡಿ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿದ ಶಾಸಕ ಬಸವರಾಜ ರಾಯರೆಡ್ಡಿ, 'ಸರ್ ನಾನಲ್ಲ ಪತ್ರ ಬರೆದಿದ್ದು. ಅವರು ಬರೆದಿರುವ ಪತ್ರಕ್ಕೆ ನಾನು ಸಹಿ ಹಾಕಿದ್ದೇನೆ ಅಷ್ಟೆ. ನಿಮ್ಮ ಗಮನ ಸೆಳೆಯಲು ಈ ರೀತಿ ಮಾಡಿದ್ದು ಅಷ್ಟೇ ಸರ್ ಎಂದು ಹೇಳಿದ್ದಾರೆ.

ಇನ್ನೂ ಬಸವರಾಜ ರಾಯರೆಡ್ಡಿ ಮಾತಿಗೆ ಮತ್ತಷ್ಟು ಕೋಪಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ನನ್ನ ಗಮನ ಸೆಳೆಯುವುದಕ್ಕಾದರೆ ನೇರವಾಗಿ ಬಂದು ಮಾತನಾಡಬೇಕಿತ್ತು. ಅದು ಬಿಟ್ಟು ಈ ರೀತಿಯೆಲ್ಲ ಏಕೆ ಮಾಡುತ್ತಿರಿ ಎಂದು ಅಸಮಾಧಾನಗೊಂಡ ಶಾಕಸರ ವಿರುದ್ದ ಕಿಡಿಕಾರಿದ್ದಾರೆ ಎನ್ನಲಾಗಿದೆ.

ಇನ್ನೂ ಕೊಪ್ಪಗೊಂಡ ಸಿದ್ದರಾಮಯ್ಯ ಅವರನ್ನ ಕಂಡ ಕೆಲವು ಶಾಸಕರು ಹಾಗೂ ಬಸವರಾಜ ರಾಯರೆಡ್ಡಿ ಮೌನವಹಿಸಿದರು ಎನ್ನಲಾಗಿದೆ. ಅಲ್ಲದೇ ಇಂತಹವರನ್ನು ನಂಬಿ ರಾಜಕೀಯ ಮಾಡಿದರೆ ಅಷ್ಟೇ, ಎಂದು ಗೊಣಗುತ್ತಲೇ ಕೆಲವು ಮಂದಿ ಕಾಂಗ್ರೆಸ್‌ ಶಾಸಕರು ಸಭೆಯಿಂದ ಹೊರಹೋಗುವ ಮೂಲಕ ಅಸಮಾಧಾನ ಹೊರ ಹಾಕಿದರು.

ಇದಕ್ಕೂ ಮುನ್ನ, ಶಾಸಕರನ್ನು ಉದ್ದೇಶಿಸಿ ಮಾತನಾಡಿದ್ದ ಸಿದ್ದರಾಮಯ್ಯ, ಪ್ರತಿಪಕ್ಷಗಳ ಸುಳ್ಳುಗಳಿಗೆ ದಾಳವಾಗಬೇಡಿ ಎಂದು ಹೇಳಿದ್ದು, ಏನೇ ಅಸಮಾಧಾನ ಇದ್ದರೂ ತಮ್ಮ ಬಳಿ ಖುದ್ದು ಚರ್ಚಿಸುವಂತೆ ಸೂಚಿಸಿದ್ದಾರೆ. ಎಷ್ಟು ಒತ್ತಡಗಳಿದ್ದರೂ ತಿಂಗಳಿಗೊಮ್ಮೆ ಶಾಸಕರ ಸಭೆ ಕರೆಯುತ್ತೇನೆ. ಬಿಜೆಪಿ ಪರಿವಾರ ಸುಳ್ಳಿನ ಕಾರ್ಖಾನೆ. ಮೊದಲು ಸುಳ್ಳನ್ನು ಸೃಷ್ಟಿಸುತ್ತಾರೆ. ಬಳಿಕ ಆ ಸುಳ್ಳನ್ನು ತಮ್ಮ ಸುಳ್ಳಿನ ಪತಿವಾರದ ಮೂಲಕ ಹರಡಿಸುತ್ತಾರೆ. ಕೊನೆಗೆ ಅದೇ ಸುಳ್ಳಿನ ಮೇಲೆ ಮಾಧ್ಯಮಗಳಲ್ಲಿ ಚರ್ಚೆ ಆಗುವಂತೆ ಮಾಡುತ್ತಾರೆ ಈ ಬಗ್ಗೆ ಎಚ್ಚರದಿಂದಿರಿ ಎಂದು ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+