ತಮಿಳು ಭಾಷೆಯಲ್ಲಿ ಟ್ವೀಟ್ ಮಾಡಿದ ಸಿ.ಎಂ ಸಿದ್ದರಾಮಯ್ಯ: ಕರ್ನಾಟಕ - ತಮಿಳುನಾಡು ನಡುವೆ ಹೊಸ ಭಾಷಾ ಬಾಂಧವ್ಯ!

ಸದಾ ಭಾಷೆ ಹಾಗೂ ಜಲವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಕರ್ನಾಟಕ ಮತ್ತು ತಮಿಳುನಾಡಿನ ಸಂಬಂಧ ಕಳೆದ ಎರಡು ದಿನಗಳಿಂದ ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಿದೆ. ಇದರಲ್ಲಿ ಮೊದಲನೆಯದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಕನ್ನಡದಲ್ಲಿ ಟ್ವೀಟ್ ಮಾಡಿದ್ದು. ಇದೀಗ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳು ಭಾಷೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಭಾಷಾ ಸಾಮರಸ್ಯಕ್ಕೆ ಕರ್ನಾಟಕ ಮತ್ತು ತಮಿಳುನಾಡು ಇದೀಗ ಸಾಕ್ಷಿಯಾಗಿದೆ. ಕರ್ನಾಟಕ ಮತ್ತು ತಮಿಳುನಾಡಿನ ಮುಖ್ಯಮಂತ್ರಿಗಳು ಮಾಡಿರುವ ಟ್ವೀಟ್‌ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಂ.ಕೆ. ಸ್ಟಾಲಿನ್ ಅವರೇ, ನಿಮ್ಮ ಆತ್ಮೀಯ ಶುಭಾಶಯಗಳಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ಸಾಮಾಜಿಕ ನ್ಯಾಯ ಮತ್ತು ಒಕ್ಕೂಟ ವ್ಯವಸ್ಥೆಗಾಗಿ ಈ ಸವಾಲಿನ ಸಮಯದಲ್ಲಿ ನಿಮ್ಮ ಧ್ವನಿ ಶ್ಲಾಘನೀಯ. ನಮ್ಮ ದೇಶದ ಸಂವಿಧಾನವನ್ನು ಎತ್ತಿಹಿಡಿಯುವಲ್ಲಿ ಮತ್ತು ನಮ್ಮ ಜನರ ಹಕ್ಕುಗಳನ್ನು ರಕ್ಷಿಸುವಲ್ಲಿ ಕರ್ನಾಟಕ ಮತ್ತು ತಮಿಳುನಾಡು ಒಗ್ಗಟ್ಟಿನಿಂದ ನಿಲ್ಲುತ್ತವೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

CM Siddaramaiah tweeted in Tamil New language bond between Karnataka and Tamil Nadu

ಇನ್ನು ಭಾನುವಾರವಷ್ಟೇ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಕನ್ನಡದಲ್ಲಿ ಟ್ವೀಟ್ ಮಾಡಿ ಗಮನ ಸೆಳೆದಿದ್ದರು. ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ತಿರು (ಶ್ರೀ) ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಾಷಾ ಹಕ್ಕುಗಳನ್ನು ರಕ್ಷಿಸುವಲ್ಲಿ ಮತ್ತು ಸಾಮಾಜಿಕ ನ್ಯಾಯವನ್ನು ಮುನ್ನಡೆಸುವಲ್ಲಿ ನಿಮ್ಮ ಬಲವಾದ ಧ್ವನಿಯು ನಿಜವಾದ ಒಕ್ಕೂಟ ಮತ್ತು ಅಂತರ್ಗತ ಪ್ರಜಾಪ್ರಭುತ್ವದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ.

ಈ ಮೌಲ್ಯಗಳು ಇಂದಿನ ಭಾರತದಲ್ಲಿ ಅಪಾರ ಮಹತ್ವವನ್ನು ಹೊಂದಿವೆ; ಹಾಗೂ ತಮಿಳುನಾಡು ಮತ್ತು ಕರ್ನಾಟಕದ ಜನರು ಅವುಗಳನ್ನು ಎತ್ತಿಹಿಡಿಯುವಲ್ಲಿ ಒಟ್ಟಾಗಿ ನಿಲ್ಲುವುದಾಗಿ ಅವರು ಹೇಳಿದ್ದರು. ಇದರ ಬೆನ್ನಲ್ಲೇ ಸಿ.ಎಂ ಸಿದ್ದರಾಮಯ್ಯ ಅವರು ಸಹ ಸೋಮವಾರ (ಆಗಸ್ಟ್‌ 04)ರಂದು ತಮಿಳು ಭಾಷೆಯಲ್ಲಿ ತಮಿಳುನಾಡಿನ ಸಿಎಂ ಎಂ.ಕೆ ಸ್ಟಾಲಿನ್ ಅವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+